Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ
Sachin Tendulkar: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಬ್ಯಾಟರ್‌ಗಳು ಆಕ್ರಮಣಕಾರಿ ಆಟ ಆಡಿದರು. ಇದಕ್ಕೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ವಿಶೇಷ ಸಂದೇಶದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತ ತಂಡವು ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 255/5 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಈ ಸಾಧನೆಯನ್ನು ಶ್ಲಾಘಿಸಿರುವ ಸಚಿನ್ ತೆಂಡೂಲ್ಕರ್, ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಅಭಿಷೇಕ್ ಶರ್ಮಾ ಬಗ್ಗೆ ಮಾತನಾಡಿದ ಸಚಿನ್, "ಈ ಟೂರ್ನಿಯುದ್ದಕ್ಕೂ ಅಭಿಷೇಕ್ ಶರ್ಮಾ ಕಠಿಣ ಸಮಯವನ್ನು ಎದುರಿಸಿದ್ದರು. ಆದರೆ, ಮಹತ್ವದ ಫೈನಲ್ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ, ತಂಡದ ನಾಯಕತ್ವ ಮತ್ತು ಆಡಳಿತ ಮಂಡಳಿ ತಮ್ಮ ಮೇಲೆ ಇಟ್ಟಿದ್ದ ನಂಬಿಕೆಯನ್ನು ಅವರು ಸಮರ್ಥವಾಗಿ ಉಳಿಸಿಕೊಂಡಿದ್ದಾರೆ," ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತೆಂಡ್ಯೂಲ್ಕರ್ ಸಂದೇಶದಲ್ಲಿ ಏನಿದೆ?
"ಅಭಿಷೇಕ್ ಶರ್ಮಾ ಪಾಲಿಗೆ ಈ ಟೂರ್ನಿಯು ಸುಲಭವಾಗಿರಲಿಲ್ಲ, ಆದರೆ ಆಟಗಾರನಾಗಿ ಅವರ ಸಾಮರ್ಥ್ಯದ ಮೇಲೆ ತಂಡವು ವಿಶ್ವಾಸವಿಟ್ಟಿತ್ತು. ಆ ನಂಬಿಕೆಯನ್ನು ಅವರು ಫೈನಲ್ ಪಂದ್ಯದದಲ್ಲಿ ಉತ್ತಮ ಇನಿಂಗ್ಸ್ ಮೂಲಕ ಸಮರ್ಥವಾಗಿ ಉಳಿಸಿಕೊಂಡಿದ್ದಾರೆ. ಇಶಾನ್ ಕಿಶನ್ ತಂಡದ ಮೊತ್ತಕ್ಕೆ ಉತ್ತಮ ವೇಗ ನೀಡುತ್ತಿದ್ದರೆ, ಮತ್ತು ಸಂಜು ಸ್ಯಾಮ್ಸನ್ ತಮ್ಮ ಸ್ಥಿರ ಪ್ರದರ್ಶನವನ್ನು ಮುಂದುವರಿಸಿದ್ದಾರೆ," ಎಂದು ಸಚಿನ್ ಬರೆದುಕೊಂಡಿದ್ದಾರೆ.
Not the easiest tournament for Abhishek Sharma, but the team showed belief in his ability. He has repaid that faith with a crucial knock in the final. Well played! 👏🇮🇳
— Sachin Tendulkar (@sachin_rt) March 8, 2026
Ishan Kishan bringing real momentum to the innings, and Sanju Samson continuing his reliable run.
ಭಾರತದ ಬ್ಯಾಟಿಂಗ್ ಅಬ್ಬರ
ಅಹಮದಾಬಾದ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಅವರು ಸಿಡಿಸಿದ ಅರ್ಧಶತಕಗಳು ಮತ್ತು ಅಂತಿಮ ಹಂತದಲ್ಲಿ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು 255/5 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಇದು ಗರಿಷ್ಠ ಮೊತ್ತವಾಗಿದೆ.
ವಿಶೇಷವಾಗಿ ಅಂತಿಮ ಓವರ್‌ನಲ್ಲಿ ಶಿವಂ ದುಬೆ ಅವರು ಜೇಮ್ಸ್ ನೀಶಮ್ ಬೌಲಿಂಗ್‌ನಲ್ಲಿ 24 ರನ್ ದೋಚಿದರು. ಕೇವಲ 8 ಎಸೆತಗಳನ್ನು ಎದುರಿಸಿದ ದುಬೆ, ಅಜೇಯ 26 ರನ್ ಗಳಿಸಿ ಮಿಂಚಿದರು. ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಆದರೆ, ಭಾರತದ ಆರಂಭಿಕ ಜೋಡಿ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಕಿವೀಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪವರ್‌ಪ್ಲೇನಲ್ಲಿಯೇ ಭಾರತ 92 ರನ್ ಗಳಿಸಿದ್ದು, ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ. ಆರಂಭಿಕರಾದ ಸ್ಯಾಮ್ಸನ್ ಮತ್ತು ಅಭಿಷೇಕ್ ಟಿ20 ವಿಶ್ವಕಪ್ ಫೈನಲ್‌ನಲ್ಲಿ 50ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಾಡಿದ ಮೊದಲ ಜೋಡಿಯಾದರು.
ಬಳಿಕ ರಚಿನ್ ರವೀಂದ್ರ ಅವರು ಅಭಿಷೇಕ್ ಅವರ ವಿಕೆಟ್ ಕಿತ್ತರು. ವೇಗಿಗಳಾದ ಲಾಕಿ ಫರ್ಗುಸನ್ ಮತ್ತು ಮ್ಯಾಟ್ ಹೆನ್ರಿ ಭಾರತದ ಬ್ಯಾಟರ್‌ಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಫರ್ಗುಸನ್ ತಮ್ಮ ಎರಡು ಓವರ್‌ಗಳಲ್ಲೇ 48 ರನ್ ಬಿಟ್ಟುಕೊಟ್ಟರು. 16ನೇ ಓವರ್‌ನಲ್ಲಿ ಜೇಮ್ಸ್ ನೀಶಮ್ ಅವರು ಸ್ಯಾಮ್ಸನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಕಬಳಿಸಿ ಭಾರತಕ್ಕೆ ಆಘಾತ ನೀಡಿದರು. ಆದರೂ, ಅಂತಿಮ ಹಂತದಲ್ಲಿ ಭಾರತದ ಬ್ಯಾಟರ್‌ಗಳು ಆಕ್ರಮಣಕಾರಿ ಆಟದಿಂದ ತಂಡವು 255 ರನ್‌ಗಳ ಬೃಹತ್ ಮೊತ್ತವನ್ನು ತಲುಪಲು ಸಾಧ್ಯವಾಯಿತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications