India vs Zimbabwe: ರೋಹಿತ್ ಶರ್ಮಾ ಸ್ಥಾನ ತುಂಬಲು ಸಜ್ಜಾದ ಸ್ಫೋಟಕ ಬ್ಯಾಟರ್
ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದು, ಯುವ ಆಟಗಾರರು ಜಿಂಬಾಬ್ವೆ ವಿರುದ್ಧ ಟಿ20 ಸರಣಿಯನ್ನು ಆಡಲು ಸಜ್ಜಾಗಿದ್ದಾರೆ. ಯುವ ಪಡೆಯನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದು, ಜುಲೈ 6ರಂದು ಸರಣಿಯ ಮೊದಲ ಪಂದ್ಯ ನಡೆಯಲಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದು ಬದಲೀ ಆಟಗಾರರ ಹುಡುಕಾಟಕ್ಕೆ ವೇದಿಕೆ ಸಿದ್ದವಾಗಿದೆ.

ಟಿ20 ವಿಶ್ವಕಪ್‌ನಲ್ಲಿ ನಾಯಕ ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದ್ದರು. ಅವರಿಬ್ಬರ ಅನುಪಸ್ಥಿತಿಯಲ್ಲಿ ಆರಂಭಿಕ ಜೋಡಿ ಯಾರು ಎನ್ನುವ ಪ್ರಶ್ನೆಗೆ ನಾಯಕ ಶುಭಮನ್ ಗಿಲ್ ಉತ್ತರ ಕೊಟ್ಟಿದ್ದಾರೆ.
ಇನ್ನಿಂಗ್ಸ್ ಆರಂಭಿಸಲಿರುವ ಸ್ಫೋಟಕ ಬ್ಯಾಟರ್
ನಾಯಕ ಶುಭಮನ್ ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸಲು ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಸಜ್ಜಾಗಿದ್ದಾರೆ. ಸರಣಿ ಆರಂಭಕ್ಕೆ ಒಂದು ದಿನ ಮೊದಲು ನೂತನ ನಾಯಕ ಗಿಲ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ.
2026ರ ಟಿ20 ವಿಶ್ವಕಪ್‌ಗೆ ಭಾರತ ತಂಡ ಈಗಿನಿಂದಲೇ ಸಿದ್ಧತೆಯನ್ನು ಆರಂಭಿಸಿದೆ. ಅದಕ್ಕಾಗಿ ಬಲಿಷ್ಠ ತಂಡವನ್ನು ಕಟ್ಟಲು ಯುವ ಆಟಗಾರರಿಗೆ ಅವಕಾಶ ನೀಡುತ್ತಿದೆ.
ಶನಿವಾರ (ಜುಲೈ 6) ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿರುವ ಸರಣಿಯ ಆರಂಭಿಕ ಪಂದ್ಯದಲ್ಲಿ ಗಿಲ್ ಮತ್ತು ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ ಅಗ್ರ ಕ್ರಮಾಂಕದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಶುಭಮನ್ ಗಿಲ್ ಹೇಳಿದ್ದೇನು?
ಅಭಿಷೇಕ್ ಶರ್ಮಾ ನನ್ನೊಂದಿಗೆ ಓಪನಿಂಗ್ ಮಾಡುತ್ತಾರೆ ಮತ್ತು ರುತುರಾಜ್ ಗಾಯಕ್ವಾಡ್ ನಂ. 3 ರಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂದು ಟಿ 20 ವಿಶ್ವಕಪ್ ಮೀಸಲು ಭಾಗವಾಗಿದ್ದ ಶುಭಮನ್ ಗಿಲ್ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದ ಮುನ್ನಾದಿನದಂದು ಸುದ್ದಿಗಾರರಿಗೆ ತಿಳಿಸಿದರು.
ಗಾಯಕ್ವಾಡ್, ಮೂರನೇ ಸ್ಥಾನಕ್ಕೆ ಸ್ಥಳಾಂತರಗೊಂಡರೂ ಆಶ್ಚರ್ಯಪಡಬೇಕಾಗಿಲ್ಲ ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಕೂಡ ಈ ವರ್ಷದ ಐಪಿಎಲ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದ್ದರು ಎಂದು ಹೇಳಿದರು.
2024ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕನಾಗಿ ಆಡಿದ್ದ ಅಭಿಷೇಕ್ ಶರ್ಮಾ 204.22 ಸ್ಟ್ರೈಕ್‌ರೇಟ್‌ನಲ್ಲಿ 484 ರನ್ ಗಳಿಸಿದ್ದರು. ಐಪಿಎಲ್‌ನಲ್ಲಿ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಕಂಡು ಬಿಸಿಸಿಐ ಆಯ್ಕೆದಾರರು, ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ.
ರಿಂಕು ಸಿಂಗ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್, ಖಲೀಲ್ ಅಹ್ಮದ್ ಮತ್ತು ಸಂಜು ಸ್ಯಾಮ್ಸನ್, ಟಿ20 ವಿಶ್ವಕಪ್‌ನಲ್ಲಿ ಆಡಿದ್ದ ಐದು ಸದಸ್ಯರನ್ನು ಮಾತ್ರ ಜಿಂಬಾಬ್ವೆ ವಿರುದ್ಧದ ಸರಣಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ವಿಶ್ವಕಪ್ ತಂಡದ ಭಾಗವಾಗಿದ್ದ ದುಬೆ, ಜೈಸ್ವಾಲ್ ಮತ್ತು ಸ್ಯಾಮ್ಸನ್ ಭಾರತಕ್ಕೆ ಬರುವುದು ತಡವಾದ ಕಾರಣ, ಜಿತೇಶ್ ಶರ್ಮಾ, ಸಾಯಿ ಸುದರ್ಶನ್ ಮತ್ತು ಹರ್ಷಿತ್ ರಾಣಾ ಅವರನ್ನು ಬದಲೀ ಆಟಗಾರರನ್ನಾಗಿ ಹೆಸರಿಸಲಾಗಿದೆ.












Click it and Unblock the Notifications