Get Updates
Get notified of breaking news, exclusive insights, and must-see stories!

Smriti Mandhana: ತೀವ್ರ ಜ್ವರ ಇದ್ದರೂ ಆರ್‌ಸಿಬಿ ಟ್ರೋಫಿಗಾಗಿ ಡಬ್ಲ್ಯೂಪಿಎಲ್‌ ಫೈನಲ್‌ ಪಂದ್ಯ ಆಡಿದ ಸ್ಮೃತಿ ಮಂಧಾನ

Smriti Mandhana: ವಡೋದರಾದಲ್ಲಿ ನಡೆದ ಡಬ್ಲ್ಯೂಪಿಎಲ್‌ 2026ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ ಆರ್‌ಸಿಬಿ ಎರಡನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನಲ್ಲಿ ನಾಯಕಿ ಸ್ಮೃತಿ ಮಂಧಾನ ಅವರ ಪಾತ್ರ ಮಹತ್ವದವಾಗಿದೆ. ಜ್ವರದಿಂದ ಬಳಲುತ್ತಿದ್ದರೂ ಸಹ ಅವರು ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಮಹತ್ವದ ಕೊಡುಗೆ ನೀಡಿ ಗಮನ ಸೆಳೆದರು.

ಜ್ವರದಿಂದ ಬಳಲುತ್ತಿದ್ದರೂ ಸಹ ಸ್ಮೃತಿ ಮಂಧಾನ ಅವರು, 41 ಎಸೆತಗಳಲ್ಲಿ 87 ರನ್‌ಗಳನ್ನು ಕಲೆಹಾಕಿದರು. ಈ ಮೂಲಕ ಡೆಲ್ಲಿ ನೀಡಿದ 204 ರನ್‌ಗಳ ಬೃಹತ್ ಗುರಿ ತಲುಪಲು ನೆರವಾದರು. ಪಂದ್ಯದ ನಂತರ ಮಾತನಾಡಿದ ಆರ್‌ಸಿಬಿ ಮುಖ್ಯ ಕೋಚ್ ಮಲೋಲನ್ ರಂಗರಾಜನ್, ಸ್ಮೃತಿ ಅವರ ಅದ್ಭತ ಪ್ರದರ್ಶನವನ್ನು ಹಾಡಿಹೊಗಳಿದರು.

Smriti Mandhana delivered brilliant batting performance for RCB in final despite battling fever

ಮುಖ್ಯ ಕೋಚ್ ಹೇಳಿದ್ದೇನು?: "ಮಂಧಾನ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರು ಅದನ್ನು ಯಾರಿಗೂ ತೋರಿಸಿಕೊಳ್ಳಲಿಲ್ಲ. ಮಧ್ಯಾಹ್ನ ನಾನು ಅವರೊಂದಿಗೆ ಮಾತನಾಡಿದಾಗಲೂ, ಯಾವುದೇ ಸಮಸ್ಯೆ ಇಲ್ಲ, ನಾನು ಮೈದಾನಕ್ಕೆ ಇಳಿಯುತ್ತೇನೆ," ಎಂದು ಆತ್ಮವಿಶ್ವಾಸದಿಂದ ಹೇಳಿದರು. ಇದು ಸ್ಮೃತಿಯ ವ್ಯಕ್ತಿತ್ವವನ್ನು ತೋರಿಸುತ್ತದೆ," ಎಂದು ಮುಖ್ಯ ಕೋಚ್ ಮಲೋಲನ್ ರಂಗರಾಜನ್ ತಿಳಿಸಿದರು.

