Ind vs Eng: ಫಾರ್ಮ್‌ಗೆ ಮರಳಿದ ಕೊಹ್ಲಿ, ರಾಹುಲ್; ಸವಾಲಿನ ಮೊತ್ತ ಕಲೆಹಾಕಿದ ಭಾರತ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 50 ಓವರ್ ಗಳಲ್ಲಿ 356 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು.

ರೋಹಿತ್ ಶರ್ಮಾ 1 ರನ್‌ ಗಳಿಸಿ ಔಟಾದರೂ, ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಎರಡನೇ ವಿಕೆಟ್‌ಗೆ 116 ರನ್ ಕಲೆಹಾಕುವ ಮೂಲಕ ತಂಡದ ಆತಂಕ ದೂರ ಮಾಡಿದರು. ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮುನ್ನ ವಿರಾಟ್ ಕೊಹ್ಲಿ ತಮ್ಮ ಫಾರ್ಮ್‌ ಕಂಡುಕೊಳ್ಳುವಲ್ಲಿ ಯಶಸ್ವಿಯಾದರು. 55 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 52 ರನ್ ಗಳಿಸುವ ಮೂಲಕ ಅಭಿಮಾನಿಗಳಿಗೆ ಸಂತಸ ತಂದರು.

shubman gill virat kohli kl rahul back to form india score 356 runs vs england

ಶುಭಮನ್ ಗಿಲ್ ಭರ್ಜರಿ ಆಟ ಮುಂದುವರೆಸಿ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. 102 ಎಸೆತಗಳಲ್ಲಿ 14 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ 112 ರನ್ ಗಳಿಸಿ ಭಾರತಕ್ಕೆ ಆಸರೆಯಾದರು. ಶ್ರೇಯಸ್ ಅಯ್ಯರ್ 64 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 78 ರನ್ ಗಳಿಸಿದರು.

ಮತ್ತೆ 5ನೇ ಕ್ರಮಾಂಕಕ್ಕೆ ಬಡ್ತಿ ಪಡೆದ ಕೆಎಲ್ ರಾಹುಲ್‌ ಫಾರ್ಮ್‌ಗೆ ಮರಳಿದರು. 29 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್ ಸಹಿತ 40 ರನ್ ಗಳಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮುನ್ನ ತಮ್ಮ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡರು. ಕೆಎಲ್ ರಾಹುಲ್ ಬಳಿಕ ಬಂದ ಬ್ಯಾಟರ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ. ಅಂತಿಮವಾಗಿ ಭಾರತ 50 ಓವರ್ ಗಳಲ್ಲಿ 356 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+