RR vs DC: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಗೆಲುವು ಸಾಧಿಸಿದ ರಾಜಸ್ಥಾನ

ಐಪಿಎಲ್ 2024ರ ಆವೃತ್ತಿಯಲ್ಲಿ ತವರಿನ ತಂಡಗಳ ಪ್ರಾಬಲ್ಯ ಮುಂದುವರೆದಿದೆ. ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಈ ಬಾರಿ ಐಪಿಎಲ್‌ನಲ್ಲಿ ಸತತ 9 ಪಂದ್ಯಳಲ್ಲಿ ಆತಿಥೇಯ ತಂಡಗಳು ಗೆಲುವು ಸಾಧಿಸಿವೆ.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದಕ್ಕೆ ತಕ್ಕಂತೆ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಗಳು ಕೂಡ ಆರಂಭದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

RR vs DC IPL 2024 Riyan Parag amp amp Avesh Khan Propel Rajasthan Royals to 12-Run Win Vs DC

ರಾಜಸ್ಥಾನ ರಾಯಲ್ಸ್ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೇವಲ 5 ರನ್ ಗಳಿಸಿ ಔಟಾದರು. ಜೋಸ್ ಬಟ್ಲರ್ 11 ರನ್, ನಾಯಕ ಸಂಜು ಸ್ಯಾಮ್ಸನ್ 15 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. 7.2 ಓವರ್ ಗಳಲ್ಲಿ ಕೇವಲ 36 ರನ್ ಗಳಿಸಿದ್ದ ರಾಜಸ್ಥಾನ ರಾಯಲ್ಸ್ ಸಂಕಷ್ಟಕ್ಕೆ ಸಿಲುಕಿತು.

ರಿಯಾನ್ ಪರಾಗ್ ಮತ್ತು ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಆಸರೆಯಾದರು ಈ ಜೋಡಿ ನಾಲ್ಕನೇ ವಿಕೆಟ್‌ಗೆ 54 ರನ್‌ಗಳನ್ನು ಕಲೆಹಾಕಿದರು. ಅಶ್ವಿನ್ 19 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 29 ರನ್ ಗಳಿಸಿದರು.

ರಿಯಾನ್ ಪರಾಗ್ ಭರ್ಜರಿ ಬ್ಯಾಟಿಂಗ್

ಅಶ್ವಿನ್ ಬಳಿಕ ರಿಯಾನ್ ಪರಾಗ್ ಜೊತೆಯಾದ ಧ್ರುವ್ ಜುರೆಲ್ 12 ಎಸೆತಗಳಲ್ಲಿ 20 ರನ್ ಗಳಿಸಿದರು. ಮತ್ತೊಂದು ಕಡೆ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದ ರಿಯಾನ್ ಪರಾಗ್ ಬಳಿಕ ಬೌಂಡರಿ, ಸಿಕ್ಸರ್ ಬಾರಿಸಿದರು. 45 ಎಸೆತಗಳಲ್ಲಿ 7 ಬೌಂಡರಿ 6 ಸಿಕ್ಸರ್ ಸಹಿತ ಅಜೇಯ 84 ರನ್ ಗಳಿಸಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಸರೆಯಾದರು. ಶಿಮ್ರಾನ್ ಹೆಟ್ಮೆಯರ್ 7 ಎಸೆತಗಳಲ್ಲಿ 14 ರನ್ ಗಳಿಸಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು.

ಗೆಲುವಿನ ಸನಿಹ ಬಂದು ಸೋತ ಡೆಲ್ಲಿ

ರಾಜಸ್ಥಾನ ರಾಯಲ್ಸ್ ನೀಡಿದ ಸವಾಲಿನ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ ಪಡೆದರೂ ಬೇಗನೆ ವಿಕೆಟ್ ಕಳೆದುಕೊಂಡಿತು. ಡೇವಿಡ್ ವಾರ್ನರ್ 34 ಎಸೆತಗಳಲ್ಲಿ 49 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 12 ಎಸೆತಗಳಲ್ಲಿ 23 ರನ್ ಗಳಿಸಿದರು. ರಿಕಿ ಭುಯಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ನಾಯಕ ರಿಷಬ್ ಪಂತ್ 26 ಎಸೆತಗಳಲ್ಲಿ 28 ರನ್ ಗಳಿಸಿದರು. ಅವರ ನಿಧಾನಗತಿಯ ಬ್ಯಾಟಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೇಲಿನ ಒತ್ತಡ ಹೆಚ್ಚಿಸಿತು. ಟ್ರಿಸ್ಟಾನ್ ಸ್ಟಬ್ಸ್ 23 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರೂ ಡೆಲ್ಲಿ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ, ಅಂತಿಮವಾಗಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿದ ಡೆಲ್ಲಿ 12 ರನ್‌ಗಳಿಂದ ಸೋಲೊಪ್ಪಿಕೊಂಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+