ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಗೆ ಸ್ಟೀವ್ ಸ್ಮಿತ್ ನಾಯಕ

ಪ್ಯಾಟ್ ಕಮಿನ್ಸ್ ಲಭ್ಯವಿಲ್ಲದ ಕಾರಣ ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

ಬೆಂಗಳೂರು, ಮಾರ್ಚ್ 14; ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. 4 ಪಂದ್ಯದ ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಎರಡೂ ತಂಡಗಳು ಮಾರ್ಚ್ 17ರಿಂದ ಆರಂಭವಾಗುವ ಏಕದಿನ ಸರಣಿಗಾಗಿ ತಯಾರಿ ಆರಂಭಿಸಿವೆ.

ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ. ಏಕದಿನ ತಂಡಕ್ಕೆ ಪ್ಯಾಟ್ ಕಮಿನ್ಸ್ ನಾಯಕ. ಆದರೆ ಅವರ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ನೇತೃತ್ವದಲ್ಲಿ ತಂಡ ಮೈದಾನಕ್ಕೆ ಇಳಿಯಲಿದೆ. ತಾಯಿನ ನಿಧನದ ಕಾರಣ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳಿದ್ದು, ಏಕದಿನ ಪಂದ್ಯಗಳಿಗೆ ಲಭ್ಯವಿಲ್ಲ.

Steve Smith Captain For Australian Team For ODI Series Against India

ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಮಾರ್ಚ್ 17ರಂದು ನಡೆಯಲಿದೆ. ಮುಂಬೈ, ವಿಶಾಖಪಟ್ಟಣಂ ಮತ್ತು ಚೆನ್ನೈನಲ್ಲಿ ಪಂದ್ಯಗಳು ನಡೆಯಲಿವೆ. ಏಕದಿನ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ವೈಯಕ್ತಿಕ ಕಾರಣದಿಂದ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯವನ್ನು ಆಡುತ್ತಿಲ್ಲ.

ವಿಶಾಖಪಟ್ಟಣಂನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ತಂಡ ಸೇರಿಕೊಳ್ಳಲಿದ್ದಾರೆ. ಭಾರತ ಏಕದಿನ ತಂಡದಲ್ಲಿ ಶ್ರೇಯಸ್ ಅಯ್ಯರ್‌ಗೆ ಸ್ಥಾನ ನೀಡಲಾಗಿದೆ. ಆದರೆ ಅಹಮದಾಬಾದ್ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಅವರ ಬದಲಿಗೆ ಮತ್ತೊಬ್ಬರಿಗೆ ಅವಕಾಶ ಸಿಗುವ ನಿರೀಕ್ಷೆ ಇದೆ, ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Steve Smith Captain For Australian Team For ODI Series Against India

ಏಕದಿನ ಸರಣಿ ವೇಳಾಪಟ್ಟಿ

* ಮಾರ್ಚ್ 17 ಮೊದಲ ಪಂದ್ಯ. ವಾಂಖಡೆ ಸ್ಟೇಡಿಯಂ, ಮುಂಬೈ

* ಮಾರ್ಚ್ 19 ಎರಡನೇ ಪಂದ್ಯ. ವೈಎಸ್ಆರ್ ಸ್ಟೇಡಿಯಂ, ವಿಶಾಖಪಟ್ಟಣಂ

* ಮಾರ್ಚ್ 22 ಮೊರನೇ ಪಂದ್ಯ. ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಭಾರತ ತಂಡ; ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ಕೆಎಲ್‌ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ಆಸ್ಟ್ರೇಲಿಯಾ ತಂಡ; ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+