RR Vs RCB: ಕೊಹ್ಲಿ ಶತಕ ವ್ಯರ್ಥ; ಬಟ್ಲರ್ ಶತಕದ ಜೊತೆ ಗೆದ್ದ ರಾಜಸ್ಥಾನ ರಾಯಲ್ಸ್

ಹೊಸ ಅಧ್ಯಾಯದಲ್ಲಿ ಆರ್‌ಸಿಬಿ ಸರಣಿ ಸೋಲು ಮುಂದುವರೆದಿದೆ. ತವರಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತ ಫಾಫ್ ಪಡೆ, ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಕೂಡ ಸೋತು ಮುಖಭಂಗ ಅನುಭವಿಸಿದೆ.

ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಶತಕ ಗಳಿಸಿದ್ದು ವ್ಯರ್ಥವಾದರೆ, ಜೋಸ್ ಬಟ್ಲರ್ ತಮ್ಮ ಶತಕ ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

RR Vs RCB Jos Buttler s Ton Overshadows Virat Kohli in RR s Win

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ವಿರಾಟ್ ಕೊಹ್ಲಿ ತಮ್ಮ 8ನೇ ಐಪಿಎಲ್ ಶತಕ ಗಳಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ನೆರವಾದರು.

ಕೊಹ್ಲಿ ಹಿಟ್, ಟೀಮ್ ಫ್ಲಾಫ್‌

ವಿರಾಟ್ ಕೊಹ್ಲಿ 72 ಎಸೆತಗಳಲ್ಲಿ 12 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 113 ರನ್ ಗಳಿಸಿದರು. ಆರಂಭದಲ್ಲಿ ಫಾಫ್ ಡುಪ್ಲೆಸಿಸ್ 33 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ 44 ರನ್ ಗಳಿಸಿದರು.

ಮ್ಯಾಕ್ಸ್‌ವೆಲ್ 3 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಮತ್ತೆ ವಿಫಲವಾದರು. ಸೌರವ್ ಚೌಹಾಣ್ 6 ಎಸೆತಗಳಲ್ಲಿ 9 ರನ್ ಗಳಿಸಿದರು, ಕ್ಯಾಮೆರಾನ್ ಗ್ರೀನ್ 6 ಎಸೆತಗಳಲ್ಲಿ ಅಜೇಯ 5 ರನ್ ಗಳಿಸಿದರು.

ಕ್ಯಾಚ್‌ ಜೊತೆ ಮ್ಯಾಚ್‌ ಕೈಬಿಟ್ಟ ಆರ್‌ಸಿಬಿ

184 ರನ್‌ಗಳ ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ರನ್ ಖಾತೆ ತೆರೆಯುವ ಮುನ್ನವೇ ಜೈಸ್ವಾಲ್ ಅವರ ವಿಕೆಟ್ ಕಳೆದುಕೊಂಡಿತು. ಆದರೆ, ಜೋಸ್ ಬಟ್ಲರ್ ಮತ್ತು ನಾಯಕ ಸಂಜು ಸ್ಯಾಮ್ಸನ್ ತಂಡಕ್ಕೆ ನೆರವಾದರು.

ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 69 ರನ್ ಗಳಿಸಿದರೆ, ಕೊನೆಯವರೆಗೂ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ 58 ಎಸೆತಗಳಲ್ಲಿ 9 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 100 ರನ್ ಗಳಿಸಿದರು. 19.1 ಓವರ್ ಗಳಲ್ಲಿ ರಾಜಸ್ಥಾನ ರಾಯಲ್ಸ್ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಸತತ ನಾಲ್ಕನೇ ಗೆಲುವು ಸಾಧಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+