Ind vs NZ: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಶುಭಮನ್ ಗಿಲ್ ನಾಯಕ? ಭಾರತ ತಂಡದಲ್ಲಿ ಎರಡು ಬದಲಾವಣೆ!

ಚಾಂಪಿಯನ್ಸ್ ಟ್ರೋಫಿ 2025ರ ಆವೃತ್ತಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಈಗಾಗಲೇ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಎರಡೂ ತಂಡಗಳು ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಎ ಗುಂಪಿನ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಾಗಿ ಕಾದಾಡಲಿವೆ. ಮಾರ್ಚ್ 2ರಂದು ಭಾನುವಾರ ದುಬೈನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇದೆ.

ಐಸಿಸಿ ಪಂದ್ಯಾವಳಿಯಲ್ಲಿ ಭಾರತಕ್ಕೆ ಯಾವಾಗಲೂ ನ್ಯೂಜಿಲೆಂಡ್ ಕಠಿಣ ಸವಾಲನ್ನು ಒಡ್ಡುತ್ತಲೇ ಇರುತ್ತದೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಮಾತ್ರ ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಸೋಲಿನ ಸರಪಳಿಯನ್ನು ಮುರಿದಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲೂ ಅದನ್ನು ಮುಂದುವರೆಸುವ ವಿಶ್ವಾಸದಲ್ಲಿದೆ.

shubman gill odi captaincy debut pant replace rohit sharma ind vs nz champions trophy

ನ್ಯೂಜಿಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸಿದರೆ ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯಲಿದ್ದು ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡದ ವಿರುದ್ಧ ಸೆಮಿಫೈನಲ್‌ನಲ್ಲಿ ಸೆಣೆಸಲಿದೆ. ಸೆಮಿಫೈನಲ್‌ಗೆ ಮುನ್ನ ನ್ಯೂಜಿಲೆಂಡ್‌ ಸೋಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿ ಭಾರತ ತಂಡ.

ರೋಹಿತ್ ಶರ್ಮಾಗೆ ವಿಶ್ರಾಂತಿ?

ಪಾಕಿಸ್ತಾನದ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಮೊಣಕಾಲು ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ ಗುರುವಾರ ಅಭ್ಯಾಸದಲ್ಲಿ ಕೂಡ ಪಾಲ್ಗೊಂಡಿರಲಿಲ್ಲ. ಸೆಮಿಫೈನಲ್ ಪಂದ್ಯ ಮುಖ್ಯವಾಗಿರುವ ಕಾರಣ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು ಶುಭಮನ್ ಗಿಲ್ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ.

ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿದರೆ ಅವರ ಬದಲಾಗಿ ರಿಷಬ್ ಪಂತ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ರೋಹಿತ್ ಶರ್ಮಾ ವಿಶ್ರಾಂತಿ ಪಡೆದರೆ ಗಿಲ್ ಜೊತೆ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್‌ ಕಣಕ್ಕಿಳಿಯುವ ಸಾಧ್ಯತೆ ಇದೆ.

ಮೊಹಮ್ಮದ್ ಶಮಿ ಕೂಡ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕಾಲು ನೋವಿನಿಂದ ಬಳಲಿದ್ದರು. ಮನ್ನೆಚ್ಚರಿಕಾ ಕ್ರಮವಾಗಿ ಅವರಿಗೂ ಕೂಡ ವಿಶ್ರಾಂತಿ ಕೊಡುವ ಸಾಧ್ಯತೆ ಇದ್ದು, ಒಂದು ವೇಳೆ ಶಮಿ ಅವರಿಗೆ ವಿಶ್ರಾಂತಿ ಕೊಟ್ಟರೆ ಅರ್ಷದೀಪ್ ಸಿಂಗ್ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸ್ಥಾನ ಪಡೆಯಬಹುದು.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ: ಶುಭಮನ್ ಗಿಲ್ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್/ ಮೊಹಮ್ಮದ್ಶಮಿ, ಕುಲದೀಪ್ ಯಾದವ್, ಹರ್ಷಿತ್ ರಾಣಾ.

ನ್ಯೂಜಿಲೆಂಡ್: ವಿಲ್ ಯಂಗ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+