ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಭರ್ಜರಿ ಸಿದ್ಧತೆ: ಸಿದ್ದಿ ಜನಾಂಗದ 24 ಕ್ರೀಡಾ ಪ್ರತಿಭೆಗಳು ರೆಡಿ!

|
Google Oneindia Kannada News

ಬೆಂಗಳೂರು, ಸೆ. 10: ಇವರು ಸಾಮರ್ಥ್ಯವಿದ್ದರೂ ಅವಕಾಶ ವಂಚಿತರು. ಅರ್ಹತೆ ಇದ್ದರೂ ಮಾರ್ಗಗೊತ್ತಿಲ್ಲದವರು. ಕ್ರೀಡೆಯಲ್ಲಿ ಉನ್ನತ ಮಟ್ಟಕ್ಕೇರುವ ಶಕ್ತಿ ಇದ್ದರೂ ಯಾರೂ ಗುರುತಿಸುವ ಪ್ರಯತ್ನ ನಡೆಸಿರಲಿಲ್ಲ. ಹೀಗಾಗಿ ಎಲೆಮರೆ ಕಾಯಿಯಂತಿದ್ದ ಸಿದ್ದಿ ಜನಾಂಗದ ಪ್ರತಿಭಾವಂತ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರ ಸೂಚನೆಯ ಹಿನ್ನೆಲೆಯಲ್ಲಿ ಇಲಾಖೆಯ ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ 24 ಕ್ರೀಡಾ ಪ್ರತಿಭೆಗಳನ್ನು ಗುರುತಿಸಿದ್ದು, ಅವರೊಂದಿಗೆ ಸಚಿವ ಡಾ. ನಾರಾಯಣಗೌಡ ಸಂವಾದ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಹಳಿಯಾಳ, ಯಲ್ಲಾಪುರ, ಮುಂಡಗೋಡ್ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಸಿದ್ದಿ ಸಮುದಾಯದ ವಿದ್ಯಾರ್ಥಿಗಳನ್ನು ಕ್ರೀಡಾ ವಿಜ್ಞಾನ ಕೇಂದ್ರದ ಟೀಂ ವೈಜ್ಞಾನಿಕವಾಗಿ ಪರೀಕ್ಷೆಗೆ ಒಳಪಡಿಸಿದೆ. ಕ್ರೀಡಾ ಸಾಮರ್ಥ್ಯವಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಅವರಲ್ಲಿ ಯಾವ ಕ್ರೀಡೆಯ ಬಲವಿದೆ ಎನ್ನುವುದನ್ನು ವೈಜ್ಞಾನಿಕವಾಗಿ ಗುರುತಿಸಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳ ಜೊತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮಾತನಾಡಿದ ಬಳಿಕ ಉನ್ನತ ತರಬೇತಿಗೆ ಚಾಲನೆ ನೀಡಿದ್ದಾರೆ.

ಆ ಮೂಲಕ ರಾಜ್ಯದ ಕ್ರೀಡಾ ಕ್ಷೇತ್ರದಲ್ಲಿ ನೂತನ ಅದ್ಯಾಯ ಶುರುವಾಗುವ ಎಲ್ಲ ಮುನ್ಸೂಚನೆಗಳು ಕಂಡು ಬಂದಿವೆ. ನಿರೀಕ್ಷೆಯಂತೆ ಆದಲ್ಲಿ ನಮ್ಮ ಸಿದ್ದಿ ಸಮುದಾಯದ ಯುವಕರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಸಿದ್ದಿ ಹುಡುಗರು ರೆಡಿ!

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಸಿದ್ದಿ ಹುಡುಗರು ರೆಡಿ!

ಪ್ಯಾರಿಸ್ ಒಲಂಪಿಕ್ಸ್‌ ಗಮನದಲ್ಲಿರಿಸಿಕೊಂಡು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಕ್ರೀಡಾ ಪ್ರತಿಭಾನ್ವೇಷಣೆ ನಡೆಸುತ್ತಿದೆ. ಈ ಅಭಿಯಾನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 400 ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಒಳಪಡಿಸಿ, 24 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಅವರಲ್ಲಿ ಯಾವ ಬಗೆಯ ಕ್ರೀಡೆಯ ಆಸಕ್ತಿ ಹಾಗೂ ಸಾಮರ್ಥ್ಯವಿದೆ ಎನ್ನುವುದನ್ನು ಗುರುತಿಸಿ, ಅಂತರಾಷ್ಟ್ರೀಯ ಗುಣಮಟ್ಟದ ತರಬೇತಿ ನೀಡಲಾಗುವುದು. ರಾಜ್ಯದ ಪ್ರತಿಷ್ಟಿತ ವಿದ್ಯಾನಗರ ಹಾಗೂ ವಿವಿದೆಡೆ ಇರುವ ಕ್ರೀಡಾ ವಸತಿ ನಿಲಯದಲ್ಲಿ ಈ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೇರೆ ಯಾವುದೇ ರೀತಿಯ ಪರೀಕ್ಷೆ ನಡೆಸದೆ ನೇರವಾಗಿ ಕ್ರೀಡಾ ವಸತಿ ನಿಲಯದಲ್ಲಿ ಪ್ರವೇಶ ನೀಡಲಾಗುವುದು ಎಂದು ಕ್ರೀಡಾ ಇಲಾಖೆ ಮಾಹಿತಿ ಕೊಟ್ಟಿದೆ.

