Team India: ಎ+ ನಲ್ಲೇ ಉಳಿದ ವಿರಾಟ್, ರೋಹಿತ್‌, ಜಡೇಜಾ; ಶ್ರೇಯಸ್‌ ಅಯ್ಯರ್, ಅಕ್ಷರ್ ಪಟೇಲ್‌ಗೆ ಬಂಪರ್!

ಭಾರತ ತಂಡದ ಆಟಗಾರರ ಬಿಸಿಸಿಐ ಕೇಂದ್ರ ಒಪ್ಪಂದಗಳನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾರ್ಚ್ 29 ರಂದು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ನಿರ್ಧಾರ ಮಾಡಬೇಕಿತ್ತಾದರೂ, ಬಳಿಕ ಸಭೆಯನ್ನು ಮುಂದೂಡಲಾಗಿತ್ತು.

ಆದರೆ ಇದೀಗ ಬಿಸಿಸಿಐ ಕೇಂದ್ರ ಒಪ್ಪಂದದ ಪಟ್ಟಿ ಬಹುತೇಕ ಅಂತಿಮವಾಗಿದ್ದು ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ, ಅಕ್ಷರ್ ಪಟೇಲ್‌ಗೆ ಬಿಸಿಸಿಐ ಕೇಂದ್ರ ಒಪ್ಪಂದಗಳಲ್ಲಿ ಸಿ ದರ್ಜೆಯಿಂದ ಬಿ ದರ್ಜೆಗೆ ಬಡ್ತಿ ನೀಡುವುದು ಖಚಿತವಾಗಿದೆ. ಕಳೆದ ಬಾರಿ ಒಪ್ಪಂದವನ್ನು ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಒಪ್ಪಂದ ಪಡೆಯುವುದು ಖಚಿತವಾಗಿದೆ.

rohit sharma virat kohli jadeja grade a bcci central contracts

ಎ+ನಲ್ಲೇ ಉಳಿದ ರೋಹಿತ್, ಕೊಹ್ಲಿ, ಜಡೇಜಾ

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾರನ್ನು ಎ+ ಗುಂಪಿನಿಂದ ಎ ಗುಂಪಿಗೆ ಇಳಿಸಲಾಗುವುದು ಎನ್ನಲಾಗಿತ್ತು. ಆದರೂ ಮೂವರು ಹಿರಿಯ ಆಟಗಾರರನ್ನು ಎ+ ಗುಂಪಿನಲ್ಲೇ ಉಳಿಸಲಾಗಿದೆ. ಜಸ್ಪ್ರೀತ್ ಬುಮ್ರಾ ಕೂಡ ಎ+ ವಿಭಾಗದಲ್ಲಿದ್ದಾರೆ.

ಉಳಿದಂತೆ ವರುಣ್ ಚಕ್ರವರ್ತಿ, ನಿತೀಶ್ ಕುಮಾರ್ ರೆಡ್ಡಿ ಮತ್ತು ಅಭಿಷೇಕ್ ಶರ್ಮಾ ಅವರಿಗೆ ಬಿಸಿಸಿಐ ಕೇಂದ್ರ ಒಪ್ಪಂದ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಮೂವರು ಭಾರತ ತಂಡದ ಪ್ರತಿಭಾವಂತ ಕ್ರಿಕೆಟಿಗರಾಗಿದ್ದು, ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ಕಳೆದ ವರ್ಷ ಶ್ರೇಯಸ್ ಅಯ್ಯರ್ ಜೊತೆ ಬಿಸಿಸಿಐ ಒಪ್ಪಂದ ಕಳೆದುಕೊಂಡಿರುವ ಇಶಾನ್ ಕಿಶನ್ ಅವರಿಗೆ ಬಿಸಿಸಿಐ ಮಣೆ ಹಾಕುವ ಸಾಧ್ಯತೆ ಕಡಿಮೆ ಇದ್ದು, ಅವರು ಇನ್ನಷ್ಟು ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಪರಿಗಣಿಸುವ ಸಾಧ್ಯತೆ ಇದೆ.

ಆಟಗಾರರ ಸಂಬಳ ಎಷ್ಟು?

ಎ+ ವಿಭಾಗದಲ್ಲಿರುವ ಕ್ರಿಕೆಟಿಗರಿಗೆ ಬಿಸಿಸಿಐ ವರ್ಷಕ್ಕೆ 7 ಕೋಟಿ ರೂಪಾಯಿ ಪಾವತಿಸುತ್ತದೆ. ಎ ವಿಭಾಗದಲ್ಲಿ ಬರುವ ಆಟಗಾರರು ವರ್ಷಕ್ಕೆ 5 ಕೋಟಿ ರೂಪಾಯಿ ಪಡೆಯಲಿದ್ದು, ಬಿ ಗುಂಪಿನ ಆಟಗಾರರು ವರ್ಷಕ್ಕೆ 3 ಕೋಟಿ ರೂಪಾಯಿ ಪಡೆಯಲಿದ್ದಾರೆ ಸಿ ಗುಂಪಿನ ಆಟಗಾರರು ವರ್ಷಕ್ಕೆ 1 ಕೋಟಿ ರೂಪಾಯಿ ಪಡೆಯಲಿದ್ದಾರೆ.

ಬಿಸಿಸಿಐ ಒಪ್ಪಂದ ಪಡೆಯುವ ಸಂಭಾವ್ಯ ಬಳಗ

ಗ್ರೇಡ್ A+ (4 ಆಟಗಾರರು)

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ ಎ (6 ಆಟಗಾರರು)

ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್.

ಗ್ರೇಡ್ ಬಿ (5 ಆಟಗಾರರು)

ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ (15 ಆಟಗಾರರು)

ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವರುಣ್ ಚಕ್ರವರ್ತಿ, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ರಜತ್ ಪಾಟಿದಾರ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+