Sanju Samson: ಶತಕ ಮುಖ್ಯವಲ್ಲ, 97, 89 ರನ್ ಗಳಿಸಿದ್ದೇ ದೊಡ್ಡ ವಿಷಯ: ಫೈನಲ್‌ಗೂ ಮುನ್ನ ಸಂಜು ಸ್ಯಾಮ್ಸನ್ ಹೇಳಿಕೆ ವೈರಲ್
Sanju Samson: ಟಿ20 ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿ ಮಿಂಚಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಮತ್ತು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ 89 ರನ್ ಕಲೆಹಾಕಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ. ಶತಕದ ಸನಿಹಕ್ಕೆ ಬಂದರೂ ಅದನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಕೊಟ್ಟ ಉತ್ತರ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ನೀವು ಎರಡು ಬಾರಿ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡಿದ್ದೀರಿ ಯಾಕೆ ಎಂದು ಪ್ರಶ್ನಿಸಿದಾಗ, "ನಾನು ಎರಡು ಶತಕಗಳನ್ನು ಮಿಸ್ ಮಾಡಿಲ್ಲ. ಒಂದು ಪಂದ್ಯದಲ್ಲಿ 97 ಮತ್ತು ಇನ್ನೊಂದು ಪಂದ್ಯದಲ್ಲಿ 89 ರನ್ ಗಳಿಸಿದ್ದೇನೆ. ಇದು ತುಂಬಾ ದೊಡ್ಡ ವಿಷಯ. ಇದಕ್ಕಾಗಿ ನಾನು ಅತ್ಯಂತ ಕೃತಜ್ಞನಾಗಿದ್ದೇನೆ," ಎಂದು ನಗುತ್ತಲೇ ಉತ್ತರ ಕೊಟ್ಟು ಗಮನ ಸೆಳದಿದ್ದಾರೆ. ಮುಂದುವರೆದು ಮಾತನಾಡಿದ ಅವರು, "ನನಗೆ ಈ ಅವಕಾಶ ದೊರೆತಿದ್ದು ತುಂಬಾ ಅದೃಷ್ಟದ ಸಂಗತಿ. ಆದ್ದರಿಂದ ಈಗ ಇದನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು," ಎಂದು ಹೇಳಿದರು.

ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯಲು ಕಠಿಣ ಸವಾಲು
ಕಳೆದ ವರ್ಷ ಸಂಜು ಸ್ಯಾಮ್ಸನ್ ಅವರು ಭಾರತ ತಂಡದ ಆಡುವ ಬಳಗದಲ್ಲಿ 11ರ ಬಳಗದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಕಷ್ಟು ಹೋರಾಡಬೇಕಾಯಿತು. 2025ರ ಏಷ್ಯಾ ಕಪ್‌ಗಾಗಿ ಭಾರತ ತಂಡವು ಅಭಿಷೇಕ್ ಶರ್ಮಾ ಅವರೊಂದಿಗೆ ಆರಂಭಿಕ ಆಟಗಾರರಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿತು. ಈ ಬದಲಾವಣೆಯು ಸ್ಯಾಮ್ಸನ್ ಅವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಸಂಪೂರ್ಣವಾಗಿ ಕೆಳಗಡೆ ತಳ್ಳಲಾಯಿತು ಮತ್ತು ಅಂತಿಮವಾಗಿ ಅವರನ್ನು ತಂಡದಿಂದ ಕೈಬಿಡಲಾಯಿತು.
