Champions Trophy: ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತಕ್ಕೆ ಶಾಕ್!

2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಭಾರತ ತಂಡ ಹೋಗಲ್ಲ ಎಂದು ಹೇಳಿದೆ. ಈ ಬೆನ್ನಲ್ಲೇ ಐಸಿಸಿ ಭಾರತ ತಂಡಕ್ಕೆ ಪಂದ್ಯಾವಳಿಯಿಂದಲೇ ಗೇಟ್‌ಪಾಸ್ ಕೊಡುವ ಸಾಧ್ಯತೆ ಇದ್ದು, ಶ್ರೀಲಂಕಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ತುದಿಗಾಲಲ್ಲಿ ನಿಂತಿದೆ.

ಕಳೆದ ಬಾರಿ ಪಾಕಿಸ್ತಾನದಲ್ಲಿ ಆಯೋಜಿಸಲಾಗಿದ್ದ ಏಷ್ಯಾಕಪ್ ಪಂದ್ಯಾವಳಿಗೆ ಭಾರತ ತಂಡದ ಅನುಕೂಲಕ್ಕಾಗಿ ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗಿತ್ತು. ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ, ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶ ತಂಡಗಳು ಪಾಕಿಸ್ತಾನದಲ್ಲಿ ಪಂದ್ಯಗಳನ್ನು ಆಡಿದ್ದವು.

Sri Lanka Set to Replace India in Champions Trophy 2025 Reports Suggest

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಕೂಡ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವಂತೆ ಬಿಸಿಸಿಐ ಐಸಿಸಿಗೆ ಮನವಿ ಮಾಡಿದೆ. ಶ್ರೀಲಂಕಾ ಅಥವಾ ಯುಎಇಯಲ್ಲಿ ಭಾರತದ ಪಂದ್ಯಗಳನ್ನು ಆಯೋಜಿಸಲು ಮನವಿ ಮಾಡಿದೆ. ಆದರೆ ಇದಕ್ಕೆ ಐಸಿಸಿ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.

ಪಂದ್ಯಾವಳಿಯಿಂದ ಹೊರಗುಳಿಯುತ್ತಾ ಭಾರತ?

ಒಂದು ವೇಳೆ ಭಾರತ ಏನಾದರೂ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿ, ಐಸಿಸಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜಿಸಲು ಒಪ್ಪದೇ ಇದ್ದರೆ ಭಾರತ ಪಂದ್ಯಾವಳಿಯಿಂದ ಹೊರಗುಳಿಯಬೇಕಾಗುತ್ತದೆ. ಈ ಸಂದರ್ಭದಲ್ಲಿ ಶ್ರೀಲಂಕಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಅರ್ಹತೆ ಪಡೆಯಲಿದೆ.

2023ರ ಏಕದಿನ ವಿಶ್ವಕಪ್‌ನಲ್ಲಿ 9ನೇ ಸ್ಥಾನ ಗಳಿಸಿರುವ ಶ್ರೀಲಂಕಾ ಸದ್ಯ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದಿಲ್ಲ, ಭಾರತ ಏನಾದರೂ ಪಂದ್ಯಾವಳಿಯಿಂದ ಹಿಂದೆ ಸರಿದರೆ ಮಾತ್ರ ಮಾತ್ರ ಶ್ರೀಲಂಕಾ ಚಾಂಪಿಯನ್ಸ್ ಟ್ರೋಫಿಯನ್ನು ಆಡಲು ಅರ್ಹತೆ ಪಡೆಯಲಿದೆ.

ಭಾರತ ಸರ್ಕಾರದ ನಿರ್ಧಾರ

ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬೇಕಾ ಬೇಡವಾ ಎನ್ನುವುದನ್ನು ಭಾರತ ಸರ್ಕಾರ ನಿರ್ಧರಿಸಲಿದೆ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ಮಾತ್ರ ಭಾರತ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.

ಐಸಿಸಿಗೆ ನಿರ್ಧಾರ ಸುಲಭವಲ್ಲ

ಭಾರತ ತಂಡವನ್ನು ಹೊರಗಿಟ್ಟು ಪಂದ್ಯಾವಳಿ ಆಯೋಜನೆ ಮಾಡುವುದು ಐಸಿಸಿಗೆ ಸುಲಭವಲ್ಲ, ಭಾರತದ ಕ್ರಿಕೆಟ್ ಮಾರುಕಟ್ಟೆ ಅಷ್ಟು ದೊಡ್ಡದಾಗಿದೆ. ಭಾರತ ಆಡದೇ ಇದ್ದರೆ, ಪಂದ್ಯಾವಳಿಗೆ ನಷ್ಟ ಎನ್ನುವುದು ಐಸಿಸಿಗೂ ಗೊತ್ತಿದೆ. ಎಲ್ಲ ಲೆಕ್ಕಾಚಾರವನ್ನು ಮಾಡಿ ಐಸಿಸಿ ನಿರ್ಧಾರ ಮಾಡಲಿದೆ.

ಭಾರತ ಪಾಕಿಸ್ತಾನಕ್ಕೆ ಪ್ರಯಾಣ ಮಾಡುತ್ತಾ ಅಥವಾ ಏಷ್ಯಾಕಪ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಕೂಡ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಸೂಚನೆ ಕೊಡುತ್ತಾ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+