SRH Vs CSK: ತವರಿನಲ್ಲಿ ಸಿಎಸ್‌ಕೆ ಸೋಲಿಸಿ ಗೆಲುವಿನ ಹಾದಿಗೆ ಮರಳಿದ ಸನ್‌ರೈಸರ್ಸ್ ಹೈದರಾಬಾದ್‌

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 6 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಿದ ಸನ್‌ರೈಸರ್ಸ್ ಹೈದರಾಬಾದ್ ಹಾಲಿ ಚಾಂಪಿಯನ್‌ಗಳನ್ನೇ ಮಣಿಸಿತು.

ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡ 165 ರನ್ ಗಳಿಸಿತು.

SRH Vs CSK Sunrisers Hyderabad Defeats CSK by 6 Wickets

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ 18.1 ಓವರ್ ಗಳಲ್ಲೇ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 6 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು. ಕಳೆದ ಪಂದ್ಯದಲ್ಲಿ ಅಹಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿದ್ದ ಎಸ್‌ಆರ್ ಎಚ್‌ ಮತ್ತೆ ಗೆಲುವಿನ ಹಾದಿಗೆ ಮರಳಿದೆ.

ಸನ್‌ರೈಸರ್ಸ್ ಉತ್ತಮ ಬೌಲಿಂಗ್‌

ಇದೇ ಅಂಗಳದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮುಂಬೈ ವಿರುದ್ಧ 277 ರನ್ ಕಲೆಹಾಕಿ ಹೊಸ ದಾಖಲೆ ಬರೆದಿತ್ತು, ಇಂದಿನ ಪಂದ್ಯದಲ್ಲಿ ಕೂಡ ಸ್ಫೋಟಕ ಬ್ಯಾಟಿಂಗ್, ಬೃಹತ್ ಮೊತ್ತದ ನಿರೀಕ್ಷೆ ಮಾಡಲಾಗಿತ್ತು. ಆದರೆ, ಸನ್‌ರೈಸರ್ಸ್ ಹೈದರಾಬಾದ್ ಬೌಲರ್ ಗಳು ಪಿಚ್‌ಗೆ ತಕ್ಕಂತೆ ಬೌಲಿಂಗ್ ಮಾಡುವ ಮೂಲಕ ಸಿಎಸ್‌ಕೆ ತಂಡದ ಬ್ಯಾಟಿಂಗ್ ಪಡೆಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರು.

ರಚಿನ್ ರವೀಂದ್ರ 9 ಎಸೆತಗಳಲ್ಲಿ 12 ರನ್ ಗಳಿಸಿದರೆ, ನಾಯಕ ರುತುರಾಜ್ ಗಾಯಕ್ವಾಡ್ 26 ರನ್, ಅಜಿಂಕ್ಯ ರಹಾನೆ 35 ರನ್, ಶಿವಂ ದುಬೆ 45 ರನ್ ಗಳಿಸಿದರು. ದುಬೆ ವೇಗವಾಗಿ ರನ್ ಗಳಿಸಿದರೆ, ಉಳಿದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು. ರವೀಂದ್ರ ಜಡೇಜಾ 23 ಎಸೆತಗಳಲ್ಲಿ ಅಜೇಯ 31 ರನ್ ಗಳಿಸಿದರು. ಅಂತಿಮವಾಗಿ ಸಿಎಸ್‌ಕೆ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು.

ಭುವನೇಶ್ವರ್ ಕುಮಾರ್ 4 ಓವರ್ ಗಳಲ್ಲಿ 28 ರನ್ ನೀಡಿ ಒಂದು ವಿಕೆಟ್ ಪಡೆದರು. ಜಯದೇವ್ ಉನದ್ಕತ್ 4 ಓವರ್ ಗಳಲ್ಲಿ 29 ರನ್ ನೀಡಿ ಒಂದು ವಿಕೆಟ್ ಪಡೆದರು. ನಾಯಕ ಪಾಟ್ ಕಮ್ಮಿನ್ಸ್ ಕೂಡ 4 ಓವರ್ ಗಳಲ್ಲಿ 29 ರನ್ ನೀಡಿ ಒಂದು ವಿಕೆಟ್ ಪಡೆದರು.

ಮಿಂಚಿದ ಅಭಿಷೇಕ್ ಶರ್ಮಾ, ಮಾರ್ಕ್ರಮ್

ಸವಾಲಿನ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸ್ಫೋಟಕ ಆರಂಭ ಪಡೆಯಿತು. 2.4 ಓವರ್ ಗಳಲ್ಲಿ ಮೊದಲ ವಿಕೆಟ್‌ಗೆ 46 ರನ್ ಕಲೆಹಾಕಿತು. ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ 37 ರನ್ ಗಳಿಸಿದರು. ಟ್ರಾವಿಸ್ ಹೆಡ್ 24 ಎಸೆತಗಳಲ್ಲಿ 31 ರನ್ ಗಳಿಸಿದರು. ಮಾರ್ಕ್ರಮ್ 36 ಎಸೆತಗಳಲ್ಲಿ 50 ರನ್ ಗಳಿಸುವ ಮೂಲಕ ಸನ್‌ರೈಸರ್ಸ್ ಗೆಲುವನ್ನು ಸುಲಭವಾಗಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+