ಆರ್‌ಸಿಬಿ ಗೆಲುವಿಗೆ ಆಸ್ಟ್ರೇಲಿಯಾದ ಜಾರ್ಜಿಯಾ ವೋಲ್ ಅವರ ಪಾತ್ರವು ಕೂಡ ಪ್ರಮುಖವಾಯಿತು. ಸ್ಮೃತಿ ಹಾಗೂ ಜಾರ್ಜಿಯಾ ವೋಲ್ ಇಬ್ಬರೂ ಆಟಗಾರ್ತಿಯರು ಅರ್ಧಶತಕಗಳೊಂದಿಗೆ ತಂಡಕ್ಕೆ ಬಲ ತುಂಬಿದರು. ಒತ್ತಡದ ಪರಿಸ್ಥಿತಿಯಲ್ಲೂ ಆಕ್ರಮಣಕಾರಿ ಬ್ಯಾಟಿಂಗ್‌ ಪ್ರದರ್ಶನ ಮಾಡಿ ಡೆಲ್ಲಿ ಕ್ಯಾಪಿಟಲ್ಸ್‌ ಬೌಲರ್‌ಗಳ ಬೆವರಿಳಿಸಿ ಆರ್‌ಸಿಬಿ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಅತ್ಯುತ್ತಮ ಇನ್ನಿಂಗ್ಸ್ ಆಡಿದ ಸ್ಮೃತಿ: ಸ್ಮೃತಿ ಮಂಧಾನ ಬ್ಯಾಟಿಂಗ್ ಶೈಲಿಯ ಬಗ್ಗೆ ಮಾತನಾಡಿದ ರಂಗರಾಜನ್, "ಅವರು ಫೈನಲ್‌ಗಾಗಿ ತಮ್ಮ ಅತ್ಯುತ್ತಮ ಇನ್ನಿಂಗ್ಸ್ ಉಳಿಸಿಕೊಂಡಂತೆ ಕಾಣಿಸಿತು. ಯಾವ ಎಸೆತದಲ್ಲಿ ದಾಳಿ ಮಾಡಬೇಕು, ಯಾವಾಗ ರೀತಿಯಾಗಿ ಆಟ ಆಡಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿತ್ತು. ಅವರ ಆಟ ತುಂಬಾ ಕ್ಲಾಸಿ ಹಾಗೂ ಸೊಗಸಾಗಿತ್ತು," ಎಂದು ಬಣ್ಣಿಸಿದರು.

ಡಬ್ಲ್ಯುಪಿಎಲ್ 2026ರ ಆರಂಭದಲ್ಲಿ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ಗೆ ಪ್ರವೇಶಿಸಿದ್ದ ಆರ್‌ಸಿಬಿ, ಮಧ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ಸೋಲು ಕಂಡಿತು. ಆದರೂ ಬಳಿಕ ಯುಪಿ ವಾರಿಯರ್ಸ್ ವಿರುದ್ಧ ಲೀಗ್‌ ಪಂದ್ಯದಲ್ಲಿ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಪ್ರವೇಶ ಮಾಡಿತು. ಬಳಿಕ, ಫೈನಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನಿಡಿ ಎರಡನೇ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಯಿತು.

ಇನ್ನೂ ಸ್ಮೃತಿ ಮಂಧಾನ ಅವರ ನಾಯಕತ್ವದ ಕುರಿತು ಮಾತನಾಡಿದ ಕೋಚ್, "ನಾವು ನಾಲ್ಕು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಪಾತ್ರಗಳು ಸ್ಪಷ್ಟವಾಗಿವೆ. ಅವರು ತಂಡವನ್ನು ಮಾದರಿಯಾಗಿ ಮುನ್ನಡೆಸುತ್ತಾರೆ, ಪ್ರತಿಯೊಂದು ತರಬೇತಿ ಅವಧಿಯಲ್ಲೂ ಉನ್ನತ ಮಾನದಂಡಗಳನ್ನು ಸ್ಥಾಪಿಸುತ್ತಾರೆ. ಸ್ಮೃತಿ ಎಷ್ಟು ಅದ್ಭುತ ನಾಯಕಿ ಎಂಬುದನ್ನು ವಿವರಿಸಲು ಮಾತುಗಳೇ ಸಾಲುವುದಿಲ್ಲ," ಎಂದು ಹೇಳಿದರು. ಇನ್ನೂ ಈ ಗೆಲುವಿನೊಂದಿಗೆ ಆರ್‌ಸಿಬಿ ಮಹಿಳಾ ತಂಡ ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಅಭಿಮಾನಿಗಳಿಗೆ ಅಪಾರ ಸಂತಸ ತಂದಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 203 ರನ್‌ಗಳನ್ನು ಬೃಹತ್ ಮೊತ್ತ ಕಲೆಹಾಕಿತು. ಡೆಲ್ಲಿ ನೀಡಿದ 204 ರನ್‌ಗಳನ್ನು ಬೃಹತ್ ಗುರಿಯನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 19.4 ಓವರ್‌ಗಳಲ್ಲಿ ಮುಗಿಸಿ ಟ್ರೋಫಿ ಗೆದ್ದುಕೊಂಡಿತು.

---------

ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್‌' ವೆಬ್‌ಸೈಟ್‌ನಲ್ಲಿದೆ

ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್‌ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್‌ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್‌, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್‌, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್‌, 'ಮೈಖೇಲ್' ವೆಬ್‌ಸೈಟ್ ಬೆಸ್ಟ್‌.

ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್‌ ಫಾಲೊ ಮಾಡಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+