ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

VIDEO: ಮುಂದಿನ ವರ್ಷ ಖೇಲೋ ಇಂಡಿಯಾ ಎರಡನೇ ಆವೃತ್ತಿಗೆ ಚಾಲನೆ

|
Google Oneindia Kannada News

ಬೆಂಗಳೂರು, ಜು. 15: "ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟದ ಎರಡನೇ ಆವೃತ್ತಿಯನ್ನು 2022ರ ಮಾರ್ಚ್ 5 ರಿಂದ ಆರಂಭಿಸಲು ನಿರ್ಧಾರ ಮಾಡಲಾಗಿದೆ" ಎಂದು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ನಡೆದ ಸಬೆಯ ಬಳಿಕ ಮಾಹಿತಿ ನೀಡಿದ್ದಾರೆ. ವಿಕಾಸಸೌಧದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಹಾಗೂ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ನಡದ ಸಭೆಯಲ್ಲಿ ಈ ವಿಷಯವನ್ನು ತೀರ್ಮಾನ ಮಾಡಲಾಗಿದೆ. ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ 158 ಯುನಿವರ್ಸಿಟಿಯಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 6 ಸಾವಿರ ಜನರು ಭಾಗವಹಿಸಲಿದ್ದಾರೆ.

"ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉದ್ಘಾಟನೆಗೆ ಆಹ್ವಾನಿಸಲು ನಿರ್ಧಾರ ಮಾಡಲಾಗಿದೆ" ಎಂದು ಇದೇ ಸಂದರ್ಭದಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

12 ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಒಟ್ಟು 18 ಕ್ರೀಡೆಗಳು ನಡೆಯಲಿವೆ. ಅವುಗಳ ಜೊತೆಗೆ ಆತಿಥೇಯ ರಾಜ್ಯವಾಗಿ ಕರ್ನಾಟಕವು ಕರಾಟೆಯನ್ನು ಕ್ರೀಡಾಕೂಟದಲ್ಲಿ ಸೇರಿಸಿದೆ. ಕ್ರೀಡಾಪಟುಗಳು ಸೇರಿದಂತೆ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ವಸತಿ, ಸಾರಿಗೆ, ಕ್ರೀಡಾ ಮೂಲಭೂತ ಸೌಕರ್ಯ, ಕ್ರೀಡಾ ಸಾಮಗ್ರಿ ಸೇರಿದಂತೆ ಊಟೋಪಚಾರವನ್ನು ರಾಜ್ಯ ಸರ್ಕಾರ ನೋಡಿಕೊಳ್ಳಲಿದೆ.

Second Edition of Khelo India University Games is scheduled to be Launched From March 5, 2022

ಖೇಲೊ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟದ ಎರಡನೇ ಆವೃತ್ತಿ ನಡೆಸಲು ಸುಮಾರು ರೂ. 40 ಕೋಟಿ ರೂ.ಗಳ ಅಂದಾಜು ವೆಚ್ಚ ನಿರ್ಧಾರ ಮಾಡಲಾಗಿದೆ. ಅದಕ್ಕೆ ರಾಜ್ಯ ಸರ್ಕಾರ ರೂ. 20 ಕೋಟಿ ರೂ. ಅನುದಾನ ನೀಡಲಿದೆ.

ಕ್ರೀಡಾಕೂಟದ ಸಂಘಟನೆಗಾಗಿ ಉನ್ನತಾಧಿಕಾರ ಸಮಿತಿ ರಚನೆ, ಆಯವ್ಯಯಕ್ಕೆ ಅನುಮೋದನೆ ಸೇರಿದಂತೆ ಪ್ರಮುಖ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ತೀರ್ಮಾನ ಮಾಡಲಾಗಿದೆ. ಕ್ರೀಡಾ ಸಚಿವ ಡಾ. ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚನೆಯಾಗಲಿದೆ. ಅದರ ಜೊತೆಗೆ ಇನ್ನೂ ಕೆಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

English summary
The decision to launch the second edition of the Khelo India University Games will be held from March 5, 2022. K.C. Narayana Gowda said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X