Shreyas Iyer: ಮುಂಬೈ ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ; ಸೂರ್ಯಕುಮಾರ್ ಯಾದವ್ ಅಲಭ್ಯ
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಪಂದ್ಯಾವಳಿ ನವೆಂಬರ್ 23ರಿಂದ ಆರಂಭವಾಗಲಿದ್ದು ಎಲ್ಲಾ ರಾಜ್ಯಗಳು ತಂಡವನ್ನು ಪ್ರಕಟಿಸುತ್ತಿವೆ. ಭಾನುವಾರ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಹಿರಿಯ ಆಯ್ಕೆ ಸಮಿತಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಗಾಗಿ ಮುಂಬೈ ಟಿ20 ತಂಡವನ್ನು ಆಯ್ಕೆ ಮಾಡಿದೆ. ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.
2024ಎ ಐಪಿಎಲ್‌ನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಚಾಂಪಿಯನ್ ಆಗಿತ್ತು. ತಂಡದ ಪ್ರದರ್ಶನ ಉತ್ತಮವಾಗಿದ್ದರು, ನಾಯಕನಾಗಿ ಶ್ರೇಯಸ್ ಅಯ್ಯರ್ ಅಂತಹ ಪ್ರದರ್ಶನವನ್ನೇನು ನೀಡಿರಿಲಿಲ್ಲ. ಮೆಗಾ ಹರಾಜಿಗೆ ಮುನ್ನ ಕೆಕೆಆರ್ ಶ್ರೇಯಸ್ ಅಯ್ಯರ್ ಅವರನ್ನು ಬಿಡುಗಡೆ ಮಾಡಿದ್ದು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2024ರ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ನಾಯಕತ್ವ ನಿರ್ವಹಿಸಿದ್ದರಿಂದ, ಎಂಸಿಎ ಆಯ್ಕೆದಾರರು ಶ್ರೇಯಸ್ ಅಯ್ಯರ್ ಅವರನ್ನೇ ಮುಂಬೈ ಟಿ 20 ತಂಡದ ನಾಯಕನನ್ನಾಗಿ ಮಾಡಲು ಆಸಕ್ತಿ ತೋರಿಸಿದ್ದಾರೆ. ರಣಜಿ ಟ್ರೋಫಿ ಋತುವಿನಲ್ಲಿ ಮುಂಬೈ ತಂಡವನ್ನು ಮುನ್ನಡೆಸುತ್ತಿರುವ ಅಜಿಂಕ್ಯ ರಹಾನೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ.
ಶ್ರೇಯಸ್ ಅಯ್ಯರ್ ಸಾಮರ್ಥ್ಯದ ಬಗ್ಗೆ ಆಯ್ಕೆದಾರರು ನಂಬಿಕೆ ಇಟ್ಟುಕೊಂಡಿದ್ದು, ಈ ನಿರ್ಧಾರದ ಬಗ್ಗೆ ಈಗಾಗಲೆ ರಹಾನೆಗೆ ತಿಳಿಸಿರುವ ಕಾರಣ ಯಾವುದೇ ವಿವಾದ, ಮನಸ್ತಾಪಕ್ಕೆ ಅವಕಾಶವಿಲ್ಲ ಎಂದು ವರದಿಯಾಗಿದೆ.
ಮರಳಿದ ಪೃಥ್ವಿ ಶಾ
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬೈ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದ ಪೃಥ್ವಿ ಶಾ, ಟಿ20 ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೃಥ್ವಿ ಶಾ ಫಿಟ್‌ನೆಸ್ ಸುಧಾರಿಸಲು ಗಮನಹರಿಸುತ್ತಿದ್ದ ಕಾರಣ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
ಆಲ್‌ರೌಂಡರ್ ಶಿವಂ ದುಬೆ, ಮುಶೀರ್ ಖಾನ್ ಮತ್ತು ತುಷಾರ್ ದೇಶಪಾಂಡೆ ಇನ್ನೂ ಗಾಯದಿಂದ ಸಂಪೂರ್ಣವಾಗಿ ಸುಧಾರಿಸಿಕೊಂಡಿಲ್ಲದ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ.
ಶ್ರೇಯಸ್ ಅಯ್ಯರ್ ಈ ಬಾರಿ ಮೆಗಾ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಹರಾಜಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್ ಮತ್ತು ಆರ್ ಸಿಬಿ ತಂಡಗಳು ಅಯ್ಯರ್ ಗಾಗಿ ಸ್ಪರ್ಧೆಗೆ ಇಳಿಯಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಮುಂಬೈ ಟಿ20 ತಂಡ
ಶ್ರೇಯಸ್ ಅಯ್ಯರ್ (ನಾಯಕ), ಪೃಥ್ವಿ ಶಾ, ಆಂಗ್‌ಕ್ರಿಶ್ ರಘುವಂಶಿ, ಜೇ ಬಿಸ್ತಾ, ಅಜಿಂಕ್ಯ ರಹಾನೆ, ಸಿದ್ಧೇಶ್ ಲಾಡ್, ಸೂರ್ಯಾಂಶ್ ಶೆಡ್ಗೆ, ಸಾಯಿರಾಜ್ ಪಾಟೀಲ್, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಆಕಾಶ್ ಆನಂದ್ (ವಿಕೆಟ್ ಕೀಪರ್), ಶಮ್ಸ್ ಕೊಟ್ಯಾನಿ, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್, ಮೋಹಿತ್ ಅವಸ್ತಿ, ರಾಯ್ಸ್ಟನ್ ಡಯಾಸ್, ಜುನೆದ್ ಖಾನ್.












Click it and Unblock the Notifications