Shreyanka Patil: ಭಾರತ ತಂಡಕ್ಕೆ ಆಘಾತ; ಏಷ್ಯಾಕಪ್‌ನಿಂದ ಹೊರಬಿದ್ದ ಶ್ರೇಯಾಂಕಾ ಪಾಟೀಲ್‌

ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಮಹಿಳಾ ಏಷ್ಯಾಕಪ್‌ 2024ರ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದ್ದ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಬೌಲರ್ ಶ್ರೇಯಾಂಕಾ ಪಾಟೀಲ್‌ ಏಷ್ಯಾಕಪ್‌ನಿಂದಲೇ ಹೊರಬಿದ್ದಿದ್ದಾರೆ.

ಸ್ಟಾರ್ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಬೆರಳಿನ ಮೂಳೆ ಮುರಿತದಿಂದಾಗಿ ಏಷ್ಯಾಕಪ್‌ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಪಾಕಿಸ್ತಾನದ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದ ಶ್ರೇಯಾಂಕಾ ಮುಂದಿನ ಪಂದ್ಯಗಳಿಂದ ಹೊರಗುಳಿದಿರುವುದು ಭಾರತ ತಂಡಕ್ಕೆ ಹಿನ್ನಡೆಯಾಗಿದೆ.

Shreyanka Patil Out of Asia Cup Due to Fractured Finger Major Setback for India

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ಶ್ರೇಯಾಂಕಾ ಪಾಟೀಲ್ ಅನುಪಸ್ಥಿತಿಯನ್ನು ಖಚಿತಪಡಿಸಿದೆ. ಜುಲೈ 18 ರಂದು ಪಾಕಿಸ್ತಾನ ವಿರುದ್ಧದ ಭಾರತದ ಆರಂಭಿಕ ಪಂದ್ಯದ ವೇಳೆ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಅವರು ಗಾಯಗೊಂಡಿದ್ದಾರೆ.

ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡರೂ ಶ್ರೇಯಾಂಕಾ ಪಾಟೀಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 3.2 ಓವರ್‌ಗಳನ್ನು ಬೌಲಿಂಗ್ ಮಾಡಿ ಕೇವಲ 14 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು, ಭಾರತದ ಮಾರಕ ಬೌಲಿಂಗ್‌ ದಾಳಿಗೆ ಸಿಲುಕಿ ಪಾಕಿಸ್ತಾನ 108 ಕ್ಕೆ ಆಲೌಟ್ ಆಯಿತು.

ಹಲವು ಬಾರಿ ಗಾಯದ ಸಮಸ್ಯೆ

ದುರದೃಷ್ಟವಶಾತ್ ಶ್ರೇಯಾಂಕಾ ಪಾಟೀಲ್ ಅವರು ಈ ವರ್ಷ ಬೆರಳಿನ ಗಾಯದಿಂದ ಹೋರಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ, ಬೆರಳು ಮುರಿದುಕೊಂಡಿದ್ದರು ಇದರಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗಾಗಿ ಕೆಲವು ಪಂದ್ಯಗಳಲ್ಲಿ ಆಡಿರಲಿಲ್ಲ.

ವಿಶ್ರಾಂತಿ ಬಳಿಕ ಮತ್ತೆ ಕಣಕ್ಕಿಳಿದ ಶ್ರೇಯಾಂಕಾ ಪಾಟೀಲ್‌ ಅಮೋಘ ಪ್ರದರ್ಶನ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಫೈನಲ್‌ನಲ್ಲಿ ನಿರ್ಣಾಯಕ ನಾಲ್ಕು ವಿಕೆಟ್‌ಗಳನ್ನು ಪಡೆದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದ ಅವರು, ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದರು.

ತನುಜಾ ಕನ್ವರ್ ಆಯ್ಕೆ

ಗಾಯಗೊಂಡಿರುವ ಶ್ರೇಯಾಂಕಾ ಪಾಟೀಲ್ ಬದಲಿಗೆ ಎಡಗೈ ಸ್ಪಿನ್ನರ್ ತನುಜಾ ಕನ್ವರ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಕನ್ವರ್ ಕೂಡ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು, ಗುಜರಾತ್ ಜೈಂಟ್ಸ್ ತಂಡಕ್ಕಾಗಿ ಆಡಿದ ಅವರು, 10 ವಿಕೆಟ್ ಪಡೆದರು.

ತನುಜಾ ಕನ್ವರ್ ಅವರು ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. . ಆಗಸ್ಟ್ ಆರಂಭದಲ್ಲಿ ಆರಂಭವಾಗಲಿರುವ ಭಾರತ ಎ ತಂಡದ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೂ ಕನ್ವರ್ ಆಯ್ಕೆಯಾದರು.

ಭಾರತವು ತನ್ನ ಆರಂಭಿಕ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಏಳು ವಿಕೆಟ್‌ಗಳಿಂದ ಆರಾಮವಾಗಿ ಗೆದ್ದಿದ್ದರೂ, ಶ್ರೇಯಾಂಕಾ ಪಾಟೀಲ್ ಅವರ ಅನುಪಸ್ಥಿತಿಯು ಅವರ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+