ಟೆಸ್ಟ್, ಟಿ20 ಸರಣಿಗೆ ಮುನ್ನ ಭಾರತಕ್ಕೆ ಶಾಕ್ ಕೊಟ್ಟ ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸಮೀಪಿಸುತ್ತಿರುವ ಸಮಯದಲ್ಲೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಪ್ರಮುಖ ವೇಗಿ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

2023ರ ಏಕದಿನ ವಿಶ್ವಕಪ್ ಪಂದ್ಯಾವಳಿ ಸಮಯದಲ್ಲಿ ಮೊಹಮ್ಮದ್ ಶಮಿ ಗಾಯದ ನಡುವೆಯೇ ಆಡಿದ್ದರು. ನಂತರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಮಿಗೆ ವಿಶ್ರಾಂತಿ ನೀಡಲಾಯಿತು.

Shami Doubtful for Initial IND vs ENG Tests, Suryakumar Yadav to Miss Start of IPL 2024

ಸದ್ಯ ವಿಶ್ರಾಂತಿ ಪಡೆಯುತ್ತಿರುವ ಮೊಹಮ್ಮದ್ ಶಮಿ ಇನ್ನೂ ಬೌಲಿಂಗ್ ಅಭ್ಯಾಸ ಆರಂಭಿಸಬೇಕಿದೆ. ಅವರು ಇಂಗ್ಲೆಂಡ್ ವಿರುದ್ಧದ ಸೆಣಿಯ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಮಿ ಭಾರತ ತಂಡಕ್ಕೆ ಮರಳುವ ಮೊದಲು ಎನ್ ಸಿಎ ನಲ್ಲಿ ತಮ್ಮ ಫಿಟ್ ನೆಸ್ ಸಾಬೀತು ಮಾಡಬೇಕಿದೆ. ಅಲ್ಲಿ ಅವರು ಫಿಟ್ ಎಂದು ಘೋಷಿಸಿದ ನಂತರವೇ ತಂಡಕ್ಕೆ ಮರಳಲು ಅವಕಾಶ ಸಿಗಲಿದೆ.

ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಅವರ ಅನುಪಸ್ಥಿತಿ ಕಾಡಲಿದೆ. ಸಿರಾಜ್, ಬುಮ್ರಾ ಜೊತೆಗೆ ಮತ್ತೊಬ್ಬ ವೇಗಿಯಾಗಿ ಬಿಸಿಸಿಐ ಯಾರಿಗೆ ಅವಕಾಶ ನೀಡುತ್ತೆ ನೋಡಬೇಕಿದೆ.

Shami Doubtful for Initial IND vs ENG Tests, Suryakumar Yadav to Miss Start of IPL 2024

ಗಾಯಗೊಂಡಿರುವ ಸೂರ್ಯಕುಮಾರ್ ಯಾದವ್

ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದ್ದು ಸೂರ್ಯಕುಮಾರ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಸೂರ್ಯ ಗಾಯಗೊಂಡಿದ್ದು, ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಏಕದಿನ ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಆಡಿದ್ದ ಸೂರ್ಯಕುಮಾರ್ ಯಾದವ್, ಬಳಿಕ ವಿಶ್ರಾಂತಿಯಲ್ಲಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕನಿಷ್ಠ 8-9 ವಾರಗಳ ವಿಶ್ರಾಂತಿಯ ಅಗತ್ಯವಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. 2024ರ ಐಪಿಎಲ್ ಆರಂಭದ ವೇಳೆಗೆ ಅವರು ಫಿಟ್ ಆಗುವ ಸಾಧ್ಯತೆ ಇದೆ. ಟಿ20 ವಿಶ್ವಕಪ್ ಇರುವ ಕಾರಣ, ಸೂರ್ಯ ಫಿಟ್ನೆಸ್ ಬಗ್ಗೆ ಬಿಸಿಸಿಐ ಹೆಚ್ಚಿನ ಕಾಳಜಿ ವಹಿಸಲಿದೆ.

"ಸೂರ್ಯಕುಮಾರ್ ಯಾದವ್ ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ. ಅವರು ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ತರಬೇತಿ ಪ್ರಾರಂಭಿಸಲು ಎಂಟರಿಂದ ಒಂಭತ್ತು ವಾರ ಸಮಯ ತೆಗೆದುಕೊಳ್ಳಬಹುದು. ಅವರು ಐಪಿಎಲ್ ವೇಳೆಗೆ ಫಿಟ್ ಆಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+