SRH Vs RR: ಭುವಿ ಮ್ಯಾಜಿಕ್; ಸನ್‌ರೈಸರ್ಸ್ ಹೈದರಾಬಾದ್‌ಗೆ ಒಂದು ರನ್ ರೋಚಕ ಗೆಲುವು
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ರಾಜಸ್ಥಾನ ರಾಯಲ್ಸ್ ವಿರುದ್ಧ 1 ರನ್‌ನಿಂದ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಂಡರು, ಬಳಿಕ ಸುಧಾರಿಸಿಕೊಂಡ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿತು.

ಅಭಿಷೇಕ್ ಶರ್ಮಾ 10 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ಅನ್ಮೋಲ್‌ಪ್ರೀತ್ ಸಿಂಗ್ 5 ಎಸೆತಗಳಲ್ಲಿ 5 ರನ್ ಗಳಿಸಿ ಔಟಾದರು. ಬಳಿಕ ಬಂದ ನಿತೀಶ್ ರೆಡ್ಡಿ ಟ್ರಾವಿಸ್ ಹೆಡ್ ಜೊತೆಗೂಡಿ ಉತ್ತಮ ರನ್ ಕಲೆಹಾಕಿದರು.
ಈ ಜೋಡಿ ಮೂರನೇ ವಿಕೆಟ್‌ಗೆ 96 ರನ್ ಕಲೆಹಾಕಿದರು. ನಿತೀಶ್ ರೆಡ್ಡಿ 42 ಎಸೆತಗಳಲ್ಲಿ ಅಜೇಯ 76 ರನ್ ಗಳಿಸಿದರು. ಟ್ರಾವಿಸ್ ಹೆಡ್ 44 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್ 19 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿ ತಂಡದ ಮೊತ್ತ 200 ದಾಟಲು ಕಾರಣವಾದರು. ಚಹಾಲ್ 4 ಓವರ್ ಗಳಲ್ಲಿ 62 ರನ್ ಬಿಟ್ಟುಕೊಟ್ಟು ದುಬಾರಿ ಬೌಲರ್ ಎನಿಸಿಕೊಂಡರು.
ಜೈಸ್ವಾಲ್, ರಿಯಾನ್ ಪರಾಗ್ ಭರ್ಜರಿ ಆಟ
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ಮೊದಲ ಓವರ್ ನಲ್ಲೇ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಜೋಸ್ ಬಟ್ಲರ್ ಮತ್ತು ಸಂಜು ಸ್ಯಾಮ್ಸನ್ ಮೊದಲ ಓವರ್ ನಲ್ಲೇ ಔಟಾದರು.
ಬಳಿಕ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಮೂರನೇ ವಿಕೆಟ್‌ಗೆ 133 ರನ್‌ಗಳನ್ನು ಕಲೆಹಾಕಿದರು. ರಿಯಾನ್ ಪರಾಗ್ 49 ಎಸೆತಗಳಲ್ಲಿ 77 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ 67 ರನ್ ಗಳಿಸಿದರು.
ಒಂದು ಹಂತದಲ್ಲಿ ರಾಜಸ್ಥಾನ ರಾಯಲ್ಸ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಇವರಿಬ್ಬರೂ ಔಟಾದ ಬಳಿಕ ಪಂದ್ಯದ ಗತಿ ಬದಲಾಯಿತು. ಶಿಮ್ರಾನ್ ಹೆಟ್ಮೆಯರ್ 13 ರನ್ ಗಳಿಸಿ ಔಟಾದರು. ರೋವ್ಮನ್ ಪೋವೆಲ್ ತಂಡದ ಗೆಲುವಿಗಾಗೊ ಕೊನೆಯವರೆಗೂ ಹೋರಾಡಿದರು ಕೊನೆಯ ಎಸೆತದಲ್ಲಿ 2 ರನ್ ಬೇಕಿದ್ದಾಗ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.
ಕೊನೆಯ ಓವರ್ ನಲ್ಲಿ 13 ರನ್ ಬೇಕಿದ್ದಾಗ ಭುವನೇಶ್ವರ್ ಕುಮಾರ್ ಅತ್ಯುತ್ತಮ ಬೌಲಿಂಗ್ ಮಾಡುವ ಮೂಲಕ ತಂಡಕ್ಕೆ 1 ರನ್ ರೋಚಕ ಗೆಲುವು ತಂದುಕೊಟ್ಟರು.












Click it and Unblock the Notifications