Asia Cup 2023: ಭಾರತ Vs ಪಾಕಿಸ್ತಾನ ಪಂದ್ಯದಲ್ಲಿ ಗೆಲ್ಲೋದ್ಯಾರು? ಸೌರವ್ ಗಂಗೂಲಿ ಹೇಳಿದ್ದೇನು?
ಏಷ್ಯಾ ಕಪ್ 2023 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಆಗಸ್ಟ್ 30ರಂದು ಏಷ್ಯಾಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಸೆಪ್ಟಂಬರ್ 2ರಂದು ಭಾರತ ಪಾಕಿಸ್ತಾನದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಕ್ಯಾಂಡಿಯ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ.
ಭಾರತ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೋಲ್ಕತ್ತಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೌರವ್ ಗಂಗೂಲಿ ಅವರು ಭಾರತ ಮತ್ತು ಪಾಕಿಸ್ತಾನದ ಟೈನಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆ ಉತ್ತರ ನೀಡಿದ್ದು, "ನನಗೆ ನೆಚ್ಚಿನ ತಂಡವನ್ನು ಆಯ್ಕೆ ಮಾಡುವುದು ತುಂಬಾ ಕಷ್ಟ. ಎರಡೂ ಉತ್ತಮ ತಂಡಗಳು. ಪಾಕಿಸ್ತಾನ ಉತ್ತಮ ತಂಡವಾಗಿದೆ ಮತ್ತು ಭಾರತವು ಉತ್ತಮ ತಂಡವಾಗಿದೆ." ಎಂದು ಹೇಳಿದರು.

"ಎರರಡೂ ಪಂದ್ಯಗಳು ಉತ್ತಮವಾಗಿದ್ದು, ಯಾರು ಗೆಲ್ಲುತ್ತಾರೆ ಎಂದು ಹೇಳುವುದು ಕಷ್ಟ, ಯಾರು ಚೆನ್ನಾಗಿ ಆಡುತ್ತಾರೋ ಅವರು ಪಂದ್ಯವನ್ನು ಗೆಲ್ಲುತ್ತಾರೆ" ಎಂದು ಮುಂಬರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಬಗ್ಗೆ ಹೇಳಿದ್ದಾರೆ.
ಬುಮ್ರಾ ಬಗ್ಗೆ ಗಂಗೂಲಿ ಹೇಳಿದ್ದೇನು?
ಜಸ್ಪ್ರೀತ್ ಬುಮ್ರಾ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದು, ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ಅವರು, 2-0 ಅಂತರದಲ್ಲಿ ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಬುಮ್ರಾ ಈಗ ಭಾರತ ಏಕದಿನ ತಂಡಕ್ಕೆ ಮರಳಲು ಮತ್ತು ಏಷ್ಯಾ ಕಪ್ 2023 ಗಾಗಿ ತಮ್ಮ ಪೂರ್ವಸಿದ್ಧತಾ ಶಿಬಿರದಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಶಿಬಿರವನ್ನು ಸೇರಲು ನಿರ್ಧರಿಸಿದ್ದಾರೆ.
ಸುಮಾರು 11 ತಿಂಗಳ ಸುದೀರ್ಘ ವಿರಾಮದ ನಂತರ ತಂಡಕ್ಕೆ ಮರಳಿರುವ ಬುಮ್ರಾ ಏಷ್ಯಾಕಪ್‌ನಲ್ಲಿ ಭಾರತದ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. "ಬುಮ್ರಾ ಐರ್ಲೆಂಡ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುತ್ತಿದ್ದು ಮತ್ತು ಈಗ ಏಕದಿನ ಮಾದರಿಯಲ್ಲಿ, ಅವರು 10 ಓವರ್ ಗಳನ್ನು ಬೌಲ್ ಮಾಡಬೇಕಾಗುತ್ತದೆ. ಹಾಗಾಗಿ ಕಾಲಕ್ರಮೇಣ ಅವರ ಫಿಟ್‌ನೆಸ್ ಉತ್ತಮಗೊಳ್ಳಲಿದೆ" ಎಂದು ಗಂಗೂಲಿ ಹೇಳಿದ್ದಾರೆ.
ಏಷ್ಯಾ ಕಪ್‌ನಿಂದ ಯುಜ್ವೇಂದ್ರ ಚಾಹಲ್ ಅವರನ್ನು ಹೊರಗಿಡುವ ಬಗ್ಗೆ ಪ್ರಶ್ನಿಸಿದಾಗ, ಮಾಜಿ ಭಾರತ ನಾಯಕ, "ನೀವು ಕೇವಲ ಮೂರು ಸ್ಪಿನ್ನರ್‌ಗಳನ್ನು ಹೊಂದಬಹುದು ಮತ್ತು ಬ್ಯಾಟಿಂಗ್ ಮಾಡಬಲ್ಲ ಕಾರಣ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡುವ ಮೂಲಕ ಅವರು ಸರಿಯಾದ ಕೆಲಸವನ್ನು ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ." ಎಂದು ಆಯ್ಕೆದಾರರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.












Click it and Unblock the Notifications