ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಲಿಂಪಿಕ್ಸ್‌ನಲ್ಲಿ ಮೊದಲ ದಿನವೇ ಭಾರತದ ಕುವರಿ ಮೀರಾಬಾಯಿ ಚಾನು ಪದಕ ಬೇಟೆ!

|
Google Oneindia Kannada News

ಬೆಂಗಳೂರು, ಜು. 24: ಟೋಕಿಯೋ ಒಲಿಂಪಿಕ್ಸ್‌ನ ಮಹಿಳೆಯರ 49ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಮಣಿಪುರದ ಮೀರಾಬಾಯಿ ಚಾನು ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

"ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ. ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಿಂಪಿಕ್ಸ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪದಕ ಬೇಟೆಗೆ ನಾಂದಿ ಹಾಡಿದ ಮೀರಾ ಅವರಿಗೆ ಅಭಿನಂದನೆ" ಎಂದು ಕ್ರೀಡಾ ಸಚಿವ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು: 49 ಕೆಜಿ ವೇಟ್ ಲಿಫ್ಟಿಂಗ್ ಮಹಿಳಾ ವಿಭಾಗದಲ್ಲಿ ಭಾರತದ ಸೈಕೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ವೇಟ್ ಲಿಫ್ಟಿಂಗ್‍ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸೈಕೋಮ್ ಮೀರಾಬಾಯಿ ಚಾನು ಪಾತ್ರರಾಗಿದ್ದಾರೆ. ಮೊದಲನೇ ಪ್ರಯತ್ನದಲ್ಲಿ ಮೀರಾಬಾಯಿ ಚಾನು ಅವರು ಸ್ನ್ಯಾಚ್ ವಿಭಾಗದಲ್ಲಿ 84 ಕೆಜಿ ತೂಕವನ್ನು ಸುಲಭವಾಗಿ ಎತ್ತುವಲ್ಲಿ ಯಶಸ್ವಿಯಾದರು.

Sports Ministers Dr Narayana Gowda congratulated Mirabai Chanu who won silver medal in Tokyo Olympic

ನಂತರ ನಡೆದ 87 ಕೆಜಿ ತೂಕವನ್ನು ಎತ್ತುವ ಸ್ನ್ಯಾಚ್ ವಿಭಾಗದಲ್ಲಿ ಸೈಕೋಮ್ ಮೀರಾಬಾಯಿ ಚಾನು ಅವರು ಎರಡನೇ ಸ್ಥಾನವನ್ನು ಪಡೆದುಕೊಂಡರು. ಹೀಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪರ ಮೊದಲನೇ ಪದಕ ಗೆದ್ದ ಸೈಕೋಮ್ ಮೀರಾಬಾಯಿ ಚಾನು ಅವರಿಗೆ ದೇಶದಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಸಹ ಸೈಕೋಮ್ ಮೀರಾಬಾಯಿ ಚಾನು ಅವರಿಗೆ ಟ್ವೀಟ್ ಮಾಡುವ ಮೂಲಕ ಶುಭಾಶಯವನ್ನು ಕೋರಿದ್ದಾರೆ.

English summary
Sports Ministers Dr Narayana Gowda congratulated Mirabai Chanu who won silver medal in Tokyo Olympic. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X