Virat Kohli: ಟಿ20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿಗಿಲ್ಲ ಸ್ಥಾನ!
ಜೂನ್ 2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಬಿಸಿಸಿಐ ಕೂಡ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಲು ಸಜ್ಜಾಗಿದೆ.
ಟಿ20 ವಿಶ್ವಕಪ್‌ಗೆ ಮುನ್ನ ಐಪಿಎಲ್ 2024ರ ಪಂದ್ಯಾವಳಿ ನಡೆಯಲಿದ್ದು, ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಭಾರತ ತಂಡಕ್ಕೆ ಆಯ್ಕೆಯಾಗುವ ಉತ್ತಮ ಅವಕಾಶ ಇದೆ. ಐಪಿಎಲ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಅಭಿಮಾನಿಗಳಿಗೆ ಆಘಾತ ಎದುರಾಗಿದ್ದು ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಆಯ್ಕೆಯಾಗುವುದು ಅನುಮಾನ ಎನ್ನಲಾಗಿದೆ.

ದಿ ಟೆಲಿಗ್ರಾಫ್ ಮಾಡಿರುವ ವರದಿಯ ಪ್ರಕಾರ, ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯುವ ಟಿ20 ವಿಶ್ವಕಪ್‌ಗೆ ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ.
ಅಜಿತ್ ಅಗರ್ಕರ್ ನಿರ್ಧಾರ ಅಂತಿಮ
ವರದಿಯ ಪ್ರಕಾರ ಕೊಹ್ಲಿಯನ್ನು ತಂಡದಿಂದ ಹೊರಗಿಡುವುದು ಖಚಿತವಾಗಿಲ್ಲ. ಆದರೆ ಐಪಿಎಲ್‌ನಲ್ಲಿ ಅವರ ಪ್ರದರ್ಶನ ಉತ್ತಮವಾಗಿಲ್ಲದೇ ಇದ್ದರೆ ಕಠಿಣ ನಿರ್ಧಾರ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ಅವರ ಸ್ಥಾನ ಖಚಿತವಾಗಲಿದೆ.
ರೋಹಿತ್ ಶರ್ಮಾ ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳುವುದು ಖಚಿತವಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇದನ್ನು ಖಚಿತಪಡಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಆಡುವ ಬಗ್ಗೆ ರೋಹಿತ್ ಶರ್ಮಾ ಮತ್ತು ಆಯ್ಕೆದಾರರ ಮುಖ್ಯಸ್ಥ ಅಜಿತ್ ಅಗರ್ಕರ್ ನಿರ್ಧಾರ ಮಾಡಲಿದ್ದಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವ ಕಾರಣ ಬಿಸಿಸಿಐ ಯಾರೊಬ್ಬರು ಕೂಡ ಇದರ ಬಗ್ಗೆ ಮಾತನಾಡಲು ಸಿದ್ದರಿಲ್ಲ ಎನ್ನಲಾಗಿದೆ.
ಮತ್ತೊಂದೆಡೆ, ಟೀಂ ಇಂಡಿಯಾವು ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರಂತಹ ಟಿ20 ವಿಶೇಷ ಆಟಗಾರರನ್ನು ಹೊಂದಿದೆ. ಹಾರ್ದಿಕ್ ಪಾಂಡ್ಯ ಕೂಡ ತಂಡಕ್ಕೆ ವಾಪಸಾಗುವುದು ಖಚಿತವಾಗಿದೆ.
ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ನಲ್ಲಿ ನಿಧಾನಗತಿಯ ವಿಕೆಟ್‌ಗಳು ಕೊಹ್ಲಿ ಬ್ಯಾಟಿಂಗ್ ಶೈಲಿಗೆ ಸರಿಹೊಂದುವುದಿಲ್ಲ ಎಂದು ವರದಿ ಹೇಳುತ್ತದೆ. ಟಿ20 ತಂಡದಲ್ಲಿ ಕೆಎಲ್ ರಾಹುಲ್ ಸ್ಥಾನ ಕೂಡ ಅಪಾಯದಲ್ಲಿದೆ, ರಿಷಬ್ ಪಂತ್ ಫಿಟ್ ಆಗಿದ್ದು, ಧ್ರುವ್ ಜುರೆಲ್ ಕೂಡ ಭರವಸೆ ಮೂಡಿಸಿದ್ದಾರೆ.
ಮೇ ತಿಂಗಳಿನಲ್ಲಿ ಬಿಸಿಸಿಐ ಟಿ20 ತಂಡವನ್ನು ಪ್ರಕಟಿಸಲಿದೆ. ಯುವ ಆಟಗಾರರ ತಂಡವನ್ನು ಮುನ್ನಡೆಸುವ ಹೊಣೆಯಂತೂ ರೋಹಿತ್ ಶರ್ಮಾ ಅವರ ಹೆಗಲ ಮೇಲಿದೆ.












Click it and Unblock the Notifications