Smriti Mandhana: 11,000, 4,000.. ವಿಶ್ವದಾಖಲೆ ಮಾಡಿದ ಆರ್‌ಸಿಬಿ ಕ್ವೀನ್ ಸ್ಮೃತಿ ಮಂಧಾನ.. ನಂಬರ್ 1

Smriti Mandhana: ಜಪಾನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಮಂಗಳವಾರ (ಸೆಪ್ಟೆಂಬರ್ 22) ಏಷ್ಯನ್ ಗೇಮ್ಸ್ 2026ರ ಕ್ರಿಕೆಟ್‌ನ ಚಿನ್ನದ ಪದಕದ ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಭಾರತವು ನಿಗದಿತ 20 ಓವರ್‌ಗಳಲ್ಲಿ ಬರೋಬ್ಬರಿ 216 ರನ್‌ಗಳನ್ನು ಕಲೆಹಾಕಿದೆ. ಸ್ಮೃತಿ ಮಂಧಾನ, ಶಫಾಲಿ ವರ್ಮಾ, ರಿಚಾ ಘೋಷ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಪೇರಿಸಿದೆ. ಇದೇ ವೇಳೆ ಟೀಮ್ ಇಂಡಿ ಉಪನಾಯಕಿ ಹಾಗೂ ಆರ್‌ಸಿಬಿ ನಾಯಕಿ ಸ್ಮೃತಿ ಐತಿಹಾಸಿಕ ದಾಖಲೆ ಮಾಡಿ ಗಮನ ಸೆಳೆದಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಏಷ್ಯನ್ ಗೇಮ್ಸ್ 2026ರ ಕ್ರಿಕೆಟ್‌ನ ಚಿನ್ನದ ಪದಕದ ಪಂದ್ಯದಲ್ಲಿ ಭಾರತ ತಂಡದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಜಾಗತಿಕ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಪ್ರಶಸ್ತಿ ಸುತ್ತಿನ ರೋಚಕ ಪಂದ್ಯದಲ್ಲಿ ಅವರು ಮಹತ್ವದ ಮೈಲಿಗಲ್ಲು ತಲುಪುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.

Smriti Mandhana Creates History RCB Queen Becomes First Woman to Score 11 000 International Runs

ವಿಶ್ವ ದಾಖಲೆ ಮಾಡಿದ ಆರ್‌ಸಿಬಿ ಕ್ವೀನ್ ಸ್ಮೃತಿ ಮಂಧಾನ

ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಟೆಸ್ಟ್, ಏಕದಿನ ಮತ್ತು ಟಿ20 ಸೇರಿ) ತಮ್ಮ 11,000 ರನ್‌ಗಳ ಗಡಿ ದಾಟಿದರು. ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಹಾಗೂ ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಈ ಮ್ಯಾಚ್‌ನಲ್ಲಿ ಮಂಧಾನ ಕೇವಲ 45 ಎಸೆತಗಳಲ್ಲಿ 79 ರನ್‌ಗಳ ಸ್ಪೋಟಕ ಇನ್ನಿಂಗ್ಸ್ ಆಡಿದರು. ಇದರಲ್ಲಿ 7 ಸಿಕ್ಸರ್ ಹಾಗೂ 5 ಬೌಂಡರಿಗಳು ಸೇರಿವೆ.

ಶಫಾಲಿ ಜೊತೆಗೆ ಸ್ಮೃತಿ ಮತ್ತೊಂದು ವಿಶ್ವ ದಾಖಲೆ

* ಮಂಧಾನ ಕೇವಲ ವೈಯಕ್ತಿಕ ರನ್‌ಗಳಲ್ಲದೆ, ಸಹ-ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರೊಂದಿಗೆ ಸೇರಿ ಮತ್ತೊಂದು ದಾಖಲೆ ನಿರ್ಮಿಸಿದರು. ಫೈನಲ್‌ನಲ್ಲಿ ಈ ಜೋಡಿ ಮೊದಲ ವಿಕೆಟ್‌ಗೆ 99 ರನ್‌ಗಳ ಭರ್ಜರಿ ಇನ್ನಿಂಗ್ಸ್‌ ಆಡಿದರು.

* ಈ ಇನ್ನಿಂಗ್ಸ್‌ನೊಂದಿಗೆ ಮಂಧಾನ ಮತ್ತು ಶಫಾಲಿ ಜೋಡಿಯು ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಂಟಿಯಾಗಿ 4,000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಜೋಡಿ ಎಂಬ ಐತಿಹಾಸಿಕ ದಾಖಲೆಯನ್ನು ತಮ್ಮದಾಗಿಸಿಕೊಂಡಿತು.

ಭಾರತ ಬೃಹತ್ ಮೊತ್ತ ಕಲೆಹಾಕಲು ಕಾರಣರಾಗಿದ್ದು ಯಾರು?

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ (79) ಹಾಗೂ ಶಫಾಲಿ ವರ್ಮಾ (48) ಉತ್ತಮ ಆರಂಭ ನೀಡಿದರು. ಆ ಬಳಿಕ ರಿಚಾ ಘೋಷ್ ಕೇವಲ 22 ಎಸೆತಗಳಲ್ಲಿ ಅಜೇಯ 49 ರನ್ ಚಚ್ಚುವ ಮೂಲಕ ಭಾರತ ತಂಡ 20 ಓವರ್‌ಗಳಲ್ಲಿ 216/3 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಲು ನೆರವಾದರು. ಇದು ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ದಾಖಲಾದ ಗರಿಷ್ಠ ಮೊತ್ತವಾಗಿದೆ.

ಸಾಲು ಸಾಲು ದಾಖಲೆ ಬರೆಯುತ್ತಿರುವ ಮಂಧಾನ

ಇತ್ತೀಚೆಗಷ್ಟೇ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಡುವಾಗ ಸ್ಮೃತಿ ಮಂಧಾನ ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಅವರ ದಾಖಲೆಯನ್ನು ಮುರಿದು ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಈಗ ಫೈನಲ್ ಪಂದ್ಯದಲ್ಲಿ 11,000 ಅಂತಾರಾಷ್ಟ್ರೀಯ ರನ್ ಪೂರೈಸಿ ವಿಶ್ವ ದಾಖಲೆ ಮಾಡಿ ಗಮನ ಸೆಳೆದಿದ್ದಾರೆ. ವಿಶೇಷ ಅಂದ್ರೆ ಸ್ಮೃತಿ ಮಂಧಾನ ಅವರು ಆರ್‌ಸಿಬಿ ತಂಡದಲ್ಲಿ ಆಡುತ್ತಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳ ಸುರಿಮಳೆಯೇ ಹರಿದುಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+