ಟೀಂ ಇಂಡಿಯಾ ಟಿ20 ಕ್ರಿಕೆಟ್‌ನಿಂದ ಸೂರ್ಯಕುಮಾರ್ ಔಟ್.. ಅಯ್ಯರ್‌ಗೆ ಒಲಿದ ನಾಯಕನ ಪಟ್ಟ, ಉಪನಾಯಕ ಯಾರು?

Team India T20 Captain: ಟೀಮ್ ಇಂಡಿಯಾ ಪುರುಷರ ಹಿರಿಯರ ತಂಡದ ಟಿ20 ಕ್ರಿಕೆಟ್‌ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ನಾಯಕರನ್ನಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಮಾಡಿದೆ. ಯುವ ಆಟಗಾರ ತಿಲಕ್ ವರ್ಮಾ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೂಲಗಳ ಪ್ರಕಾರ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿಯ ಸದಸ್ಯರು ಶ್ರೇಯಸ್ ಅಯ್ಯರ್ ಅವರನ್ನು ಟಿ20 ನಾಯಕನನ್ನಾಗಿ ಮತ್ತು ತಿಲಕ್ ವರ್ಮಾ ಅವರನ್ನು ಉಪನಾಯಕನನ್ನಾಗಿ ನೇಮಿಸಲು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Shreyas Iyer Replaces Suryakumar Yadav as Team India T20 Captain BCCI Set for Leadership Change

ಅಧಿಕಾರಿಗಳ ಒಪ್ಪಿಗೆ

ಗುರುವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಟಿ20 ನಾಯಕತ್ವದ ಕುರಿತು ಅಧಿಕೃತವಾಗಿ ಚರ್ಚೆ ನಡೆಯದಿದ್ದರೂ, ಮಂಡಳಿಯ ಉನ್ನತ ಅಧಿಕಾರಿಗಳು ಅಯ್ಯರ್ ಮತ್ತು ತಿಲಕ್ ವರ್ಮಾ ಅವರ ನೇಮಕಾತಿಗೆ ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲು ಜೂನ್ 6ರಂದು ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ಶ್ರೇಯಸ್ ಅಯ್ಯರ್ ಕೂಡ ಭಾಗವಹಿಸುವ ಸಾಧ್ಯತೆಯಿದೆ.

ಎಕೆವೈಗೆ ನಾಯಕತ್ವ ಕೈ ತಪ್ಪಿದ್ದೇಕೆ?

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ 2026ರ ಚಾಂಪಿಯನ್ ಪಟ್ಟವನ್ನು ಅಲಂಕರಿಸಿ ಈ ಟ್ರೋಫಿಯನ್ನು ಸತತವಾಗಿ ಡಿಫೆಂಡ್ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಟೂರ್ನಿಯಲ್ಲಿ ಸೂರ್ಯಕುಮಾರ್ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ಅವರು ಒಟ್ಟು 9 ಪಂದ್ಯಗಳಲ್ಲಿ ಕೇವಲ 242 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಅಷ್ಟೇ ಅಲ್ಲದೆ ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2026ರ ಸೀಸನ್‌ನಲ್ಲೂ ಮುಂಬೈ ಇಂಡಿಯನ್ಸ್ ಪರ ಆಡಿದ್ದ ಅವರು ಕೇವಲ 270 ರನ್ ಗಳಿಸಿದ್ದರು. ಇದು ಮುಂಬೈ ತಂಡವು ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿಯಲು ಪ್ರಮುಖ ಕಾರಣವಾಗಿತ್ತು. ಇವರ ಬ್ಯಾಟಿಂಗ್ ವೈಫಲ್ಯವೇ ಅವರ ನಾಯಕತ್ವ ಕೈತಪ್ಪಲು ಮುಖ್ಯ ಕಾರಣ ಎನ್ನಲಾಗಿದೆ.

ಶ್ರೇಯಸ್ ಅಯ್ಯರ್ ಭರ್ಜರಿ ಪುನರಾಗಮನ

ಡಿಸೆಂಬರ್ 2023ರಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ್ದ ಶ್ರೇಯಸ್ ಅಯ್ಯರ್, ಆ ಬಳಿಕ ಭಾರತ ಟಿ20 ತಂಡದಿಂದ ಹೊರಗುಳಿದಿದ್ದರು. ಆದರೆ ಇತ್ತೀಚಿನ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ಅವರು 498 ರನ್ ಗಳಿಸುವ ಮೂಲಕ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ.

* ಐರ್ಲೆಂಡ್ ಪ್ರವಾಸ: ಜೂನ್ 26 ರಂದು ಮೊದಲ ಟಿ20 ಹಾಗೂ ಜೂನ್ 28ರಂದು ಎರಡನೇ ಟಿ20 ಪಂದ್ಯಗಳು ನಡೆಯಲಿವೆ.

* ಇಂಗ್ಲೆಂಡ್ ಪ್ರವಾಸ: ಐರ್ಲೆಂಡ್ ಸರಣಿಯ ಬೆನ್ನಲ್ಲೇ ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ಟಿ20 ಪಂದ್ಯಗಳು ಹಾಗೂ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+