Get Updates
Get notified of breaking news, exclusive insights, and must-see stories!

IPL 2026: ಎಸ್‌ಆರ್‌ಎಚ್‌-ಆರ್‌ಆರ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?

SRH Vs RR IPL 2026: ಹೈದರಾಬಾದ್‌ನ ಸೋಮವಾರ (ಏಪ್ರಿಲ್‌ 13) ನಡೆಯುವ ಐಪಿಎಲ್ 2026ರ 21ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ಮತ್ತು ಎಸ್‌ಆರ್‌ಎಚ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗಾದ್ರೆ, ಇಲ್ಲಿನ ವಾತಾವರಣ ಹೇಗಿರಲಿದೆ? ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈ ಬಾರಿಯ ಸೀಸನ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರದರ್ಶನ ಹೇಳಿಕೊಳ್ಳುವಷ್ಟೇನಿಲ್ಲ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಜಯ ಸಾಧಿಸಿರುವ ಹೈದರಾಬಾದ್, ಅಂಕಪಟ್ಟಿಯಲ್ಲಿ ಸದ್ಯ 7ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮಾತ್ರ ಜಯ ದಾಖಲಿಸಿರುವ ಎಸ್‌ಆರ್‌ಹೆಚ್ ತಂಡ, ಆರ್‌ಸಿಬಿ, ಎಲ್‌ಎಸ್‌ಜಿ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನುಭವಿಸಿದೆ. ಹೀಗೆ ಸೋಲಿನ ಸುಳಿಯಿಂದ ಹೊರಬಂದು ಮತ್ತೆ ಲಯಕ್ಕೆ ಮರಳುವ ಪ್ರಯತ್ನದಲ್ಲಿದೆ.

RR vs SRH IPL 2026 Hyderabad Weather Report Pitch Details amp amp Match Preview Know Complete details

ಆಡಿರುವ 4 ಪಂದ್ಯಗಳಲ್ಲಿ ಗೆಲುವು

ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರುವ ಮೂಲಕ ಈ ಸೀಸನ್‌ನ ಅತ್ಯಂತ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿ ನೆಲೆಯೂರಿದೆ. ಈವರೆಗೆ ಆಡಿರುವ ನಾಲ್ಕೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

ಎಸ್‌ಆರ್‌ಎಚ್‌ ವಿರುದ್ಧ ಗೆಲುವಿನ ಭರವಸೆಯಲ್ಲಿ ಆರ್‌ಆರ್‌

ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಮಣಿಸಿದೆ. ರಾಜಸ್ಥಾನ್ ತಂಡದ ಬ್ಯಾಟಿಂಗ್ ವಿಭಾಗವು ಉತ್ತಮ ಫಾರ್ಮ್‌ನಲ್ಲಿದ್ದು, ಸತತವಾಗಿ ಆಕ್ರಮಣಕಾರಿ ಪ್ರದರ್ಶನ ನೀಡುವ ಮೂಲಕ ಎದುರಾಳಿ ತಂಡದ ಬೌಲರ್‌ಗಳನ್ನು ಬಗ್ಗುಬಡಿಯುವಲ್ಲಿ ಯಶಸ್ವಿ ಕಾಣುತ್ತಾ ಬಂದಿದೆ. ಹಾಗೆಯೇ ಇಂದಿನ ಎಸ್‌ಆರ್‌ಎಚ್‌ ವಿರುದ್ಧವೂ ಗೆಲುವು ಸಾಧಿಸುವ ಭರವಸೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣವು ಬೌಲರ್‌ಗಳಿಗೆ ಸವಾಲಿನ ಮೈದಾನವಾಗಿದೆ. ಇಂದಿನ ಪಂದ್ಯಕ್ಕೆ ಪಿಚ್ ಸಂಖ್ಯೆ 3 ಅನ್ನು ಬಳಸಲಾಗುತ್ತಿದ್ದು, ಇದು ಸಮತಟ್ಟಾದ ಮತ್ತು ಮಿಶ್ರ ಮಣ್ಣಿನೊಂದಿಗೆ ಕೂಡಿದೆ. ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳಿಗೆ ತುಸು ಹೊಡೆತ ಬೀಳಬಹುದು. ವೇಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಇದನ್ನ ಗಮನಿಸಿದರೆ, ಎರಡೂ ತಂಡಗಳು ತಮ್ಮ ವೇಗದ ಬೌಲಿಂಗ್ ಪಡೆಯ ಮೇಲೆ ಹೆಚ್ಚಿನ ಭರವಸೆಯನ್ನು ಇಟ್ಟಿವೆ.

ಹೈದರಾಬಾದ್ ಹವಾಮಾನ ವರದಿ

ಹೈದರಾಬಾದ್‌ನಲ್ಲಿ ತಾಪಮಾನ ಪ್ರಮಾಣ ಹೆಚ್ಚಿರಲಿದೆ. ಪಂದ್ಯದ ವೇಳೆ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ ಇದೆ. ಟಾಸ್ ಸಮಯದಲ್ಲಿ ತಾಪಮಾನವು ಸುಮಾರು 37°C ಇರಲಿದ್ದು, ಪಂದ್ಯ ಮುಕ್ತಾಯದ ವೇಳೆಗೆ ಅಂದಾಜು 32°Cಗೆ ತಗ್ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಟ್ಟಿನಲ್ಲಿ ಈ ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿ ಇರುವುದಿಲ್ಲ. ಪೂರ್ಣ ಪಂದ್ಯ ನಡೆಯಲಿದೆ ಎನ್ನುವ ವಿಶ್ವಾಸ ಬಂದಂತಾಗಿದ್ದು, ಇದರಿಂದ ಅಭಿಮಾನಿಗಳು ಸಂತಸಗೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+