RCB vs RR: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನ ರಾಜಸ್ಥಾನ ರಾಯಲ್ಸ್‌ಗೆ ಆಘಾತ!
ಐಪಿಎಲ್ 2025ರ ಆವೃತ್ತಿಯಲ್ಲಿ ತವರಿನ ಹೊರಗೆ ಭರ್ಜರಿ ಪ್ರದರ್ಶನ ನೀಡುತ್ತಿರುವ ಆರ್ ಸಿಬಿ ಈವರೆಗೆ ಹೊರಗೆ ಆಡಿರುವ 5 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ತವರಿನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದು ಮುಂದಿನ ಪಂದ್ಯ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಪ್ರಿಲ್ 24ರಂದು ಗುರುವಾರ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣೆಸಲಿದೆ.
ಆರ್ ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ನಾಯಕ ಸಂಜು ಸ್ಯಾಮ್ಸನ್ ಆರ್ ಸಿಬಿ ವಿರುದ್ಧದ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಸತತವಾಗಿ ಎರಡು ಪಂದ್ಯಗಳನ್ನು ಸೋತಿರುವ ರಾಜಸ್ಥಾನ ರಾಯಲ್ಸ್‌ಗೆ ಈಗ ನಾಯಕನ ಅಲಭ್ಯತೆ ದೊಡ್ಡ ಹಿನ್ನಡೆಯಾಗಿದೆ.

ಸಂಜು ಸ್ಯಾಮ್ಸನ್ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ, ರಾಜಸ್ಥಾನ ರಾಯಲ್ಸ್‌ನ ವೈದ್ಯಕೀಯ ಸಿಬ್ಬಂದಿ ಜೊತೆ ಅವರು ಜೈಪುರದಲ್ಲೇ ಉಳಿಯಲಿದ್ದಾರೆ ಎಂದು ಫ್ರಾಂಚೈಸಿ ಮಾಹಿತಿ ನೀಡಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಆರ್ ಸಿಬಿ ವಿರುದ್ಧದ ಪಂದ್ಯಕ್ಕಾಗಿ ಅವರು ಬೆಂಗಳೂರಿಗೆ ಪ್ರಯಾಣಿಸುವುದಿಲ್ಲ, ಫ್ರಾಂಚೈಸಿ ಅವರು ಚೇತರಿಸಿಕೊಳ್ಳುವುದನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಅವರು ಇನ್ನೂ ಯಾವಾಗ ಪೂರ್ಣವಾಗಿ ಗುಣಮುಖವಾಗುತ್ತಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ.
ಸೂರ್ಯವಂಶಿಗೆ ಮತ್ತೊಂದು ಅವಕಾಶ
ಸಂಜು ಸ್ಯಾಮ್ಸನ್ ಈ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 37 ಎಸೆತಗಳಲ್ಲಿ 66 ರನ್ ಗಳಿಸುವ ಉತ್ತಮ ಆರಂಭ ಪಡೆದರೂ ಬಳಿಕ ನಡೆದ ಪಂದ್ಯಗಳಲ್ಲಿ ಅವರು ಅದೇ ಫಾರ್ಮ್ ಮುಂದುವರೆಸುವಲ್ಲಿ ವಿಫಲವಾದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅವರ ಇತ್ತೀಚಿನ ಪಂದ್ಯವು 19 ಎಸೆತಗಳಲ್ಲಿ 31 ರನ್ ಗಳಿಸಿದ್ದಾಗ ಗಾಯದ ಸಮಸ್ಯೆಯಿಂದ ಮೈದನಾದಿಂದ ಹೊರನಡೆದರು.
ಸ್ಯಾಮ್ಸನ್ ಅವರ ಅಲಭ್ಯತೆಯಿಂದಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಅವಕಾಶ ಪಡೆದರು. ಮೊದಲ ಪಂದ್ಯದಲ್ಲೇ ಉತ್ತಮ ಬ್ಯಾಟಿಂಗ್ ಮಾಡಿದ ಅವರು ಭರವಸೆ ಮೂಡಿಸಿದ್ದು ಆರ್ ಸಿಬಿ ವಿರುದ್ಧ ಅವರೇ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಆರ್ ಸಿಬಿ ತವರಿನ ಹೊರಗೆ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಈ ಆವೃತ್ತಿಯಲ್ಲಿ ತವರಿನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಆರ್ ಸಿಬಿ ಬೆಂಗಳೂರಿಗೆ ಬಂದಿದ್ದು ಮುಂದಿನ ಪಂದ್ಯಕ್ಕಾಗಿ ಸಿದ್ಧತೆ ಆರಂಭಿಸಿದೆ.
ಈ ಆವೃತ್ತಿಯಲ್ಲಿ ಆರ್ ಸಿಬಿ ಈಗಾಗಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು, ಈಗ ತವರಿನಲ್ಲೂ ರಾಜಸ್ಥಾನವನ್ನು ಮಣಿಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಆವೃತ್ತಿಯ ಮೊದಲ ಗೆಲುವು ಪಡೆಯುವ ಉತ್ಸಾಹದಲ್ಲಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಆರ್‌ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್‌ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಆರ್‌ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Nandini: ಆರ್‌ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್‌ಸಿಬಿ ಅಧಿಕೃತ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications