India VS Pakistan: ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಬಗ್ಗೆ ಸುನೀಲ್ ಗವಾಸ್ಕರ್ ಮಹತ್ವದ ಅಪ್ಡೇಟ್
India VS Pakistan: ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ ಸತತವಾಗಿ ಸೋಲುಣ್ಣುವ ಮೂಲಕ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದಿದೆ. ಈ ರೀತಿಯ ಐಸಿಸಿ ಸರಣಿಗಳಲ್ಲಿ ಮಾತ್ರ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆಯೇ ಹೊರತು ಎರಡು ದೇಶಗಳ ಮಧ್ಯ ಸರಣಿ ನಡೆದು ತುಂಬಾ ವರ್ಷಗಳು ಕಳೆದಿವೆ. ಇದೀಗ ಈ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸರಣಿ ಬಗ್ಗೆ ಸುನೀಲ್ ಗವಾಸ್ಕರ್ ಅವರು ಮಹತ್ವದ ಅಪ್ಡೇಟ್‌ವೊಂದನ್ನು ಹೊರಹಾಕಿದ್ದಾರೆ.
ಇತ್ತೀಚೆಗಷ್ಟೇ ಭಾರತ-ಪಾಕಿಸ್ತಾನ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಪಾಕ್ ತಂಡ ಭಾರತದ ವಿರುದ್ಧ ಹೀನಾಯವಾಗಿ ಸೋತು ಸುಣ್ಣವಾಗಿತ್ತು. ಈ ರೀತಿ ಐಸಿಸಿ ಸರಣಿಗಳಲ್ಲಿ ಮಾತ್ರ ಭಾರತ ಹಾಗೂ ಪಾಕ್ ಮುಖಾಮುಖಿಯಾಗುತ್ತಲಿಯೆವೇ ಹೊರತು ಎರಡೂ ತಂಡಗಳ ನಡುವೆ ಸರಣಿಗಳು ನಡೆಯದೇ ದಶಕ ಕಳೆದಿದೆ.

2012-13ರಲ್ಲಿ ಭಾರತ-ಪಾಕಿಸ್ತಾನ ನಡವೆ ಸರಣಿ ಪಂದ್ಯಗಳು ನಡೆದಿದ್ದವು. ನಂತರ ಎರಡೂ ದೇಶಗಳ ನಡುವೆ ಈ ರೀತಿಯ ಯಾವುದೇ ಸರಣಿಗಳು ನಡೆದಿಲ್ಲ. ಈ ಕುರಿತು ಇತ್ತೀಚೆಗಷ್ಟೇ ಟಿವಿ ಚಾನೆಲ್‌ವೊಂದಲ್ಲಿ ