Rohit Sharma : ಅನಾರೋಗ್ಯದ ಕಾರಣ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ರೋಹಿತ್ ಗೈರು!

ಇಂಡಿಯನ್ ಪ್ರೀಮಿಯರ್ ಲೀಗ್ ಅದ್ದೂರಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಜೈಂಟ್ಸ್ ಮತ್ತು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಆರಂಭಿಕ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎಲ್ಲಾ ತಂಡಗಳ ನಾಯಕರು ಅಹಮದಾಬಾದ್‌ಗೆ ತೆರಳಿದ್ದು, ಐಪಿಎಲ್ ಟ್ರೋಫಿ ಜೊತೆ ಫೋಟೊಗೆ ಫೋಸ್ ನೀಡಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ಫೋಟೋಶೂಟ್‌ನಲ್ಲಿ ಐಪಿಎಲ್‌ನ ಒಂಭತ್ತು ತಂಡಗಳ ನಾಯಕರು ಭಾಗವಹಿಸಿದ್ದರು. ಸನ್‌ರೈಸರ್ಸ್ ಹೈದರಾಬಾದ್ ತಂಡದ ಐಡೆನ್ ಮಾರ್ಕ್ರಾಮ್ ಬದಲಾಗಿ ಭುವನೇಶ್ವರ್ ಕುಮಾರ್ ಫೋಟೋ ಶೂಟ್‌ನಲ್ಲಿ ಭಾಗವಹಿಸಿದ್ದರು. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಮಾತ್ರ ಗೈರಾಗಿದ್ದರು. ಅನಾರೋಗ್ಯದ ಕಾರಣ ಅವರು ಅಹಮದಾಬಾದ್‌ಗೆ ತೆರಳಿರಲಿಲ್ಲ ಎಂದು ತಿಳಿದುಬಂದಿದೆ.

Rohit Sharma Unwell Set to Miss IPL Opening Ceremony And Play In RCB vs MI IPL 2023

ಅನಾರೋಗ್ಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಆದರೆ, ಏಪ್ರಿಲ್ 2ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಖಚಿತ ಎನ್ನಲಾಗಿದೆ. ಇದು ತಂಡದ ಆತಂಕವನ್ನು ದೂರ ಮಾಡಿದೆ.

ಪ್ರಯಾಣ ಮಾಡುವುದನ್ನು ತಪ್ಪಿಸಲು ಈ ನಿರ್ಧಾರ

ಅನಾರೋಗ್ಯದಿಂದ ಬಳಲುತ್ತಿರುವ ಅವರು ಮುಂಜಾಗ್ರತಾ ಕ್ರಮವಾಗಿ ಪ್ರಯಾಣ ಮಾಡದಿರಲು ನಿರ್ಧರಿಸಿದ್ದಾರೆ. ಮುಂಬೈನಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಏಪ್ರಿಲ್ 2ರಂದು ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮುಂಬೈನಲ್ಲಿ ಬುಧವಾರ ಅವರು ಮಾಧ್ಯಮ ಸಂವಾದವನ್ನು ಉದ್ದೇಶಿಸಿ ರೋಹಿತ್ ಮಾತನಾಡಿದ್ದರು.

Rohit Sharma Unwell Set to Miss IPL Opening Ceremony And Play In RCB vs MI IPL 2023

ಐಪಿಎಲ್‌ನ 2023 ರ ಆರಂಭಿಕ ಪಂದ್ಯದ ಮುನ್ನಾದಿನದಂದು, ಎಲ್ಲಾ ಫ್ರಾಂಚೈಸಿ ನಾಯಕರು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಟ್ಟುಗೂಡಿದರು ಮತ್ತು ಟ್ರೋಫಿಯೊಂದಿಗೆ ವಿಶೇಷ ಫೋಟೋಶೂಟ್ ನಡೆಸಿದರು. ಆದರೆ, ರೋಹಿತ್ ಅನುಪಸ್ಥಿತಿ ಅಭಿಮಾನಿಗಳ ಗಮನ ಸೆಳೆಯಿತು. ಕಳೆದ ಬಾರಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಕ್ಯಾಮರಾನ್ ಗ್ರೀನ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಟ್ರಿಸ್ಟನ್ ಸ್ಟಬ್ಸ್, ಟಿಮ್ ಡೇವಿಡ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಸೇರಿದಂತೆ ಸ್ಫೋಟಕ ಆಟಗಾರರಿದ್ದು, ಈ ಬಾರಿ ತಮ್ಮ ಚಾಂಪಿಯನ್ ಆಟವನ್ನು ಮುಂದುವರೆಸುವ ಉತ್ಸಾಹದಲ್ಲಿದೆ.

Rohit Sharma Unwell Set to Miss IPL Opening Ceremony And Play In RCB vs MI IPL 2023

ಐಪಿಎಲ್ 10 ತಂಡಗಳ ನಾಯಕರ ವಿವರ

ಎಂಎಸ್ ಧೋನಿ (ಚೆನ್ನೈ ಸೂಪರ್ ಕಿಂಗ್ಸ್), ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟಾನ್ಸ್), ಶಿಖರ್ ಧವನ್ (ಪಂಜಾಬ್ ಕಿಂಗ್ಸ್), ನಿತೀಶ್ ರಾಣಾ (ಕೋಲ್ಕತ್ತಾ ನೈಟ್ ರೈಡರ್ಸ್), ಕೆಎಲ್ ರಾಹುಲ್ (ಲಖನೌ ಸೂಪರ್ ಜೈಂಟ್ಸ್), ಐಡೆನ್ ಮಾರ್ಕ್ರಾಮ್ (ಸನ್‌ರೈಸರ್ಸ್ ಹೈದರಾಬಾದ್), ಫಾಫ್ ಡು ಪ್ಲೆಸಿಸ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಮತ್ತು ಡೇವಿಡ್ ವಾರ್ನರ್ (ದೆಹಲಿ ಕ್ಯಾಪಿಟಲ್ಸ್) ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್) ನಾಯಕತ್ವದಲ್ಲಿ ಎಲ್ಲಾ ತಂಡಗಳು ಮಿಂಚಲು ಸಿದ್ಧವಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+