Vaibhav Suryavanshi: ಮೊದಲ ಎಸೆತದಲ್ಲೇ ಸಿಕ್ಸರ್; ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಐಪಿಎಲ್‌ ಇರುವುದೇ ಹೊಸ ಪ್ರತಿಭೆಗಳಿಗೆ ವೇದಿಕೆ ನೀಡಲು, ಪ್ರತಿ ವರ್ಷ ಹಲವು ಕ್ರಿಕೆಟಿಗರು ಐಪಿಎಲ್‌ನಲ್ಲಿ ಅಬ್ಬರಿಸಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ವರ್ಷ ಕೂಡ ಹಲವು ಯುವ ಆಟಗಾರರು ಗಮನ ಸೆಳೆದಿದ್ದು ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಇದೀಗ 14 ವರ್ಷದ ಕ್ರಿಕೆಟಿಗನೊಬ್ಬ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಶನಿವಾರ ಐಪಿಎಲ್‌ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

rr vs lsg vaibhav suryavanshi six first ball ipl debut

ಐಪಿಎಲ್ ವೃತ್ತಿಜೀವನದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು. ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 14 ವರ್ಷ ಮತ್ತು 23 ದಿನಗಳ ವಯಸ್ಸಿನಲ್ಲಿಐಪಿಎಲ್‌ನಲ್ಲಿ ಆಡುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಕಿರಿಯ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ ಕ್ರಿಕೆಟಿಗ ಎನಿಸಿಕೊಂಡರು. ರಾಜಸ್ಥಾನ ರಾಯಲ್ಸ್ ಅವರನ್ನು 1.1 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು.

12ನೇ ವಯಸ್ಸಿನಲ್ಲೇ ರಣಜಿ ಟ್ರೋಫಿಗೆ

ವೈಭವ್ ಸೂರ್ಯವಂಶಿ ಮಾರ್ಚ್ 27, 2011 ರಲ್ಲಿ ಜನಿಸಿದರು, ದೇಶೀಯ ಕ್ರಿಕೆಟ್‌ನಲ್ಲಿ ಅವರು ಬಿಹಾರ ತಂಡವನ್ನು ಪ್ರತಿನಿಧಿಸುತ್ತಾರೆ. ಎಡಗೈ ಬ್ಯಾಟ್ಸ್‌ಮನ್ ಆಗಿರುವ ಅವರು ಕೇವಲ 12 ವರ್ಷ ವಯಸ್ಸಿನಲ್ಲಿ 2024 ರ ರಣಜಿ ಟ್ರೋಫಿಯಲ್ಲಿ ಬಿಹಾರ ಪರ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು. ಅವರು 13 ನೇ ವಯಸ್ಸಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೇರಿದರು, ಐಪಿಎಲ್ ಒಪ್ಪಂದಕ್ಕೆ ಸಹಿ ಹಾಕಿದ ಅತ್ಯಂತ ಕಿರಿಯ ಕ್ರಿಕೆಟಿಗರಾದರು. ಲಿಸ್ಟ್ ಎ ಪಂದ್ಯದಲ್ಲಿ ಕಾಣಿಸಿಕೊಂಡ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಸಹ ಸ್ಥಾಪಿಸಿದರು.

ವೈಭವ್ ಸೂರ್ಯವಂಶಿ ಮೊದಲ ಪಂದ್ಯದಲ್ಲೇ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. 20 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ಸಹಿತ 34 ರನ್ ಗಳಿಸಿದರು. ಮೊದಲ ಪಂದ್ಯದಲ್ಲಿ ಭರವಸೆ ಮೂಡಿಸಿದ್ದು ಮುಂದಿನ ಪಂದ್ಯಗಳಲ್ಲಿ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವರು ಅವಕಾಶ ಪಡೆಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+