IPL Auction 2024: ಆರ್​ಸಿಬಿ ತಂಡಕ್ಕೆ ಕರ್ನಾಟಕ ಆಲ್‌ರೌಂಡರ್ ಎಂಟ್ರಿ ಪಕ್ಕಾ?

2024 ಐಪಿಎಲ್ ಮಿನಿ ಹರಾಜಿಗೆ ಎಲ್ಲಾ ತಂಡಗಳು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿವೆ, ಡಿಸೆಂಬರ್ 19ರಂದು ದುಬೈನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಕರ್ನಾಟಕದ ಕ್ರಿಕೆಟಿಗರು ಕೂಡ ಈ ಬಾರಿ ಐಪಿಎಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕರ್ನಾಟಕದ ಆಟಗಾರರ ಬಗ್ಗೆ ಆರ್​ಸಿಬಿ ಕಡೆಗಣೆಸುತ್ತಲೇ ಬಂದಿರುವುದು ಎಲ್ಲರಿಗೂ ಗೊತ್ತೇ ಇದೆ. ಕೆಎಲ್ ರಾಹುಲ್, ಪ್ರಸಿದ್ಧ್ ಕೃಷ್ಣ, ದೇವದತ್ ಪಡಿಕ್ಕಲ್, ಮನೀಷ್ ಪಾಂಡೆ, ಕರುಣ್ ನಾಯರ್, ಮಯಾಂಕ್ ಅಗರ್ವಾಲ್, ಅಭಿನವ್ ಮನೋಹರ್, ವಿದ್ವತ್ ಕಾವೇರಪ್ಪ ಅಂತಹ ಆಟಗಾರರು ಇಂದು ಹಲವು ತಂಡಗಳಲ್ಲಿ ಆಡಿ ಮಿಂಚಿದ್ದಾರೆ. ಮನೀಷ್ ಪಾಂಡೆ ಮತ್ತು ಕರುಣ್ ನಾಯರ್ ಅವರನ್ನು ಬಿಡುಗಡೆ ಮಾಡಿದ್ದು, ಹರಾಜಿನಲ್ಲಿ ನೋಂದಾಯಿಸಿಕೊಂಡಿದ್ದಾರೆ.

 Shreyas Gopal Attended RCB Trials Ahead Of The IPL Auction 2024

ಕಳೆದ ಬಾರಿ ಆರ್​ಸಿಬಿ ಆಲ್‌ರೌಂಡರ್ ಮನೋಜ್ ಭಾಂಡಗೆ, ಬೌಲರ್ ವೈಶಾಖ್ ವಿಜಯ್‌ ಕುಮಾರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ವೈಶಾಖ್ ಹಲವು ಪಂದ್ಯಗಳಲ್ಲಿ ಅವಕಾಶ ಪಡೆದರೂ ಆಲ್‌ರೌಂಡರ್ ಬಾಂಢಗೆ ಮಾತ್ರ ಬೆಂಚ್ ಕಾದರು. ಆರ್​ಸಿಬಿ ಮ್ಯಾನೆಜ್‌ಮೆಂಟ್‌ನ ಈ ನಡೆಗೆ ಕರ್ನಾಟಕ ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಮತ್ತೊಬ್ಬ ಕನ್ನಡಿಗ ಆರ್​ಸಿಬಿ ತಂಡಕ್ಕೆ

ಈ ಬಾರಿಯಾದರೂ ಕರ್ನಾಟಕದ ಪ್ರತಿಭಾವಂತ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಿ ಎಂದು ಈಗಾಗಲೇ ಆರ್​ಸಿಬಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಒತ್ತಾಯ ಮಾಡುತ್ತಿದ್ದಾರೆ. ಪ್ರಮುಖ ಆಲ್‌ರೌಂಡರ್ ಶ್ರೇಯಸ್ ಗೋಪಾಲ್ ಅವರನ್ನು ಆರ್​ಸಿಬಿ ಟ್ರಯಲ್ಸ್‌ಗೆ ಕರೆದಿದ್ದು, ಅವರು ಚಿನ್ನಸ್ವಾಮಿಯಲ್ಲಿ ಟ್ರಯಲ್ಸ್‌ ನೀಡಿದ್ದಾರೆ.

ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಅಭಿಮಾನಿಗಳು ಆರ್​ಸಿಬಿ ಶ್ರೇಯಸ್ ಗೋಪಾಲ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಆಲ್‌ರೌಂಡರ್ ಆಗಿರುವ ಶ್ರೇಯಸ್ ಗೋಪಾಲ್ ಉತ್ತಮ ಆಟಗಾರ. ಉತ್ತಮ ಫೀಲ್ಡರ್ ಕೂಡ ಆಗಿದ್ದು ಬೆಂಗಳೂರಿನಲ್ಲಿ ಆಡಿರುವ ಅನುಭವ ಹೊಂದಿದ್ದು ಅವರು ಖಂಡಿತ ಉತ್ತಮ ಆಯ್ಕೆ ಆಗುತ್ತಾರೆ ಎನ್ನುವ ಲೆಕ್ಕಾಚಾರ ಕ್ರಿಕೆಟ್ ಪ್ರೇಮಿಗಳದ್ದಾಗಿದೆ.

ಈ ಬಾರಿಯಾದರೂ ಮನೋಜ್ ಭಾಂಡಗೆ ಅವರಿಗೆ ಅವಕಾಶ ಕೊಡಲಿ ಎಂದು ಅಭಿಮಾನಿಗಳು ಆಶಿಸಿದ್ದಾರೆ. ಅದರ ಜೊತೆಗೆ ರಾಜ್ಯದ ಹಲವು ಪ್ರತಿಭಾವಂತ ಆಟಗಾರರನ್ನು ಆರ್​ಸಿಬಿ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡಿರುವ ಆರ್​ಸಿಬಿ ಟ್ರೇಡಿಂಗ್ ಮೂಲಕ ಆಸ್ಟ್ರೇಲಿಯಾ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆರ್​ಸಿಬಿ ಬಳಿ 23.25 ಕೋಟಿ ರೂಪಾಯಿ ಪರ್ಸ್ ಹೊಂದಿದ್ದು, ಬೌಲಿಂಗ್ ಬಲವನ್ನು ಹೆಚ್ಚಿಸಿಕೊಳ್ಳಲು ಪ್ರಮುಖ ಬೌಲರ್ ಗಳನ್ನು ಖರೀದಿಸುವ ಲೆಕ್ಕಾಚಾರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+