Rohit Sharma: ಹೊಸ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್ ಶರ್ಮಾ
ಭಾರತ ತಂಡದ ನಾಯಕನಾಗಿ ಟಿ20 ವಿಶ್ವಕಪ್ ಗೆದ್ದ ರೋಹಿತ್ ಶರ್ಮಾ, ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿದರೂ, ತಾವು ಟಿ20 ಕ್ರಿಕೆಟ್ ರೀತಿಯೇ ಬ್ಯಾಟಿಂಗ್ ಮಾಡುವುದು ಎನ್ನುವ ಸಂದೇಶ ಕೊಟ್ಟಿದ್ದಾರೆ.
ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಬಳಿಕ, ಏಕದಿನ, ಟೆಸ್ಟ್ ಮಾದರಿಯಲ್ಲಿ ಭಾರತ ತಂಡದ ನಾಯನಕಾಗಿ ಮುಂದುವರೆಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ ಅಬ್ಬರಿಸಿದರು. 47 ಎಸೆತಗಳಲ್ಲಿ 7 ಬೌಂಡರಿ 3 ಸಿಕ್ಸರ್ ಸಹಿತ 58 ರನ್ ಗಳಿಸಿ ಮಿಂಚಿದರು.

ಮೂರು ಸಿಕ್ಸರ್ ಸಿಡಿಸುವ ಮೂಲಕ ಹಿಟ್ ಮ್ಯಾನ್ ಹೊಸ ದಾಖಲೆ ಬರೆದರು. ಏಕದಿನ ಮಾದರಿಯಲ್ಲಿ ಸಾರ್ವಕಾಲಿಕ ಸಿಕ್ಸರ್‌ಗಳ ದಾಖಲೆಯನ್ನು ಮುರಿದಿದ್ದಾರೆ. 33 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅವರು, ಏಕದಿನ ವಿಶ್ವಕಪ್‌ನಲ್ಲಿ ಅಬ್ಬರಿಸಿದ್ದನ್ನು ಅಭಿಮಾನಿಗಳಿಗೆ ನೆನಪಿಸಿದರು.
ಇಯಾನ್ ಮಾರ್ಗನ್ ದಾಖಲೆ ಸರಿಗಟ್ಟಿದ ಹಿಟ್‌ಮ್ಯಾನ್
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ, ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಅವರ ದಾಖಲೆಯನ್ನು ಸರಿಗಟ್ಟಿದರು.
ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನ್ನುವ ಹೊಸ ದಾಖಲೆ ಬರೆದರು. 134 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 233 ಸಿಕ್ಸರ್ ಬಾರಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ. ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ 180 ಇನ್ನಿಂಗ್ಸ್‌ಗಳಲ್ಲಿ 233 ಸಿಕ್ಸರ್ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು, ಆದರೆ ರೋಹಿತ್ ಶರ್ಮಾ ಕೇವಲ 134 ಇನ್ನಿಂಗ್ಸ್‌ಗಳಲ್ಲಿ ಆ ದಾಖಲೆ ಸರಿಗಟ್ಟಿದ್ದಾರೆ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ನಾಯಕನಾಗಿ 334 ಇನ್ನಿಂಗ್ಸ್‌ಗಳಲ್ಲಿ ಎಂಎಸ್ ಧೋನಿ 211 ಸಿಕ್ಸರ್ ಬಾರಿಸಿದ್ದಾರೆ.
ಭಾರತಕ್ಕೆ 231 ರನ್‌ಗಳ ಗುರಿ
ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಭಾರತ ಏಕದಿನ ಸರಣಿಯ ಮೊದಲನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 230 ರನ್‌ಗಳನ್ನು ಕಲೆಹಾಕಿತು.
231 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದರು. 12.4 ಓವರ್ ಗಳಲ್ಲಿ ಭಾರತ ಮೊದಲ ವಿಕೆಟ್‌ಗೆ 75 ರನ್ ಗಳಿಸಿತು. ರೋಹಿತ್ ಶರ್ಮಾ ಬಿರುಸಿನ ಅರ್ಧಶತಕ ಗಳಿಸಿದ ಬಳಿಕ ಔಟಾದರು.












Click it and Unblock the Notifications