Shakib Al Hasan: ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್; ಭಾರತದ ವಿರುದ್ಧವೇ ಕೊನೆಯ ಟೆಸ್ಟ್?

ಬಾಂಗ್ಲಾದೇಶದ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ವಿದಾಯ ಹೇಳುವ ಮೂಲಕ ಅವರ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದು, ಭಾರತದ ವಿರುದ್ಧ ಕಾನ್ಪುರದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯವೇ ತನ್ನ ಕೊನೆಯ ಟೆಸ್ಟ್ ಪಂದ್ಯವಾಗಲಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ತವರಿನಲ್ಲಿ ತನಗೆ ವಿದಾಯ ಪಂದ್ಯವನ್ನು ನೀಡದೇ ಇದ್ದರೆ, ಭಾರತದ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೆಸ್ಟ್‌ನಿಂದ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ. ಈ ಮೂಲಕ ತವರಿನಲ್ಲಿ ಅಭಿಮಾನಿಗಳ ಮುಂದೆ ವಿದಾಯ ಪಂದ್ಯ ಆಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದ ಸ್ಟಾರ್ ಆಲ್‌ರೌಂಡರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರೂ, ಫ್ರಾಂಚೈಸಿ ಲೀಗ್‌ಗಳಲ್ಲಿ ಆಡುತ್ತೇನೆ ಎಂದು ಹೇಳಿದ್ದಾರೆ.

Shakib Al Hasan Announces Retirement from T20 Internationals

ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "2024ರ ಟಿ20 ವಿಶ್ವಕಪ್‌ನಲ್ಲಿ ನನ್ನ ಕೊನೆಯ ಟಿ20 ಪಂದ್ಯವನ್ನು ಆಡಿದ್ದೇನೆ. ಆಯ್ಕೆದಾರರ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. 2026ರ ವಿಶ್ವಕಪ್‌ಗೆ ಬಲಿಷ್ಠ ತಂಡ ಕಟ್ಟಬೇಕಿದ್ದು, ನಾನು ಹೊರಬರಲು ಇದೇ ಸರಿಯಾದ ಸಮಯವಾಗಿದೆ. ಉತ್ತಮ ಆಟಗಾರರು ಅವಕಾಶ ಪಡೆಯುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತವರಿನಲ್ಲಿ ಕೊನೆಯ ಪಂದ್ಯ ಆಡುವ ಬಯಕೆ

"ಬಾಂಗ್ಲಾದೇಶದ ಮಿರ್‌ಪುರದಲ್ಲಿ ನನ್ನ ಕೊನೆಯ ಟೆಸ್ಟ್ ಆಡುವ ಆಸೆ ಇದೆ. ಬಾಂಗ್ಲಾದೇಶ ಕ್ರಿಕೆಟ್‌ ಬೋರ್ಡ್‌ಗೆ ನನ್ನ ಆಸೆಯನ್ನು ತಿಳಿಸಿದ್ದೇನೆ. ಬಿಸಿಬಿ ಕೂಡ ನನ್ನ ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಕೊನೆಯ ಟೆಸ್ಟ್ ಅನ್ನು ತವರಿನಲ್ಲಿ ಆಡುವ ವಿಶ್ವಾಸವಿದೆ" ಎಂದು ಹೇಳಿದರು. ಒಂದು ವೇಳೆ ತವರಿನಲ್ಲಿ ಕೊನೆಯ ಟೆಸ್ಟ್ ಆಡುವ ಕನಸು ನನಸಾಗದೇ ಇದ್ದರೆ ಭಾರತದ ವಿರುದ್ಧದ ಎರಡನೇ ಟೆಸ್ಟ್‌ ಕೊನೆಯ ಪಂದ್ಯವಾಗಲಿದೆ ಎಂದು ಹೇಳಿದರು.

ಶಕೀಬ್ ಅಲ್ ಹಸನ್ 70 ಟೆಸ್ಟ್ ಪಂದ್ಯಗಳನ್ನಾಡಿದ್ದು 4600 ರನ್ ಗಳಿಸಿದ್ದು, 242 ವಿಕೆಟ್ ಪಡೆದಿದ್ದಾರೆ. 129 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದು, 2551 ರನ್ ಗಳಿಸಿದ್ದಾರೆ. 149 ವಿಕೆಟ್ ಪಡೆದಿದ್ದಾರೆ.

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರ ಪದಚ್ಯುತಿ ವೇಳೆ ನಡೆದ ಗಲಭೆ ವೇಳೆ ಶಕೀಬ್ ಅಲ್ ಹಸನ್‌ರನ್ನು ಕೊಲೆ ಪ್ರಕರಣವೊಂದರಲ್ಲಿ ಆರೋಪಿ ಎಂದು ಹೆಸರಿಸಲಾಗಿತ್ತು, ಶೇಕ್ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದಿಂದ ಅವರು ಸಂಸತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+