ಅಗ್ರ ಕ್ರಮಾಂಕದಲ್ಲಿ ಸ್ಥಾನ ಕಳೆದುಕೊಂಡ ಸಂಜು
ಶುಭ್ಮನ್ ಗಿಲ್ ತಂಡಕ್ಕೆ ಮರಳಿ, ಉಪನಾಯಕರಾಗಿ ನೇಮಕವಾದ ನಂತರ, ಆರಂಭಿಕ ಸ್ಥಾನದಲ್ಲಿ ಅವರ ಸ್ಥಾನ ಖಚಿತವಾಯಿತು. ಇದರಿಂದಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಿದ್ದ ಸ್ಯಾಮ್ಸನ್‌ಗೆ ಅವಕಾಶ ಸಿಗುವುದು ಕಷ್ಟವಾಯಿತು. ಅಭಿಷೇಕ್ ಶರ್ಮಾ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿದ ಮೇಲೆ, ಸ್ಯಾಮ್ಸನ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡುವ ಸವಾಲನ್ನು ಎದುರಿಸಬೇಕಾಯಿತು. ಅಲ್ಲಿಯೂ ಕೂಡ ಜಿತೇಶ್ ಶರ್ಮಾ ಎಂಟ್ರಿ ಕೊಟ್ಟ ಕಾರಣ ಪೈಪೋಟಿ ಉಂಟಾಯಿತು. ಇದರಿಂದ ಸ್ಯಾಮ್ಸನ್‌ಗೆ ಸ್ಥಾನ ಸಿಗಲಿಲ್ಲ.
ಫಾರ್ಮ್‌ಗೆ ಮರಳಿದ ಸಂಜು
ಒಂದು ಹಂತದಲ್ಲಿ ತಂಡದಿಂದ ಹೊರಬಿದ್ದಿದ್ದ ಸಂಜು ಸ್ಯಾಮ್ಸನ್, ತಮ್ಮ ವೃತ್ತಿಜೀವನದ ಅತ್ಯಂತ ಕಠಿಣ ಹಂತವನ್ನು ಎದುರಿಸಿದರು. ಆದರೆ, ಸತತ ಪರಿಶ್ರಮ ಮತ್ತು ತಮ್ಮ ಆಟದ ಮೇಲೆ ಗಮನ ಹರಿಸುವ ಮೂಲಕ, ಈಗ ಟಿ20 ವಿಶ್ವಕಪ್‌ನಲ್ಲಿ ಅದ್ಭುತವಾಗಿ ಫಾರ್ಮ್‌ಗೆ ಮರಳಿದ್ದಾರೆ.
ಶುಭ್ಮನ್ ಗಿಲ್ ಅವರ ಕಳಪೆ ಫಾರ್ಮ್‌ನಿಂದಾಗಿ ಭಾರತ ತಂಡದ ಮ್ಯಾನೇಜ್‌ಮೆಂಟ್ ತಂಡದ ಆಯ್ಕೆಯ ಬಗ್ಗೆ ಮತ್ತೊಮ್ಮೆ ಯೋಚಿಸಿ, ಗಿಲ್ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಆಡುವ 11ರ ಬಳಗಕ್ಕೆ ತರಲಾಯಿತು. ಆದರೆ, ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ತಂಡಕ್ಕೆ ಮರಳಿದ್ದ ಇಶಾನ್ ಕಿಶನ್ ಅವರನ್ನೇ ಅಂತಿಮವಾಗಿ ತಂಡದ ಮ್ಯಾನೇಜ್‌ಮೆಂಟ್ ಆಯ್ಕೆ ಮಾಡಿಕೊಂಡಿದ್ದರಿಂದ, ಸ್ಯಾಮ್ಸನ್ ಮತ್ತೆ ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು.
