ಟಿ20 ವಿಶ್ವಕಪ್ 2026 ಫೈನಲ್: ಕಿವೀಸ್ ಬೌಲರ್ಗಳ ವಿರುದ್ಧ ಟೀಂ ಇಂಡಿಯಾ ಬ್ಯಾಟರ್ಗಳ ದಂಡಯಾತ್ರೆ: ಮಿಂಚಿದ ಶಿವಂ ದುಬೆ
T20 World Cup 2026 Final: ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ನ ನೆರವಿನಿಂದ ಭಾರತ ತಂಡವು 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 255 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ಇನ್ನಿಂಗ್ಸ್ನ ಅಂತಿಮ ಹಂತದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್ ಶಿವಂ ದುಬೆ, ಕೇವಲ 8 ಎಸೆತಗಳಲ್ಲಿ ಅಜೇಯ 26 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು ಗಗನಕ್ಕೇರಿಸಿದರು. ಅದರಲ್ಲೂ, ಜೇಮ್ಸ್ ನೀಶಮ್ ಅವರ ಅಂತಿಮ ಓವರ್ನಲ್ಲಿ ದುಬೆ ಬರೋಬ್ಬರಿ 24 ರನ್ ದೋಚಿದರು.

ಈ ಬೃಹತ್ ಗುರಿಯನ್ನು ಬೆನ್ನಟ್ಟಲು ಸಜ್ಜಾಗಿರುವ ಕಿವೀಸ್ ಪಡೆಗೆ ಇದು ಕಠಿಣ ಸವಾಲಾಗಲಿದೆ. ಸದ್ಯದ ಫಾರ್ಮ್ ಮತ್ತು ಅಹಮದಾಬಾದ್ನ ಪಿಚ್ನ ಸ್ಥಿತಿಯನ್ನು ಗಮನಿಸಿದರೆ, ಭಾರತ ತಂಡ ಸತತ ಎರಡನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿಹಿಡಿಯುವ ಭರವಸೆಯಲ್ಲಿದೆ.
ಅಹಮದಾಬಾದ್ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬೃಹತ್ 255 ರನ್ಗಳನ್ನು ಕಲೆಹಾಕಿದೆ. ಆರಂಭದಲ್ಲಿ ಜವಾಬ್ದಾರಿಯುತವಾಗಿ ಆಟವಾಡಿದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ, ನಂತರ ಅಬ್ಬರಿಸಿದರು. ಈ ಜೋಡಿಯು ಕೇವಲ 7.1 ಓವರ್ಗಳಲ್ಲಿ 98 ರನ್ಗಳನ್ನು ಕಲೆಹಾಕಿ ತಂಡಕ್ಕೆ ಉತ್ತಮ ಆರಂಭ ಒದಗಿಸಿತು.
ಮೂರನೇ ಬಾರಿ ಶತಕ ವಂಚಿತರಾದ ಸಂಜು
ಕೇವಲ 21 ಎಸೆತಗಳಲ್ಲಿ 52 ರನ್ ಗಳಿಸಿ ಮಿಂಚಿದರು. ಸ್ಯಾಮ್ಸನ್ 46 ಎಸೆತಗಳಲ್ಲಿ 89 ರನ್ ಸಿಡಿಸಿದರು. ಇದು ಸ್ಯಾಮ್ಸನ್ ಅವರ ಸತತ ಮೂರನೇ ಅರ್ಧಶತಕವಾಗಿದೆ. ಸತತ ಮೂರನೇ ಬಾರಿಗೆ ವಿಶ್ವಕಪ್ ಶತಕ ವಂಚಿತರಾದರೂ, ಅವರ ಆಟ ಮಾತ್ರ ಅಮೋಘವಾಗಿತ್ತು. ಇಶಾನ್ ಕಿಶನ್ 25 ಎಸೆತಗಳಲ್ಲಿ 54 ರನ್ ಚಚ್ಚುವ ಮೂಲಕ ರನ್ ವೇಗವನ್ನು ಹೆಚ್ಚಿಸಿದರು.
16ನೇ ಓವರ್ನಲ್ಲಿ ನ್ಯೂಜಿಲೆಂಡ್ ಬೌಲರ್ ಜೇಮ್ಸ್ ನೀಶಮ್ ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ಗಳನ್ನು ಕಬಳಿಸುವ ಮೂಲಕ ಭಾರತಕ್ಕೆ ಸ್ವಲ್ಪ ಒತ್ತಡ ಹೇರಿದರು. ಆದರೆ, ಅಂತಿಮ ಹಂತದಲ್ಲಿ ಕಣಕ್ಕಿಳಿದ ಶಿವಂ ದುಬೆ, ಕೇವಲ 8 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ಗಳ ನೆರವಿನಿಂದ ಅಜೇಯ 26 ರನ್ ಗಳಿಸಿ, ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಈಗ ನ್ಯೂಜಿಲೆಂಡ್ ತಂಡವು 256 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ಸಜ್ಜಾಗಿದೆ.
ಯಾರು ಎಷ್ಟು ರನ್ ಬಾರಿಸಿದರು?
ಭಾರತದ ಪರ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ 87(46), ಅಭಿಷೇಕ್ ಶರ್ಮಾ 52(21), ಇಶಾನ್ ಕಿಶನ್ 54(25), ಹಾರ್ದಿಕ್ ಪಾಂಡ್ಯ 18(13), ತಿಲಕ್ ವರ್ಮಾ ಅಜೇಯ 8 ರನ್ ಗಳಿಸಿದರೆ, ಶಿವ ದುಬೆ ಅಜೇಯ 26 ರನ್ಗಳನ್ನು ಬಾರಿಸಿ ತಂಡದ ಬೃಹತ್ ಮೊತ್ತಕ್ಕೆ ಪ್ರಮುಖ ಪಾತ್ರವಹಿಸಿದರು. ಇನ್ನೂ ಎದುರಾಳಿ ನ್ಯೂಜಿಲೆಂಡ್ ತಂಡದ ಬೌಲಿಂಗ್, ಫೀಲ್ಡಿಂಗ್ ಕೂಡ ಉತ್ತಮವಾಗಿದ್ದು, ಕಂಡುಬಂದಿತು. ನ್ಯೂಜಿಲೆಂಡ್ ಪರ ಬೌಲಿಂಗ್ ಮಾಡಿದ ಮ್ಯಾಟ್ ಹೆನ್ರಿ ಹಾಗೂ ರಚಿನ್ ರವೀಂದ್ರ ತಲಾ ಒಂದು ವಿಕೆಟ್ ಪಡೆದರೆ, ಜೇಮ್ಸ್ ನೀಶಮ್ ಮೂರು ವಿಕೆಟ್ಗಳನ್ನು ಕಬಳಿಸಿದರು.
ಟೀಂ ಇಂಡಿಯಾ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಟಿಮ್ ಸೀಫರ್ಟ್ (ವಿಕೆಟ್ ಕೀಪರ), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications