'ಐಪಿಎಲ್ 2025ರಲ್ಲಿ ರೋಹಿತ್ ಶರ್ಮಾ ಮುಂಬೈ ಪರ ಆಡಲ್ಲ'
ಐಪಿಎಲ್ ಮುಗಿದಿದೆ ದಿನಗಳೇ ಕಳೆದಿವೆ. ಆದರೆ ಇದಕ್ಕೆ ಸಂಬಂಧಿಸಿದಂತೆ ದಿನವೂ ಒಂದು ನೂತನ ಸುದ್ದಿ ಹೊರ ಬರುತ್ತಲೇ ಇದೆ. ಟೀಮ್ ಇಂಡಿಯಾದ ಮಾಜಿ ಆಟಗಾರ, ಮುಂಬೈ ಇಂಡಿಯನ್ಸ್ ತಂಡದ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಟೀಮ್ ಮ್ಯಾನೇಜ್ಮೆಂಟ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಗುಜರಾತ್ ಟೈಟನ್ಸ್ ತಂಡದಿಂದ ಟ್ರೇಡ್ ಮಾಡಿದ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿತು. ಇದರಿಂದ ಮುಂಬೈ ಡ್ರೆಸ್ಸಿಂಗ್ ರೂಮ್‌ನಲ್ಲಿ ಅಸಮಾಧಾನದ ಹೊಗೆ ಎದ್ದಿತ್ತು. ಹೀಗಾಗಿಯೇ ಮುಂಬೈ ತಂಡದ ಸ್ಟಾರ್ ಪ್ಲೇಯರ್ ಮುಂದಿನ ಸೀಜನ್‌ನಲ್ಲಿ ತವರು ತಂಡದ ಪರ ಆಡುವುದು ಡೌಟ್ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.

ಐಪಿಎಲ್ 2024ರಲ್ಲಿ ರೋಹಿತ್ ಪ್ರದರ್ಶನ
ರಾಷ್ಟ್ರೀಯ ತಂಡವನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ. ರೋಹಿತ್ ಶರ್ಮಾ ಪ್ರಸಕ್ತ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನವನ್ನೇ ನೀಡಿದ್ದಾರೆ. ಅವರು 32.07ರ ಸರಾಸರಿ ಹಾಗೂ 150ರ ಸ್ಟ್ರೈಕ್ ರೇಟ್‌ನಲ್ಲಿ 417 ರನ್ ಸಿಡಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ ಒಂದು ಅರ್ಧಶತಕ ಸೇರಿದೆ.
ಮುಂಬೈ ಪರ ಆಡುವುದು ಡೌಟ್?
ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಂದಿನ ಬಾರಿ ಐಪಿಎಲ್ ಹರಾಜಿಗೂ ಮುನ್ನ ಇಶಾನ್ ಕಿಶನ್ ಅವರನ್ನು ರಿಟೇನ್ ಮಾಡಿಕೊಳ್ಳುವುದು ಡೌಟ್ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಇಶಾನ್ ಅವರನ್ನು ಬೇಕಿದ್ದರೆ, ರೈಟ್ ಟು ಮ್ಯಾಚ್ ಕಾರ್ಡ್ ಬಳಸಿ ಮುಂಬೈ ಪಡೆಯಬಹುದು.
ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ತಮ್ಮ ಕೊನೆಯ ಪಂದ್ಯವನ್ನು ಆಡಿ ಆಗಿದೆ ಎಂದು ಚೋಪ್ರಾ ತಿಳಿಸಿದ್ದಾರೆ. ನನಗೆ ಅನಿಸಿದ ಪ್ರಕಾರ ರೋಹಿತ್ ಶರ್ಮಾ ಮುಂದಿನ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಾಣಿಸಿಕೊಳ್ಳುವುದಿಲ್ಲ ಎಂದು ಚೊಪ್ರಾ ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಆಡಿದ 14 ಪಂದ್ಯಗಳಲ್ಲಿ 4ರಲ್ಲಿ ಗೆಲುವು 10ರಲ್ಲಿ ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಮುಂಬೈ ಪರ ರೋಹಿತ್ ಸಾಧನೆ
ತಮ್ಮ ಆರಂಭಿಕ ಐಪಿಎಲ್ ಪಂದ್ಯಗಳನ್ನು ರೋಹಿತ್ ಶರ್ಮಾ ಡೆಕ್ಕನ್ ಚಾರ್ಜಸ್ ಪರ ಆಡಿದ್ದರು. ನಂತರ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು. ರೋಹಿತ್ ತಮ್ಮ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 2013, 2015, 2017, 2019, 2020 ಚಾಂಪಿಯನ್ ಪಟ್ಟವನ್ನು ತೊಡಿಸಿದ್ದಾರೆ.
ಆರಂಭದ ಮೂರು ಆವೃತ್ತಿಗಳಲ್ಲಿ ಡೆಕ್ಕನ್ ಚಾರ್ಜಸ್ ಪರ ಆಡಿದ ರೋಹಿತ್ ಶರ್ಮಾ, 2011ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು. ಅಲ್ಲದೆ 2013ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡರು. ಇವರು ಮುಂಬೈ ಪರ 212 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 6352 ರನ್ ಸಿಡಿಸಿದ್ದಾರೆ. ಇದರಲ್ಲಿ 45 ಅರ್ಧಶತಕ ಹಾಗೂ ಎರಡು ಶತಕ ಸಹ ಸೇರಿವೆ.
ರೋಹಿತ್ ಶರ್ಮಾ ಈಗಾಗಲೇ ನ್ಯೂಯಾರ್ಕ್ ತಲುಪಿದ್ದಾರೆ. ಇವರೊಂದಿಗೆ ಟೀಮ್ ಇಂಡಿಯಾ ತೆರೆಳಿದ್ದು, ಅಭ್ಯಾಸ ನಡೆಸಿದೆ. ಈಗಾಗಲೇ ಭಾರತ ತಂಡ ಐಪಿಎಲ್ ಮೆಗಾ ಇವೆಂಟ್‌ಗೆ ಅಭ್ಯಾಸವನ್ನು ಆರಂಭಿಸಿದೆ. ಬ್ಲ್ಯೂ ಬಾಯ್ಸ್ ಟಿ20 ವಿಶ್ವಕಪ್‌ನಲ್ಲಿ ತಮ್ಮ ಅಭಿಯಾನವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆರಂಭಿಸಲಿದ್ದಾರೆ. ಇನ್ನು ವಿಶ್ವವೇ ಕಾತುರದಿಂದ ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು ನಡೆಯಲಿದೆ.












Click it and Unblock the Notifications