RR vs LSG IPL 2023: ಅಗ್ರಸ್ಥಾನಕ್ಕಾಗಿ ರಾಜಸ್ಥಾನ vs ಲಕ್ನೋ ತಂಡಗಳ ಕಾದಾಟ; ಪಂದ್ಯದ ವಿವರ, ಆಡುವ 11ರ ಬಳಗ

ಬುಧವಾರ, ಏಪ್ರಿಲ್ 19ರಂದು ನಡೆಯುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 26ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ನಿಕಟ ಪೈಪೋಟಿಯಿಂದ ಕೂಡಿರುವ ಈ ಪಂದ್ಯದಲ್ಲಿ ಗೆಲ್ಲುವ ಸಾಮರ್ಥ್ಯ ಉಭಯ ತಂಡಗಳಿಗೆ ಇದೆ. ಸವಾಯ್ ಮಾನಸಿಂಗ್ ಪಿಚ್‌ನಲ್ಲಿ ಈ ಎರಡು ಬಲಿಷ್ಠ ತಂಡಗಳು ಸೆಣಸಾಡುವುದನ್ನು ನೋಡಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ.

RR vs LSG IPL 2023: Rajathan Royals vs Lucknow Super Giants Match Details, Probable Playing 11

ಐಪಿಎಲ್ 2023ರ ಅಂಕಪಟ್ಟಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದ್ದು, ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಒಂದು ಸೋಲಿನೊಂದಿಗೆ 8 ಅಂಕ ಗಳಿಸಿ ಅಗ್ರಸ್ಥಾನದಲ್ಲಿದೆ.

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಈ ಋತುವಿನಲ್ಲಿ ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಮತ್ತು ಎರಡು ಸೋಲಿನೊಂದಿಗೆ 6 ಅಂಕ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್ ಅವರಂತಹ ಸ್ಟಾರ್ ಬ್ಯಾಟರ್‌ಗಳಿದ್ದರೆ, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್ ಅವರಂತಹ ಬೌಲರ್‌ಗಳಿಂದ ಬಲಿಷ್ಠವಾಗಿದೆ.

RR vs LSG IPL 2023: Rajathan Royals vs Lucknow Super Giants Match Details, Probable Playing 11

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೆಎಲ್ ರಾಹುಲ್, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ನಿಕೊಲಸ್ ಪೂರನ್, ಮಾರ್ಕಸ್ ಸ್ಟೋಯಿನಿಸ್, ಮಾರ್ಕ್ ವುಡ್ ಅವರಂತಹ ಅತ್ಯುತ್ತಮ ಪಡೆ ಹೊಂದಿದೆ.

ರಾಜಸ್ಥಾನ ರಾಯಲ್ಸ್ ತನ್ನ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತ್ತು. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಕಡೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿದೆ. ಇದೀಗ ಈ ಪಂದ್ಯದಲ್ಲಿ ಗೆಲ್ಲುವವರು ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲಿವೆ.

ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ವಿವರ

ಸ್ಥಳ ಮತ್ತು ಸಮಯ: ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವು ಬುಧವಾರ, ಏಪ್ರಿಲ್ 19ರಂದು ಜೈಪುರ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯವು ಸಂಜೆ 7.30ಕ್ಕೆ ಆರಂಭವಾಗಲಿದೆ.

RR vs LSG IPL 2023: Rajathan Royals vs Lucknow Super Giants Match Details, Probable Playing 11

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ

ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೇ, Jio Cinema ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ 11ರ ಬಳಗ
ರಾಜಸ್ಥಾನ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಆಯುಷ್ ಬದೊನಿ, ಅವೇಶ್ ಖಾನ್, ಯುಧ್ವೀರ್ ಸಿಂಗ್ ಚರಕ್, ಮಾರ್ಕ್ ವುಡ್, ರವಿ ಬಿಷ್ಣೋಯಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+