ಸದೃಢ ಸಿದ್ದಿ ಜನಾಂಗದ ವಿದ್ಯಾರ್ಥಿಗಳು

ಸದೃಢ ಸಿದ್ದಿ ಜನಾಂಗದ ವಿದ್ಯಾರ್ಥಿಗಳು

ಸಿದ್ದಿ ಜನಾಂಗದ ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿದ್ದಾರೆ. ಕ್ರೀಡೆಯಲ್ಲೂ ಹೆಚ್ಚು ಆಸಕ್ತಿ ಇದೆ. ಸೂಕ್ತ ತರಬೇತಿಯ ಅವಶ್ಯಕತೆ ಇದೆ. ಕಬ್ಬಡ್ಡಿ, ಬಾಕ್ಸಿಂಗ್, ರನ್ನಿಂಗ್ ಹಾಗೂ ಬಾಕ್ಸಿಂಗ್‌ನಲ್ಲಿ ಈ ವಿದ್ಯಾರ್ಥಿಗಳು ಹೆಚ್ಚು ಸಮರ್ಥರಿದ್ದಾರೆ. ಹೀಗಾಗಿ ಈ ನಾಲ್ಕೂ ಕ್ರೀಡೆಗೆ ಸಂಬಂಧಿಸಿದಂತೆ ಸೂಕ್ತ ತರಬೇತಿ ನೀಡಲು ಸಚಿವರು ಸೂಚನೆ ನೀಡಿದರು. ಜಯನಗರ ಕ್ರೀಡಾ ವಸತಿ ಶಾಲೆ ಸೇರಿದಂತೆ ವಿವಿಧ ಕ್ರೀಡಾ ವಸತಿ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾಭ್ಯಾಸಕ್ಕೂ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೇಶಕ್ಕಾಗಿ ಬಂಗಾರದ ಪದಕೆ ಗೆಲ್ತೇವೆ!

ಸಚಿವ ಡಾ. ನಾರಾಯಣಗೌಡ ಅವರು ಎಲ್ಲ ವಿದ್ಯಾರ್ಥಿಗಳ ಜೊತೆ ನೇರವಾಗಿ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ನಾರಾಯಣಗೌಡ ಅವರೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು, ಕ್ರೀಡೆಯಲ್ಲಿ ತಮಗೆ ತುಂಬಾ ಆಸಕ್ತಿ ಇದೆ. ಜೊತೆಗೆ ಈಗ ಸರ್ಕಾರ ಉತ್ತಮ ಅವಕಾಶ ನೀಡಿದೆ. ಹೆಚ್ಚಿನ ತರಬೇತಿ ಪಡೆದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಗಾರದ ಪದಕೆ ಗೆದ್ದು ದೇಶದ ಕೀರ್ತಿ ಹೆಚ್ಚಿಸುತ್ತೇವೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಅವರಿಗೆ ಮತ್ತಷ್ಟು ಆತ್ಮವಿಶ್ವಾಸ ತುಂಬಿದ ಡಾ. ನಾರಾಯಣಗೌಡ ಅವರು, "ಕ್ರೀಡಾ ಇಲಾಖೆ ಎಲ್ಲ ರೀತಿಯ ನೆರವು ನೀಡುತ್ತದೆ. ಏಕಾಗ್ರತೆಯಿಂದ ಅಭ್ಯಾಸ ಮಾಡಬೇಕು. ಉತ್ತಮ ತರಬೇತುದಾರರು, ಗುಣಮಟ್ಟದ ಕ್ರೀಡಾ ಸೌಕರ್ಯ ಎಲ್ಲವನ್ನೂ ನೀಡುತ್ತೇವೆ" ಎಂದು ಭರವಸೆ ನೀಡಿದರು.

ಗ್ರಾಮೀಣ ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ

ಗ್ರಾಮೀಣ ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ

ಕೇಂದ್ರ ಸರ್ಕಾರ ಕ್ರೀಡೆಗೆ ಎಲ್ಲ ರೀತಿಯ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ಸಹ ವಿವಿಧ ಯೋಜನೆ ಘೋಷಿಸಿದೆ. ಕ್ರೀಡೆಗೆ ಸಾಕಷ್ಟು ನೆರವನ್ನೂ ನೀಡುತ್ತಿದೆ. ಇದೇ ಕಾರಣಕ್ಕಾಗಿ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಸಲಾಗಿದೆ. ಆಯ್ಕೆಯಾಗಿರುವ ಕ್ರೀಡಾ ವಿದ್ಯಾರ್ಥಿಗಳು ಆಸಕ್ತಿಯಿಂದ ತರಬೇತಿ ಪಡೆಯಬೇಕು. ಅಧಿಕಾರಿಗಳು ಸಹ ಸರ್ಕಾರದ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಸಚಿವ ನಾರಾಯಣಗೌಡ ಹೇಳಿದರು.

English summary
State Sports Department recognizes 24 sporting talents of Siddi Community Youths. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X