ಭಾರತ ತಂಡದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಎಡಗೈ ಬ್ಯಾಟರ್‌ಗಳ ಸಂಖ್ಯೆ ಹೆಚ್ಚಾಗಿತ್ತು. ಇದು ಎದುರಾಳಿ ತಂಡದ ಬೌಲರ್‌ಗಳಿಗೆ ಆಟವನ್ನು ಸುಲಭಗೊಳಿಸಿತ್ತು. ಬೌಲರ್‌ಗಳು ಒಂದೇ ರೀತಿಯ ಲೈನ್ ಮತ್ತು ಲೆಂತ್‌ನಲ್ಲಿ ಬೌಲಿಂಗ್ ಮಾಡಲು ಇದು ಅನುಕೂಲವಾಗಿತ್ತು. ತಂಡವು ಮಧ್ಯಮ ಕ್ರಮಾಂಕದಲ್ಲಿ ಬಲಗೈ ಬ್ಯಾಟರ್‌ಗಳ ಕೊರತೆಯನ್ನು ಎದುರಿಸುತ್ತಿತ್ತು. ಎದುರಾಳಿಗಳ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ಬಲಗೈ-ಎಡಗೈ ಜೋಡಿ ಅಗತ್ಯವಾಗಿತ್ತು.
ಈ ತಂತ್ರವನ್ನು ಬದಲಾಯಿಸುವ ಭಾಗವಾಗಿ, ಮ್ಯಾನೇಜ್‌ಮೆಂಟ್ ಸಂಜು ಸ್ಯಾಮ್ಸನ್ ಅವರಂತಹ ಅನುಭವಿ ಬಲಗೈ ಬ್ಯಾಟರ್‌ಗೆ ಅವಕಾಶ ನೀಡಿತು. ಇದು ತಂಡದ ಸಮತೋಲನವನ್ನು ಸುಧಾರಿಸಿತು ಮತ್ತು ಅಂತಿಮವಾಗಿ ಸಂಜು ಸ್ಯಾಮ್ಸನ್ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಸಾಧ್ಯವಾಯಿತು.
ಸಂಜು ಸ್ಯಾಮ್ಸನ್ ಹೇಳಿದ್ದೇನು?
"ನನ್ನ ಕಠಿಣ ಸಮಯ ಬಂದಾಗ, ನಾನು ಪ್ರೀತಿಸುವ ಮತ್ತು ನನ್ನನ್ನು ಬೆಂಬಲಿಸುವ ಆಪ್ತರು ಮಾತ್ರ ನನ್ನೊಂದಿಗಿದ್ದರು. ನಾನು ನನ್ನ ಫೋನ್ ಸ್ವಿಚ್ ಆಫ್ ಮಾಡಿದೆ, ಸಾಮಾಜಿಕ ಜಾಲತಾಣಗಳಿಂದ ಸಂಪೂರ್ಣ ದೂರವಿದ್ದೆ. ಈಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿಲ್ಲ. ಕೆಲವೇ ಜನರೊಂದಿಗೆ ಮಾತ್ರ ಸಂಪರ್ಕದಲ್ಲಿದ್ದರೆ, ಅದು ನನ್ನ ಗುರಿಯತ್ತ ಗಮನಹರಿಸಲು ನಿಜವಾಗಿಯೂ ಸಹಾಯ ಮಾಡುತ್ತದೆ. ಸದ್ಯ ಎಲ್ಲವೂ ಸರಿಯಾಗಿ ನಡೆಯುತ್ತಿರುವುದಕ್ಕೆ ನಾನು ತುಂಬಾ ಸಂತೋಷವಾಗಿದ್ದೇನೆ," ಎಂದು ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, "ನಾನು ಖಂಡಿತವಾಗಿಯೂ ಭಾರತ ತಂಡಕ್ಕೆ ಮರಳಿ, ದೇಶಕ್ಕಾಗಿ ಈ ರೀತಿ ಆಡಬೇಕೆಂದು ಬಯಸಿದ್ದೆ. ವಿಶ್ವಕಪ್‌ನಲ್ಲಿ ತಂಡಕ್ಕಾಗಿ ಉತ್ತಮ ಕೊಡುಗೆ ನೀಡಿ, ಪಂದ್ಯಗಳನ್ನು ಗೆಲ್ಲಿಸಿಕೊಡಬೇಕೆಂಬುದು ನನ್ನ ಗುರಿಯಾಗಿದೆ," ಎಂದು ಹೇಳಿ ಗಮನ ಸೆಳದಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications