Shubman Gill: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ!
ಚೆನ್ನೈ, ಮಾರ್ಚ್ 27: ಮಂಗಳವಾರ (ಮಾರ್ಚ್ 26) ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಆಟವಾಡಿದ ಆರೋಪ ಸಾಬೀತಾದ ನಂತರ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
"ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಸೀಸನ್‌ನ ಮೊದಲ ಅಪರಾಧವಾಗಿದ್ದು, ಕನಿಷ್ಠ ದರದ ಅಪರಾಧಗಳಿಗೆ ಸಂಬಂಧಿಸಿದಂತೆ ಶುಭಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ" ಎಂದು ಐಪಿಎಲ್ ಹೇಳಿಕೆ ತಿಳಿಸಿದೆ. ಐಪಿಎಲ್ ಪಂದ್ಯಾವಳಿಯ 17 ನೇ ಆವೃತ್ತಿಯಲ್ಲಿ ಮೊದಲ ಪ್ರಕರಣ ಇದಾಗಿದೆ.

"ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪಂದ್ಯದಲ್ಲಿ ತಮ್ಮ ತಂಡವು ನಿಧಾನಗತಿಯ ಓವರ್ ರೇಟ್ ಅನ್ನು ಕಾಯ್ದುಕೊಂಡ ನಂತರ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ನಿಧಾನಗತಿಯ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ, ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ ತಂಡದ ನಾಯಕ ಶುಭಮನ್ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ" ಐಪಿಎಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಟೂರ್ನಿಯ ಈ ಆವೃತ್ತಿಯಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಮಂಗಳವಾರ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್‌ಗಳಿಂದ ಸೋಲು ಕಂಡಿದೆ. ಮೊದಲ ಬಾರಿಗೆ ಐಪಿಎಲ್ ಫ್ರಾಂಚೈಸಿಯನ್ನು ಮುನ್ನಡೆಸುತ್ತಿರುವ ಶುಭಮನ್ ಗಿಲ್ ಅವರ ಗುಜರಾತ್ ಟೈಟಾನ್ಸ್ ತನ್ನ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರು ರನ್‌ಗಳಿಂದ ಜಯಗಳಿಸಿತ್ತು.

ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ಗೆ ಹೋದ ಬಳಿಕ ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರೆ. ಭಾನುವಾರ ನಡೆದ ಆರಂಭಿಕ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದಾರೆ.












Click it and Unblock the Notifications