IPL 2024 Final: WPL ಮತ್ತು ಐಪಿಎಲ್ ಫೈನಲ್‌ನಲ್ಲಿ ಇದೆ ಸಾಮ್ಯತೆ; ಅಚ್ಚರಿಯ ಅಂಕಿ ಅಂಶ
ಇಂಡಿಯನ್ ಪ್ರೀಮಿಯರ್ ಲೀಗ್ 2024 ಆವೃತ್ತಿಗೆ ತೆರೆ ಬಿದ್ದಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ಮೂರನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.
ಈ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ದಾಖಲೆ ಬರೆದಿದ್ದ ಸನ್‌ರೈಸರ್ಸ್ ಹೈದರಾಬಾದ್ ಫೈನಲ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮತ್ತೊಂದು ದೊಡ್ಡ ಮೊತ್ತ ಕಲೆಹಾಕುತ್ತದೆ ಎನ್ನುವಾಗಲೇ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿತು.

18.3 ಓವರ್ ಗಳಲ್ಲಿ ಕೇವಲ 113 ರನ್‌ಗಳಿಗೆ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಕೆಕೆಆರ್ 10.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 ರನ್ ಗಳಿಸುವ ಮೂಲಕ ಸುಲಭ ಗೆಲುವು ಸಾಧಿಸಿತು.
WPL ಮತ್ತು ಐಪಿಎಲ್ ಫೈನಲ್
ಮಹಿಳಾ ಪ್ರೀಮಿಯರ್ ಲೀಗ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಒಂದೇ ರೀತಿಯ ಫಲಿತಾಂಶ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ. ಎರಡೂ ಫೈನಲ್ ಪಂದ್ಯಗಳ ಫಲಿತಾಂಶಗಳಲ್ಲಿ ಬಹುತೇಕ ಸಾಮ್ಯತೆ ಇದೆ.
ಈ ಬಾರಿ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್ ಸಿಬಿ ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್ ಸಿಬಿ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ್ದ ಡೆಲ್ಲಿ 18.3 ಓವರ್ ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಗಿತ್ತು, ಆರ್ ಸಿಬಿ ಎರಡು ವಿಕೆಟ್ ಕಳೆದುಕೊಂಡು ಈ ಗುರಿ ಬೆನ್ನಟ್ಟುವ ಮೂಲಕ ಎಂಟು ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸ್ಟ್ರೇಲಿಯಾ ಆಟಗಾರ್ತಿ ಮೆಗ್ ಲ್ಯಾನಿಂಗ್ ನಾಯಕಿಯಾಗಿದ್ದರೆ, ಆರ್ ಸಿಬಿ ತಂಡಕ್ಕೆ ಭಾರತದ ಆಟಗಾರ್ತಿ ಸ್ಮೃತಿ ಮಂಧಾನ ನಾಯಕತ್ವ ವಹಿಸಿಕೊಂಡಿದ್ದರು.
2024 WPL Final:
— Mufaddal Vohra (@mufaddal_vohra) May 26, 2024
- Aussie Captain Vs Indian captain.
- Aussie captain took batting.
- Team 113/10 in 18.3 overs.
- Indian captain's team won by 8 wickets.
IPL 2024 Final:
- Aussie captain Vs Indian captain.
- Aussie captain took batting.
- Team 113/10 in 18.3 overs.
- Indian… pic.twitter.com/jH07ZzmAEO
ಐಪಿಎಲ್ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿ 18.3 ಓವರ್ ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಗಿದೆ. ಕೆಕೆಆರ್ 2 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಬೆನ್ನಟ್ಟುವ ಮೂಲಕ ಎಂಟು ವಿಕೆಟ್‌ಗಳ ಗೆಲುವು ಸಾಧಿಸಿತು. ಸನ್‌ರೈಸರ್ಸ್ ಹೈದರಾಬಾದ್‌ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ನಾಯಕತ್ವ ವಹಿಸಿಕೊಂಡಿದ್ದರೆ, ಕೆಕೆಆರ್ ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಂಡಿದ್ದರು.
ಪ್ಯಾಟ್ ಕಮಿನ್ಸ್ ಮತ್ತು ಮೆಗ್ ಲ್ಯಾನಿಂಗ್ ಇಬ್ಬರೂ ಪ್ರಮುಖ ಐಸಿಸಿ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ ಮೇಲೆ ತಮ್ಮ ತಮ್ಮ ಪಂದ್ಯಾವಳಿಗಳಿಗೆ ಕಾಲಿಟ್ಟರು. ಕಮ್ಮಿನ್ಸ್ ಆಸ್ಟ್ರೇಲಿಯಾದ ಪುರುಷರ ತಂಡವನ್ನು 2023 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಗೆಲುವಿನತ್ತ ಮುನ್ನಡೆಸಿದರು, ನಂತರ 2023 ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತದಲ್ಲಿ ಅದೇ ಎದುರಾಳಿಗಳ ವಿರುದ್ಧ ಜಯಗಳಿಸಿದರು. ಮತ್ತೊಂದೆಡೆ, ಭಾರತ ವಿರುದ್ಧ 2022 ರ ಟಿ 20 ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಮಹಿಳಾ ತಂಡವನ್ನು ಲ್ಯಾನಿಂಗ್ ಮುನ್ನಡೆಸಿದರು.












Click it and Unblock the Notifications