Rohit Sharma vs Gambhir: ಚಾಂಪಿಯನ್ಸ್ ಟ್ರೋಫಿ ಮೊದಲ ಪಂದ್ಯಕ್ಕೆ ಮುನ್ನವೇ ರೋಹಿತ್-ಗಂಭೀರ್ ಕಿತ್ತಾಟ?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯ ಆರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಬುಧವಾರ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಫೆಬ್ರವರಿ 20 ರಂದು ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಸೆಣೆಸಲಿದ್ದು ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿದೆ. ಮೊದಲನೇ ಪಂದ್ಯಕ್ಕೆ ಮುನ್ನವೇ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ನಡುವೆ ಜಗಳವಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಪಂದ್ಯಾವಳಿಯನ್ನು ಗೆಲ್ಲಲು ಉತ್ತಮ ತಂಡದ ಆಯ್ಕೆ, ಕಠಿಣ ಅಭ್ಯಾಸ ಎಷ್ಟು ಮುಖ್ಯವೋ ಪರಿಸ್ಥಿತಿಗೆ ಅನುಗುಣವಾಗಿ ಪ್ಲೇಯಿಂಗ್ 11 ಆಯ್ಕೆ ಮಾಡುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯಕ್ಕಾಗಿ ಭಾರತದ ಪ್ಲೇಯಿಂಗ್ ಇಲೆವೆನ್ ವಿಚಾರದಲ್ಲಿ ಕೋಚ್ ಗಂಭೀರ್ ಮತ್ತು ನಾಯಕ ರೋಹಿತ್ ನಡುವೆ ತೀವ್ರ ವಾಗ್ವಾದ ನಡೆದಿದೆ.

Rohit sharma vs gambhir india bangladesh champions trophy

ರೋಹಿತ್-ಗಂಭೀರ್ ಕಿತ್ತಾಟ?

ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಈಗಾಗಲೇ ಬಹುತೇಕ ಖಚಿತವಾಗಿದೆ. 10 ಆಟಗಾರರ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲದೇ ಇದ್ದರು ಒಂದು ಸ್ಥಾನಕ್ಕಾಗಿ ಆಟಗಾರರ ಆಯ್ಕೆ ಬಗ್ಗೆ ನಾಯಕ ಮತ್ತು ಕೋಚ್ ನಡುವೆ ಮನಸ್ತಾಪ ಉಂಟಾಗಿದೆ. ಸ್ಪಿನ್ನರ್ ಆಯ್ಕೆ ವಿಚಾರದಲ್ಲಿಯೇ ಈಗ ಪ್ರಶ್ನೆಗಳು ಬಂದಿದ್ದು, ಇಬ್ಬರು ತೀವ್ರ ಚರ್ಚೆ ಮಾಡಿದ್ದಾರೆ.

ಭಾರತವು ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಸೇರಿದಂತೆ ಐದು ಸ್ಪಿನ್ ಆಯ್ಕೆಗಳನ್ನು ಹೊಂದಿದೆ. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಆಲ್‌ರೌಂಡರ್ ಆಗಿದ್ದು ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದಾರೆ. ಉಳಿದಂತೆ ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ನಡುವೆ ಯಾರನ್ನು ಆಡಿಸಬೇಕು ಎನ್ನುವ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ.

ರೋಹಿತ್ ಶರ್ಮಾ ಕುಲದೀಪ್ ಯಾದವ್‌ರನ್ನು ಆಡಿಸಬೇಕು ಎಂದು ವಾದಿಸಿದ್ದರೆ, ಕೋಚ್ ಗಂಭೀರ್ ವರುಣ್ ಚಕ್ರವರ್ತಿ ಪರವಾಗಿ ವಾದಿಸಿದ್ದಾರೆ. ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಚಕ್ರವರ್ತಿ ಏಕದಿನ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ಇಬ್ಬರ ನಡುವೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿದರೂ, ಗಂಭೀರ್ ಅವರ ತೀರ್ಮಾನವೇ ಮುಖ್ಯವಾಗಲಿದೆ ಎಂದು ಹೇಳಲಾಗಿದೆ. ರೋಹಿತ್ ಶರ್ಮಾ ಸದ್ಯ ಉತ್ತಮ ಫಾರ್ಮ್‌ನಲ್ಲಿ ಇಲ್ಲದಿರುವುದು ಗಂಭೀರ್ ಅವರ ಕೈ ಮೇಲಾಗುವಂತೆ ಮಾಡಿದೆ. ಕುಲದೀಪ್ ಯಾದವ್ ಬದಲಾಗಿ ವರುಣ್ ಚಕ್ರವರ್ತಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ.

ಬಾಂಗ್ಲಾದೇಶ ವಿರುದ್ಧ ಭಾರತದ ಸಂಭಾವ್ಯ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಬ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್/ವರುಣ್ ಚಕ್ರವರ್ತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+