Weather Report: ಆರ್‌ಸಿಬಿ-ಎಸ್ಆರ್‌ಎಚ್‌ ಹೈವೋಲ್ಟೇಜ್ ಪಂದ್ಯ; ಇಲ್ಲಿದೆ ಪಿಚ್, ವೆದರ್ ರಿಪೋರ್ಟ್‌

RCB Vs SRH IPL 2026: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ (ಮೇ 22) ನಡೆಯುವ ಐಪಿಎಲ್‌ 2026ರ ಹೈವೋಲ್ಟೇಜ್ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡವು ಆರ್‌ಸಿಬಿಯನ್ನು ಎದುರಿಸಲಿದೆ. ಹಾಗಾದ್ರೆ ಇಲ್ಲಿನ ಪಿಚ್ ಹಾಗೂ ವೆದರ್ ರಿಪೋರ್ಟ್‌ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿರುವ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿವೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ಸವಾಲನ್ನು ಎದುರಿಸಲು ಸಕಲ ತಯಾರಿಯನ್ನು ಮಾಡಿಕೊಂಡಿದೆ. ಇವೆರಡು ತಂಡಗಳು ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದು, ಇಂದಿನ ಪಂದ್ಯದಲ್ಲಿ ಕ್ವಾಲಿಫೈಯರ್ 1 ಸ್ಥಾನಕ್ಕಾಗಿ ಪೈಪೋಟಿ ನಡೆಯಲಿದೆ. ಈ ಸ್ಥಾನವನ್ನು ಪಡೆದ ತಂಡಕ್ಕೆ ಫೈನಲ್ ತಲುಪಲು ಎರಡು ಅವಕಾಶಗಳು ಸಿಗಲಿವೆ.

SRH vs RCB IPL 2026 Today Hyderabad Rajiv Gandhi Stadium Pitch Report and Weather Forecast

ಆರ್‌ಸಿಬಿ-ಎಸ್‌ಆರ್‌ಎಚ್‌ ಸೋಲು, ಗೆಲುವಿನ ಲೆಕ್ಕಾಚಾರ

ಸನ್‌ರೈಸರ್ಸ್ ಹೈದರಾಬಾದ್ ಈವರೆಗೂ ಆಡಿರುವ 13 ಪಂದ್ಯಗಳಲ್ಲಿ 8ರಲ್ಲಿ ಜಯಗಳಿಸಿ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿ 18 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.

ಗುರುವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿರುವುದರಿಂದ ಹೈದರಾಬಾದ್ ತಂಡದ ಹಾದಿಯನ್ನು ಸುಗಮವಾಗಿದೆ. ಇದೀಗ ಎಸ್‌ಆರ್‌ಎಚ್ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಭಾರಿ ಅಂತರದ ಜಯ ಸಾಧಿಸಿದರೆ ಮಾತ್ರ ಅಗ್ರ ಎರಡರಲ್ಲಿ ಒಂದು ಸ್ಥಾನ ಪಡೆಯುವ ಸಾಧ್ಯತೆಯಿದೆ. ಮತ್ತೊಂದೆಡೆ ಆರ್‌ಸಿಬಿ ಪಾಲಿಗೆ ಮುಂದಿನ ಹಾದಿ ಬಹಳ ಸುಲಭವಾಗಿದ್ದು, ಅಗ್ರಸ್ಥಾನದಲ್ಲೇ ಮುಂದುವರಿಯಲು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಬೇಕಿದೆ.

ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ ಸಾಧನೆಗಳು

* ಒಟ್ಟು ಆಡಿದ ಪಂದ್ಯಗಳು: 27

* ಸನ್‌ರೈಸರ್ಸ್ ಹೈದರಾಬಾದ್ ಜಯ: 14

* ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ: 12

ಇದುವರೆಗೆ ನಡೆದ 27 ಪಂದ್ಯಗಳಲ್ಲಿ ಎಸ್‌ಆರ್‌ಹೆಚ್ 14 ಮತ್ತು ಆರ್‌ಸಿಬಿ 12 ಪಂದ್ಯಗಳಲ್ಲಿ ಜಯಗಳಿಸಿವೆ. ಇಂದು ಹೈದರಾಬಾದ್ ತನ್ನ ತವರು ನೆಲದಲ್ಲಿ ಮೇಲುಗೈ ಸಾಧಿಸುತ್ತಾ ಅಥವಾ ಹಾಲಿ ಚಾಂಪಿಯನ್ ಆರ್‌ಸಿಬಿ ವಿಜಯಯಾತ್ರೆ ಮುಂದುವರಿಸುತ್ತಾ ಎಂದು ಕಾದು ನೋಡಬೇಕಿದೆ.

ರಾಜೀವ್ ಗಾಂಧಿ ಮೈದಾನದ ಪಿಚ್ ವರದಿ

ಈ ಸೀಸನ್‌ನಲ್ಲಿ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣವು ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವಾಗಿದ್ದು, ರನ್‌ಗಳ ಹೊಳೆಯೇ ಹರಿದುಬರುತ್ತಿದೆ. ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 235 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ ಪಂಜಾಬ್ ಕಿಂಗ್ಸ್‌ ತಂಡವನ್ನು ಮಣಿಸಿತ್ತು. ಹಾಗೆಯೇ ಇಂದು ಕೂಡ ಇಲ್ಲಿ ರನ್ ಹೊಳೆ ಹರಿಯಲಿದೆ ಎಂದು ನಿರೀಕ್ಷಿಸಲಾಗಿದೆ.

ಹೈದರಾಬಾದ್ ಹವಾಮಾನ ವರದಿ

ಪಂದ್ಯದ ಸಮಯದಲ್ಲಿ ತಾಪಮಾನವು 35°C ನಿಂದ 39°C ಆಸುಪಾಸಿನಲ್ಲಿದೆ. ಮಳೆಯಾಗುವ ಸಾಧ್ಯತೆ ಕಡಿಮೆಯಿರಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ತಿ ಪಂದ್ಯ ನೋಡಲು ಅವಕಾಶ ಸಿಗಲಿದ್ದು, ಈ ಹೈವೋಲ್ಟೇಜ್ ಕದನ ವೀಕ್ಷಣೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಎಸ್‌ಆರ್‌ಎಚ್‌, ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11

ಎಸ್‌ಆರ್‌ಎಚ್‌ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮ್ಮಿನ್ಸ್ (ನಾಯಕ), ಶಿವಾಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+