Champions Trophy: ಇಂಗ್ಲೆಂಡ್‌ ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ; ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿ?

ಕರಾಚಿಯ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಶುಕ್ರವಾರ ಆಸ್ಟ್ರೇಲಿಯಾ - ಅಫ್ಘಾನಿಸ್ತಾನ ಪಂದ್ಯ ಮಳೆಯಿಂದ ರದ್ದಾದಾಗಲೇ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಸೆಮಿಫೈನಲ್‌ ಬಹುತೇಕ ಖಚಿತವಾಗಿತ್ತು, ಶನಿವಾರ ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ಮಣಿಸಿದ ಬಳಿಕ ಇದು ಅಧಿಕೃತವಾಗಿದೆ.

ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ ಮೊದಲನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಈ ಪಂದ್ಯಕ್ಕೂ ಮುನ್ನವೇ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದ್ದ ಇಂಗ್ಲೆಂಡ್ ಕೊನೆಯ ಪಂದ್ಯವನ್ನು ಗೆಲ್ಲುವಲ್ಲಿ ಕೂಡ ವಿಫಲವಾಗಿದೆ.

south africa enters champions trophy 2025 semifinal india likely face australia

ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ದಕ್ಷಿಣ ಆಫ್ರಿಕಾ ಶಿಸ್ತಿನ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಬ್ಯಾಟರ್ ಗಳು ಮತ್ತೊಮ್ಮೆ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲವಾದರು. 38.2 ಓವರ್ ಗಳಲ್ಲಿ 179 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಜೋ ರೂಟ್ 37 ರನ್ ಗಳಿಸಿದರೆ, ಜೋಫ್ರಾ ಆರ್ಚರ್ 25 ರನ್ ಗಳಿಸಿದರು. ಬೆನ್ ಡಕೆಟ್ 24 ರನ್, ಜೋಸ್ ಬಟ್ಲರ್ 21 ರನ್ ಗಳಿಸಿದರು. ಮಾರ್ಕೊ ಯಾನ್ಸೆನ್ ಮತ್ತು ಮುಲ್ಡರ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಕೇಶವ್ ಮಹಾರಾಜ್ 2 ವಿಕೆಟ್ ಪಡೆದರೆ, ಲುಂಗಿ ಎಂಗಿಡಿ ಮತ್ತು ಕಗಿಸೋ ರಬಾಡ ತಲಾ 1 ವಿಕೆಟ್ ಪಡೆದರು.

ಕ್ಲಾಸೆನ್, ಡುಸೆನ್ ಅಬ್ಬರ!

180 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 29.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 181 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ರಾಸಿ ವ್ಯಾನ್ ಡೆರ್ ಡುಸೆನ್ ಅಜೇಯ 72 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 64 ರನ್ ಗಳಿಸಿ ದಕ್ಷಿಣ ಆಫ್ರಿಕಾಗೆ ಸುಲಭ ಗೆಲುವು ತಂದುಕೊಟ್ಟರು. ಜೋಸ್ ಬಟ್ಲರ್ ನಾಯಕತ್ವದ ಕೊನೆ ಪಂದ್ಯದಲ್ಲೂ ಇಂಗ್ಲೆಂಡ್ ಹೀನಾಯ ಸೋಲನುಭವಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯಗೊಳಿಸಿತು.

ಭಾರತಕ್ಕೆ ಆಸ್ಟ್ರೇಲಿಯಾ ಸವಾಲು

ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದ್ದು, ಸೋಲು ಕಂಡರೆ ದಕ್ಷಿಣ ಆಫ್ರಿಕಾ ವಿರುದ್ಧ ಆಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+