SRH Vs MI IPL 2024: ಸಿಕ್ಸರ್ ವಿಚಾರದಲ್ಲೂ ಹೊಸ ದಾಖಲೆ ನಿರ್ಮಾಣ
ಐಪಿಎಲ್ 2024ರ 8ನೇ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಮಿಸಿದ್ದ 263 ರನ್‌ಗಳ ದಾಖಲೆಯನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಮುರಿದಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ ಗಳಿಸಿದ್ದು, ಐಪಿಎಲ್‌ನಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ತಂಡ ಎನ್ನುವ ಸಾಧನೆ ಮಾಡಿದೆ.
ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. ಸಿಕ್ಸರ್ ವಿಚಾರದಲ್ಲಿ ಕೂಡ ಈ ಪಂದ್ಯ ಮತ್ತೊಂದು ದಾಖಲೆ ಬರೆದಿದೆ. ಐಪಿಎಲ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸರ್ ಗಳಿಸಿದ ದಾಖಲೆ ನಿರ್ಮಾಣವಾಗಿದೆ.

ಪಿಎಲ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ದಾಖಲೆಯನ್ನು ಸಹ ಮುರಿದಿದೆ. 3 ವಿಭಿನ್ನ ಸಂದರ್ಭಗಳಲ್ಲಿ 33 ಸಿಕ್ಸರ್‌ಗಳನ್ನು ಸಿಡಿಸಿದ್ದು ಹಿಂದಿನ ದಾಖಲೆಯಾಗಿತ್ತು. ಎಸ್‌ಆರ್ ಎಚ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಈ ದಾಖಲೆ ಅಳಿಸಿದ್ದು 38 ಸಿಕ್ಸರ್ ಸಿಡಿಸಿದ್ದು ಹೊಸ ದಾಖಲೆ ನಿರ್ಮಾಣವಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಗಳಿಸಿದೆ. 20 ಓವರ್‌ಗಳ ನಂತರ ಬೋರ್ಡ್‌ನಲ್ಲಿ 277/3 ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಒಟ್ಟು 18 ಸಿಕ್ಸರ್‌ಗಳನ್ನು ಎಸ್‌ಆರ್‌ಎಚ್ ಬ್ಯಾಟರ್‌ಗಳು ಹೊಡೆದರು. ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ತಲಾ 7 ಸಿಕ್ಸರ್‌ಗಳನ್ನು ಸಿಡಿಸಿದರು.
33 ಸಿಕ್ಸರ್ ಸಿಡಿಸಿದ್ದ ದಾಖಲೆ
ಈ ಮೊದಲು ಮೂರು ಪಂದ್ಯಗಳಲ್ಲಿ ತಲಾ 33 ಸಿಕ್ಸರ್ ಬಾರಿಸಿದ್ದು ದಾಖಲೆಯಾಗಿತ್ತು. 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ 33 ಸಿಕ್ಸರ್ ಸಿಡಸಿದ್ದ ದಾಖಲೆ ನಿರ್ಮಾಣವಾಗಿತ್ತು. ಅದಾದ ಬಳಿಕ 2020-21ಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕೂಡ 33 ಸಿಕ್ಸರ್ ಸಿಡಿಸಲಾಗಿತ್ತು, 2023ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಮತ್ತೊಮ್ಮೆ 33 ಸಿಕ್ಸರ್ ಸಿಡಿಸಿದ್ದ ದಾಖಲೆ ನಿರ್ಮಿಸಲಾಗಿತ್ತು.
ಆದರೆ (ಬುಧವಾರ, ಮಾರ್ಚ್ 27) ನಡೆದ ಸನ್‌ರೈಸರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ 38 ಸಿಕ್ಸರ್ ದಾಖಲಾಗಿದ್ದು, ಹೊಸ ದಾಖಲೆ ನಿರ್ಮಾಣವಾಗಿದೆ.












Click it and Unblock the Notifications