SL vs Aus: ಉಪುಲ್ ತರಂಗ ಶತಕ; ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಶ್ರೀಲಂಕಾ
ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ 2025ರ ಪಂದ್ಯಾವಳಿಯಲ್ಲಿ ಶ್ರೀಲಂಕಾ ಮಾಸ್ಟರ್ಸ್ ಆಸ್ಟ್ರೇಲಿಯಾ ಮಾಸ್ಟರ್ಸ್ ವಿರುದ್ಧ 3 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಉಪುಲ್ ತರಂಗ ಅಮೋಘ ಶತಕ ಗಳಿಸುವ ಮೂಲಕ ಶ್ರೀಲಂಕಾ 218 ರನ್‌ಗಳ ಬೃಹತ್ ಗುರಿಯನ್ನು ಚೇಸ್ ಮಾಡಿ ಗೆಲುವು ಸಾಧಿಸಲು ಮಹತ್ವದ ಪಾತ್ರ ವಹಿಸಿದರು.
ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು. ಶಾನ್ ಮಾರ್ಷ್ 49 ಎಸೆತಗಳಲ್ಲಿ 7 ಬೌಂಡರಿ 5 ಸಿಕ್ಸರ್ ಸಹಿತ 77 ರನ್ ಗಳಿಸಿದರೆ, ಬೆನ್ ಡಂಕ್ 29 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 56 ರನ್ ಗಳಿಸಿದರು. ಡೇನಿಲಯ್ ಕ್ರಿಸ್ಟಿಯನ್ 13 ಎಸೆತಗಳಲ್ಲಿ 34 ರನ್ ಗಳಿಸಿ ಮಿಂಚಿದರು. ಇಸುರು ಉಡಾನ, ದಮ್ನಿಕಾ ಪ್ರಸಾದ್, ಗುಣರತ್ನೆ ಮತ್ತು ಚತುರಂಗ ತಲಾ ಒಂದು ವಿಕೆಟ್ ಪಡೆದರು.

ಇಸುರು ಉಡಾನ ಭರ್ಜರಿ ಶತಕ
218 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡಕ್ಕೆ ಉಪುಲ್ ತರಂಗ ಆಸರೆಯಾದರು. ಒಂದು ಕಡೆ ವಿಕೆಟ್ ಬಿದ್ದರೂ ಮತ್ತೊಂದು ಕಡೆ ಅಬ್ಬರದ ಬ್ಯಾಟಿಂಗ್ ಮಾಡಿದರು. 54 ಎಸೆತಗಳಲ್ಲಿ 8 ಬೌಂಡರಿ 6 ಸಿಕ್ಸರ್ ಸಹಿತ 102 ರನ್ ಗಳಿಸಿ ಮಿಂಚಿದರು. ಲಾಹಿರು ತಿರಿಮನ್ನೆ 34 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 53 ರನ್ ಗಳಿಸಿದರು.
ಕೊನೆಯಲ್ಲಿ ಇಸುರು ಉಡಾನ 6 ಎಸೆತಗಳಲ್ಲಿ 15 ರನ್ ಗಳಿಸಿದರೆ, ಸೀಕ್ಕುಗೆ ಪ್ರಸನ್ನ 7 ಎಸೆತಗಳಲ್ಲಿ 16 ರನ್ ಗಳಿಸುವ ಮೂಲಕ ಶ್ರೀಲಂಕಾವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ 19.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 222 ರನ್ ಗಳಿಸುವ ಮೂಲಕ 3 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಇಂದು (ಮಾರ್ಚ್ 1) ಸಚಿನ್ ತೆಂಡೂಲ್ಕರ್ ನಾಯಕತ್ವದ ಇಂಡಿಯಾ ಮಾಸ್ಟರ್ಸ್ ತಂಡವು ದಕ್ಷಿಣ ಆಫ್ರಿಕಾ ಮಾಸ್ಟರ್ಸ್ ತಂಡದ ವಿರುದ್ಧ ಸೆಣೆಸಲಿದೆ.












Click it and Unblock the Notifications