Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್
Sanju Samson: ಟಿ20 ವಿಶ್ವಕಪ್ 2026ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ 'ಸರಣಿ ಶ್ರೇಷ್ಠ' ಪ್ರಶಸ್ತಿ ಪಡೆದ ಬಳಿಕ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್, ತಮ್ಮ ಈ ಯಶಸ್ಸಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪಾತ್ರ ವಿಶೇಷವಾಗಿದೆ ಎಂದು ಸ್ಮರಿಸಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜು ಸ್ಯಾಮ್ಸನ್, ತಮ್ಮ ಬ್ಯಾಟಿಂಗ್ ತಂತ್ರಗಾರಿಕೆ ಹಾಗೂ ಉತ್ತಮ ಪ್ರದರ್ಶನ ತೋರಲು ಸಚಿನ್ ತೆಂಡೂಲ್ಕರ್ ಅವರ ಸಲಹೆಗಳು ನಿರ್ಣಾಯಕವಾಗಿದ್ದವು ಎಂದು ತಿಳಿಸಿದ್ದಾರೆ. "ಕಠಿಣ ಪರಿಸ್ಥಿತಿಗಳಲ್ಲಿ ಆಡುವಾಗ ಮಾನಸಿಕವಾಗಿ ಹೇಗೆ ಬಲವಾಗಿರಬೇಕು ಮತ್ತು ಆಟದ ಮೇಲೆ ಹೇಗೆ ಹಿಡಿತ ಸಾಧಿಸಬೇಕು ಎಂಬ ವಿಷಯಗಳಲ್ಲಿ ಸಚಿನ್ ಅವರ ಕಿವಿಮಾತುಗಳು ನೆರವಾದವು. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ," ಎಂದು ಹೇಳಿಕೊಂಡಿದ್ದಾರೆ.

ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತವು ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಇತಿಹಾಸ ನಿರ್ಮಿಸಿದೆ. ಈ ಮಹತ್ವದ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವು ತಂಡಕ್ಕೆ ಆಧಾರಸ್ತಂಭವಾಗಿತ್ತು. ಗೆಲುವಿನ ಸಂಭ್ರಮದ ನಡುವೆಯೂ, ತಮಗೆ ಬೆನ್ನೆಲುಬಾಗಿ ನಿಂತು ಮಾರ್ಗದರ್ಶನ ನೀಡಿದ ದಿಗ್ಗಜ ಆಟಗಾರನನ್ನು ಸಾರ್ವಜನಿಕವಾಗಿ ನೆನೆದಿರುವುದು ಕ್ರೀಡಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ.
'ಆತ್ಮವಿಶ್ವಾಸ ತುಂಬಿದ ಕ್ರಿಕೆಟ್ ದೇವರು'
"ನ್ಯೂಝಿಲೆಂಡ್ ವಿರುದ್ಧದ ಸರಣಿಯ ವೈಫಲ್ಯದ ನಂತರ ಆತ್ಮವಿಶ್ವಾಸ ಕಳೆದುಕೊಂಡಿದ್ದ ನಾನು ಸಚಿನ್ ತೆಂಡೂಲ್ಕರ್ ಅವರಿಗೆ ಕರೆ ಮಾಡಿದ್ದೆ. ಈ ವೇಳೆ ಅವರು ನನಗೆ ಧೈರ್ಯ ತುಂಬಿದ್ದರು. ಸಚಿನ್ ಅವರು ಪಂದ್ಯದ ಮೇಲಿನ ಹಿಡಿತ ಮತ್ತು ಮಾನಸಿಕ ಸ್ಪಷ್ಟತೆಯ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದರು. ಅಲ್ಲದೆ, ಫೈನಲ್ ಪಂದ್ಯದ ಹಿಂದಿನ ರಾತ್ರಿ ಸಹ ಸಚಿನ್ ಅವರಿಗೆ ಕರೆ ಮಾಡಿದ್ದೆ. ಈ ವೇಳೆಯೂ ಅವರು ನನಗೆ ಆತ್ಮವಿಶ್ವಾಸ ತುಂಬಿದ್ದರು ಎಂದು ಹೇಳಿದರು.
ತೆಂಡೂಲ್ಕರ್ ಜೊತೆ ನಿರಂತರ ಸಂಪರ್ಕ
"ಹೀಗೆ ಕಳೆದ ಎರಡು ತಿಂಗಳುಗಳಿಂದ ನಾನು ಸಚಿನ್ ಸರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಅದರಲ್ಲೂಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ತಂಡದಿಂದ ಹೊರಗುಳಿದಾಗ, ಅವರು ನನಗೆ ಮಾನಸಿಕವಾಗಿ ಕುಗ್ಗದಂತೆ ಮತ್ತು ಧೃಢ ಮನಸ್ಥಿತಿ ಬೆಳೆಸಿಕೊಳ್ಳಲು ಮಾರ್ಗದರ್ಶನ ನೀಡಿದರು. ಅವರಂತಹ ದಂತಕಥೆಯಿಂದ ಮಾರ್ಗದರ್ಶನ ಪಡೆಯುವುದು ನನಗೆ ಸಿಕ್ಕ ದೊಡ್ಡ ಭಾಗ್ಯ. ಅವರು ನನಗೆ ಪಂದ್ಯದ ಮೇಲಿನ ಹಿಡಿತ ಮತ್ತು ತಯಾರಿಯ ಬಗ್ಗೆ ಸ್ಪಷ್ಟತೆ ನೀಡಿದರು. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ ಸರಣಿಯ ವೈಫಲ್ಯದ ಬಳಿಕ ನಾನು ಮಾನಸಿಕವಾಗಿ ಕುಗ್ಗಿದ್ದಾಗ ಸಚಿನ್ ಅವರ ಮಾತುಗಳು ನನ್ನಲ್ಲಿ ಮತ್ತೆ ನಂಬಿಕೆ ಮೂಡಿಸಿದವು," ಎಂದು ಬಾವುಕರಾಗಿ ಹೇಳಿದರು.
ಇನ್ನೂ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಸಾಧನೆಯು ತಮಗೆ ಒಂದು ಸುಂದರ ಕನಸಿನಂತೆ ಭಾಸವಾಗುತ್ತಿದೆ. 2024ರಲ್ಲಿ ವೆಸ್ಟ್ ಇಂಡೀಸ್ನಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಆಡುವ ಅವಕಾಶ ಸಿಗಲಿಲ್ಲ ಎಂಬ ನೋವು ಇತ್ತು. ಆದರೆ ಅಂದಿನಿಂದಲೇ ಇಂತಹ ಅದ್ಭುತ ಸಾಧನೆ ಮಾಡುವ ಕನಸನ್ನು ಕಾಣುತ್ತಿದ್ದೆ. ಅದು ಇದೀಗ ನೆರವೇರಿತು ಎಂದು ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications