Abhinav Manohar: ಅಭಿನವ್ ಅಬ್ಬರಕ್ಕೆ ಬೆಚ್ಚಿದ ಹುಬ್ಬಳ್ಳಿ ಟೈಗರ್ಸ್; ಶಿವಮೊಗ್ಗ ಲಯನ್ಸ್‌ಗೆ ಭರ್ಜರಿ ಗೆಲುವು

ಶನಿವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024 ರ ಪಂದ್ಯಾವಳಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ವಿರುದ್ಧದ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಅಭಿನವ್ ಮನೋಹರ್ ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಶಿವಮೊಗ್ಗ ಲಯನ್ಸ್ ಹುಬ್ಬಳ್ಳಿ ಟೈಗರ್ಸ್ ಅನ್ನು ಸೋಲಿಸಿದೆ.

ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ಟೈಗರ್ಸ್ 19.3 ಓವರ್ ಗಳಲ್ಲಿ 141 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಾಯಕ ಮನೀಷ್ ಪಾಂಡೆ 31 ಎಸೆತಗಳಲ್ಲಿ 44 ರನ್ ಗಳಿಸಿದರೆ, ಮನ್ವಂತ್ ಕುಮಾರ್ 13 ಎಸೆತಗಳಲ್ಲಿ 28 ರನ್ ಗಳಿಸಿದರು. ಕೃಷ್ಣನ್ ಶ್ರೀಜಿತ್ 25 ರನ್ ಗಳಿಸಿದರು.

Shivamogga Lions won by 6 wkts against Hubli Tigers

ಶಿವಮೊಗ್ಗ ಲಯನ್ಸ್ ಪರವಾಗಿ ವಿ ಕೌಶಿಕ್ 4 ಓವರ್ ಗಳಲ್ಲಿ 12 ರನ್ ನೀಡಿ 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಅವಿನಾಶ್ ಡಿ 2.3 ಓವರ್ ಗಳಲ್ಲಿ 34 ರನ್ ಬಿಟ್ಟುಕೊಟ್ಟರು 3 ವಿಕೆಟ್ ಪಡೆದರು. ಆನಂದ್ ದೊಡ್ಡಮನಿ, ಡಿ ಅಶೋಕ್ ಮತ್ತು ಹಾರ್ದಿಕ್ ರಾಜ್ ತಲಾ ಒಂದು ವಿಕೆಟ್ ಪಡೆದರು.

ಅಭಿನವ್ ಮನೋಹರ ಆಟ

142 ರನ್‌ಗಳ ಗುರಿಯನ್ನು ಬೆನ್ನತ್ತಿದ ಶಿವಮೊಗ್ಗ ಲಯನ್ಸ್‌ 15.1 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 147 ರನ್ ಗಳಿಸುವ ಮೂಲಕ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಧೀರಜ್ ಮೋಹನ್ 17 ರನ್ ಗಳಿಸಿದರೆ, ನಿಹಾಲ್ ಉಳ್ಳಾಲ್ 37 ರನ್ ಗಳಿಸಿದರು. ಅಭಿನವ್ ಮನೋಹರ್ ಕೇವಲ 27 ಎಸೆತಗಳಲ್ಲಿ 2 ಬೌಂಡರಿ 9 ಭರ್ಜರಿ ಸಿಕ್ಸರ್ ಸಹಿತ 70 ರನ್ ಗಳಿಸಿದರು. ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಶಿವಮೊಗ್ಗ ಲಯನ್ಸ್ 15.1 ಓವರ್ ಗಳಲ್ಲಿ 147 ರನ್ ಗಳಿಸಿ ಸುಲಭ ಗೆಲುವು ಸಾಧಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+