T20 World Cup: ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ: RCB ಪ್ಲೇಯರ್‌ಗೆ ಉಪನಾಯಕ ಪಟ್ಟ
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲ ತಂಡಗಳು ತಮ್ಮ ತಂಡವನ್ನು ಪ್ರಕಟಿಸುತ್ತಿವೆ. ಇತ್ತೀಚಿಗೆ ಭಾರತ ಸಹ ತನ್ನ ತಂಡವನ್ನು ಪ್ರಕಟಿಸಿತ್ತು. ಶುಕ್ರವಾರ ವೆಸ್ಟ್ ಇಂಡೀಸ್ ತಂಡವನ್ನು ಸಹ ಪ್ರಕಟಿಸಲಾಗಿದೆ. ಐಪಿಎಲ್‌ನಲ್ಲಿ ಆಡುತ್ತಿರುವ ಆಟಗಾರರಿಗೆ ತಂಡದಲ್ಲಿ ಮಣೆ ಹಾಕಲಾಗಿದೆ.
ವೆಸ್ಟ್ ಇಂಡೀಸ್ ತಂಡ ಅನುಭವಿ ಹಾಗೂ ಯುವ ಆಟಗಾರರಿಂದ ಕೂಡಿದೆ. ಈ ತಂಡವನ್ನು ರೋವ್‌ಮನ್ ಪೊವೆಲ್‌ಗೆ ಮುನ್ನಡೆಸಲಿದ್ದಾರೆ. ಇದಲ್ಲದೇ ಉಪ ನಾಯಕತ್ವದ ಜವಾಬ್ದಾರಿಯನ್ನು ಆರ್‌ಸಿಬಿ ತಂಡದ ಆಟಗಾರ ಅಲ್ಜಾರಿ ಜೋಸೆಫ್ ಅವರಿಗೆ ನೀಡಲಾಗಿದೆ. ಹಲವು ಸ್ಟಾರ್ ಆಟಗಾರರಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ. ಐಪಿಎಲ್ 2024 ರಲ್ಲಿ ವೆಸ್ಟ್ ಇಂಡೀಸ್ ಆಟಗಾರರುನ ಭರ್ಜರಿಯಾಗಿ ಪ್ರದರ್ಶನ ನೀಡುತ್ತಿದ್ದಾರೆ.

ಆರ್‌ಸಿಬಿ ಪರ ಅಲ್ಜಾರಿ ಪ್ರದರ್ಶನ ಹೇಗಿದೆ?
ಆರ್‌ಸಿಬಿ ಪ್ರಸಕ್ತ ಐಪಿಎಲ್‌ನಲ್ಲಿ ಆಡುತ್ತಿರುವ ಅಲ್ಜಾರಿ ಜೋಸೆಫ್ ತಮ್ಮ ಕ್ಷಮತೆಗೆ ತಕ್ಕ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಇವರನ್ನು ಆರ್‌ಸಿಬಿ ಹರಾಜಿನಲ್ಲಿ ದುಬಾರಿ ಬೆಲೆಗೆ ಖರೀದಿಸಿತ್ತು. ಇವರು ಆರಂಭಿಕ ಮೂರು ಪಂದ್ಯಗಳಲ್ಲಿ ಬೌಲಿಂಗ್ ಮಾಡಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಅಲ್ಲದೆ ಇವರ ಎಕನಾಮಿ 11.90 ಆಗಿದೆ.
ಶಮರ್ ಜೋಸೆಫ್‌ಗೆ ಅವಕಾಶ
ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಸ್ಮರಣೀಯ ಬೌಲಿಂಗ್ ನಡೆಸಿದ ಶಮರ್ ಜೋಸೆಫ್ ಅವರಿಗೆ ತಂಡದಲ್ಲಿ ಮಣೆ ಹಾಕಲಾಗಿದೆ. ಇವರು ಗಾಬಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅಮೋಘ ದಾಳಿ ಸಂಘಟಿಸಿ ತಂಡದ ಜಯದಲ್ಲಿ ಮಿಂಚಿದ್ದರು. ಈ ಟೆಸ್ಟ್ ಪಂದ್ಯದಲಲ್ಇ ಇವರು 68 ರನ್ ನೀಡಿ ಏಳು ವಿಕೆಟ್ ಕಬಳಿಸಿದ್ದರು. ಅಲ್ಲದೆ ಐತಿಹಾಸಿಕ ಜಯದಲ್ಲಿ ಮಿಂಚಿದ್ದರು.
ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಹೊಡಿ ಬಡಿ ಆಟದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರುದರ್ಫೋರ್ಡ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

ಮೂರನೇ ಕಪ್ ಗೆಲುವಿನ ಕನಸು
ವೆಸ್ಟ್ ಇಂಡೀಸ್ ತಂಡ 2012ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. 2016ರಲ್ಲಿ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಂಡೀಸ್ ತಂಡ ಕಪ್‌ಗೆ ಮುತ್ತಿಟ್ಟಿತ್ತು. ಈಗ ಮೂರನೇ ಬಾರಿಗೆ ಪ್ರಶಸ್ತಿಯನ್ನು ಎತ್ತುವ ಕನಸಿನಲ್ಲಿದೆ.
ವೆಸ್ಟ್ ಇಂಡೀಸ್ ತಂಡ: ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರುದರ್ಫೋರ್ಡ್ ರೊಮಾರಿಯೋ ಶೆಫರ್ಡ್.
ಗುಂಪು ಎ: ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್‌ಎ
ಗುಂಪು ಬಿ: ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್
ಗುಂಪು ಸಿ: ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡಾ, ಪಪುವಾ ನ್ಯೂ ಗಿನಿಯಾ
ಗುಂಪು ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications