ಪುರುಷ ಮತ್ತು ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟರ್ ಸ್ಮೃತಿ ಮಂದಾನ

Smriti Mandhana: ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಪುರುಷರು ಮತ್ತು ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನ ಇತಿಹಾಸದಲ್ಲೇ ಈವರೆಗೆ ಯಾರೂ ಮಾಡದ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹಾಗಾದ್ರೆ ಅದೇನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬುಧವಾರ (ಜೂನ್‌ 17) ನಡೆದ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಕೇವಲ 47 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸ್‌ನೊಂದಿಗೆ 74 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಇದೇ ಪಂದ್ಯದಲ್ಲಿ ಅವರು ಈ ಐತಿಹಾಸಿಕ ದಾಖಲೆ ಮಾಡಿದರು.

Smriti Mandhana Creates T20 World Record After Stunning Knock Against Netherlands Know details

ವಿಶ್ವ ದಾಖಲೆ ಮಾಡಿದ ಸ್ಮೃತಿ ಮಂದಾನ

ಈ ಭರ್ಜರಿ ಪ್ರದರ್ಶನದ ಮೂಲಕ ಮಂದಾನ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಬೌಂಡರಿ ಸಿಡಿಸಿದ ದಾಖಲೆ ಬರೆದರು. ಈ ಮೈಲಿಗಲ್ಲನ್ನು ದಾಟಿದ ಜಗತ್ತಿನ ಏಕೈಕ ಕ್ರಿಕೆಟರ್ (ಪುರುಷ ಮತ್ತು ಮಹಿಳಾ ಕ್ರಿಕೆಟ್ ಎರಡನ್ನೂ ಸೇರಿಸಿ) ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ಬೌಂಡರಿ ಸಿಡಿಸಿದವರು

* ಸ್ಮೃತಿ ಮಂದಾನ - 604
* ಬಾಬರ್ ಅಜಮ್ (ಪಾಕಿಸ್ತಾನ) - 477
* ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್) - 400ಕ್ಕೂ ಅಧಿಕ
* ರೋಹಿತ್ ಶರ್ಮಾ (ಭಾರತ) - 300ಕ್ಕೂ ಅಧಿಕ

ಭಾರತದ ಪರ ಸ್ಮೃತಿ ಐತಿಹಾಸಿದ ಸಾಧನೆ

ಸ್ಮೃತಿ ಮಂಧಾನ ಅವರು ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್‌ನ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಅವರೊಂದಿಗೆ ಸೇರಿ ಅವರು ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸುತ್ತಿದ್ದಾರೆ. ಮಂದಾನ ಅವರ ಬ್ಯಾಟಿಂಗ್ ಪ್ರತಿಭೆ ಮತ್ತು ಕೌಶಲ್ಯ ಕೇವಲ ಮಹಿಳಾ ಕ್ರಿಕೆಟ್‌ಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ಅವರು ಒಟ್ಟಾರೆ ಭಾರತೀಯ ಕ್ರಿಕೆಟ್‌ನಲ್ಲೇ ಅತ್ಯುನ್ನತ ಸಾಧನೆ ಮಾಡುತ್ತಿದ್ದಾರೆ.

ರೋಹಿತ್ ಶರ್ಮಾ ದಾಖಲೆ ಉಡೀಸ್

ಪ್ರಸ್ತುತ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಮೃತಿ ಮಂದಾನ ಪಾತ್ರರಾಗಿದ್ದಾರೆ. ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಅವರು ಪುರುಷರ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಈ ಮಹತ್ತರ ಮೈಲಿಗಲ್ಲನ್ನು ತಲುಪಿದ್ದರು.

ಭಾರತದ ದಿಗ್ಗಜ ಆಟಗಾರ ರೋಹಿತ್ ಶರ್ಮಾ ಅವರು ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದ 151 ಇನ್ನಿಂಗ್ಸ್‌ಗಳಲ್ಲಿ ಒಟ್ಟು 4,231 ರನ್ ಕಲೆಹಾಕಿದ್ದರು. ಆದರೆ ಸ್ಮೃತಿ ಮಂದಾನ ಅವರು ರೋಹಿತ್ ಅವರ ಈ ದೊಡ್ಡ ಮೊತ್ತವನ್ನು ದಾಟಿ ಮುನ್ನಡೆದಿದ್ದು, ಸದ್ಯ 161 ಇನ್ನಿಂಗ್ಸ್‌ಗಳಿಂದ ಭರ್ಜರಿ 4,401 ರನ್ ಗಳಿಸಿ ಭಾರತದ ಪರ ಅತಿ ಹೆಚ್ಚು ಟಿ20 ರನ್ ಗಳಿಸಿದ ಬ್ಯಾಟರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ.

ಅವರ ಈ ಸ್ಫೋಟಕ ಇನ್ನಿಂಗ್ಸ್ ಮತ್ತು ಶಫಾಲಿ ವರ್ಮಾ (38 ಎಸೆತಗಳಲ್ಲಿ 55 ರನ್) ಅವರ ಭರ್ಜರಿ ಸಾಥ್‌ನಿಂದಾಗಿ ಭಾರತ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 209 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಇದು ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಭಾರತ ತಂಡ ದಾಖಲಿಸಿದ ಅತ್ಯುನ್ನತ ಮತ್ತು ಗರಿಷ್ಠ ಮೊತ್ತವಾಗಿದೆ.

ಮಂದಾನ ಮತ್ತು ಶಫಾಲಿ ಅವರ 115 ರನ್‌ಗಳ ಆರಂಭಿಕ ಜೊತೆಯಾಟದ ನೆರವಿನಿಂದ ಭಾರತ ನೀಡಿದ 210 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿತು. ನೆದರ್ಲ್ಯಾಂಡ್ಸ್ ತಂಡದ ನಾಯಕಿ ಬಾಬೆಟ್ ಡಿ ಲೀಡೆ (28) ಮತ್ತು ಸ್ಟೆರ್ರೆ ಕಾಲಿಸ್ (18) ಸ್ವಲ್ಪ ಸಮಯ ಉತ್ತಮ ಆಟ ಆಡಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ನೆದರ್ಲ್ಯಾಂಡ್ಸ್ 17.3 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 95 ರನ್‌ಗಳ ಬೃಹತ್ ಜಯ ಸಾಧಿಸಿತು.

ಈ ಐತಿಹಾಸಿಕ ಗೆಲುವು ಮತ್ತು ಸ್ಮೃತಿ ಮಂದಾನ ಅವರ ವಿಶ್ವ ದಾಖಲೆಯು ಭಾರತ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಭಾರತ ತಂಡವು ಜೂನ್ 21ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಮಂದಾನ ಇದೇ ಫಾರ್ಮ್ ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+