Aus vs SA : ಕೊನೆಯ 9 ಓವರ್, 14 ಸಿಕ್ಸ್‌, 11 ಬೌಂಡರಿ, 164 ರನ್‌: ಕಾಂಗರೂ ಪಡೆ ವಿರುದ್ಧ ಅಬ್ಬರಿಸಿದ ಹರಿಣಗಳು

ದಕ್ಷಿಣ ಆಫ್ರಿಕಾದ ಸೆಂಚುರಿಯನ್ ಅಂಗಳದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರಿಣಗಳು ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಲವು ದಾಖಲೆಗಳನ್ನು ಸೃಷ್ಟಿಸಿತು.

5 ಪಂದ್ಯಗಳ ಏಕದಿನ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಲ್ಲಿ ಮುಂದಿದ್ದು ಇಂದಿನ ಪಂದ್ಯ ಗೆದ್ದರೆ ಸರಣಿ ಗೆಲ್ಲುವ ವಿಶ್ವಾಸದಲ್ಲಿತ್ತು.

South Africa vs Australia: Klaasens 174 and Millers 82* Lead South Africa to a Total of 416 Runs

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಸಾಧಾರಣ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ 65 ರನ್‌ ಕಲೆಹಾಕಿತು. ರೀಜಾ ಹೆಂಡ್ರಿಕ್ಸ್ 28 ರನ್ ಗಳಿಸಿ ಔಟಾದರು. ಕ್ವಿಂಟನ್ ಡಿ ಕಾಕ್ 45 ರನ್ ಗಳಿಸಿ ಔಟಾದರು. ವ್ಯಾನ್ ಡೆರ್ ಡಸೆನ್ 62 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ನಾಯಕ ಐಡೆನ್ ಮಾರ್ಕ್ರಮ್ 8 ರನ್ ಗಳಿಸಿ ಔಟಾದರು.

ಕೊನೆಯ ಓವರ್ ಗಳಲ್ಲಿ ಅಬ್ಬರಿಸಿದ ಹರಿಣಗಳು

32 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾ 300 ರನ್ ಗಳಿಸುವುದ ಕಷ್ಟ ಎನ್ನುವಂತಾಗಿತ್ತು. ಆದರೆ ಈ ಹಂತದಲ್ಲಿ ಕ್ರೀಸಿಗೆ ಬಂದ ಹೆನ್ರಿಕ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅಕ್ಷರಶಃ ಅಬ್ಬರಿಸಿದರು.

ಹೆನ್ರಿಕ್ ಕ್ಲಾಸೆನ್ ಕೇವಲ 57 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಮತ್ತೊಂದೆಡೆ ಡೇವಿಡ್ ಮಿಲ್ಲರ್ ಕೂಡ ಸ್ಪೋಟಕ ಬ್ಯಾಟಿಂಗ್ ಮಾಡಿದರು. ಕ್ಲಾಸೆನ್ ಕೇವಲ 83 ಎಸೆತಗಳಲ್ಲಿ 13 ಬೌಂಡರಿ ಮತ್ತು 13 ಭರ್ಜರಿ ಸಿಕ್ಸರ್ ನೆರವಿನಿಂದ 174 ರನ್ ಗಳಿಸಿ ಮಿಂಚಿದರು. ಮತ್ತೊಂದೆಡೆ ಅಬ್ಬರಿಸಿದ ಮಿಲ್ಲರ್ 45 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್ ಸಹಿತ 82 ರನ್ ಗಳಿಸಿದರು. ಈ ಜೋಡಿ ಕೇವಲ 85 ಎಸೆತಗಳಲ್ಲಿ 200 ರನ್ ಗಳಿಸಿದರು,

ಕೊನೆಯ 18 ಓವರ್ ಗಳಲ್ಲಿ ದಕ್ಷಿಣ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 259 ರನ್ ಗಳಿಸುವ ಮೂಲಕ 400 ರನ್‌ಗಳ ಗಡಿ ದಾಟಿತು. 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 416 ರನ್ ಕಲೆಹಾಕಿದರು. ಕೊನೆಯ 9 ಓವರ್ ಗಳಲ್ಲಿ ದಕ್ಷಿಣ ಆಫ್ರಿಕಾ 164 ರನ್‌ ಗಳಿಸಿತು.

ಹಲವು ದಾಖಲೆಗಳು ನಿರ್ಮಾಣ

ಆಸ್ಟ್ರೇಲಿಯಾ ಸ್ಪಿನ್ನರ್ ಆಡಮ್ ಝಂಪಾ ಕೆಟ್ಟ ದಾಖಲೆಯನ್ನು ನಿರ್ಮಿಸಿದರು. ಅವರು 10 ಓವರ್ ಗಳಲ್ಲಿ ಯಾವುದೇ ವಿಕೆಟ್ ಪಡೆಯದೇ 113 ರನ್ ಬಿಟ್ಟುಕೊಟ್ಟರು. 2006 ರಲ್ಲಿ, ವೇಗದ ಬೌಲರ್ ಮಿಕ್ ಲೆವಿಸ್ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಐತಿಹಾಸಿಕ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಷ್ಟೇ ರನ್ ಬಿಟ್ಟುಕೊಟ್ಟಿದ್ದರು. ಝಂಪಾ ಅವರು ಇನ್ನಿಂಗ್ಸ್‌ನಲ್ಲಿ 100ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟ 16ನೇ ಬೌಲರ್ ಎನಿಸಿಕೊಂಡರು.

ಆಸ್ಟ್ರೇಲಿಯಾ ವಿರುದ್ಧ ವೇಗದ ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕ್ಲಾಸೆನ್ ಎರಡನೇ ಸ್ಥಾನ ಪಡೆದರು. 57 ಎಸೆತಗಳಲ್ಲಿ ತಮ್ಮ ಶತಕ ಗಳಿಸಿದರು. 53 ಎಸೆತಗಳಲ್ಲಿ ಶತಕ ಗಳಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ಬಾರಿ 400ಕ್ಕಿಂತ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದೆ. 7 ಬಾರಿ ಅದು 400ಕ್ಕಿಂತ ಹೆಚ್ಚು ರನ್ ಗಳಿಸಿದ್ದರೆ, ಭಾರತ 6 ಬಾರಿ ಈ ಸಾಧನೆ ಮಾಡಿ ಎರಡನೇ ಸ್ಥಾನದಲ್ಲಿದೆ. 5ನೇ ಕ್ರಮಾಂಕಕ್ಕಿಂತ ಕೆಳಗಡೆ ಆಡುವ ಬ್ಯಾಟರ್ ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕ್ಲಾಸೆನ್ ಎರಡನೇ ಸ್ಥಾನ ಪಡೆದರು. 175 ರನ್ ಗಳಿಸಿರುವ ಕಪಿಲ್ ದೇವ್ ಮೊದಲನೇ ಸ್ಥಾನದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+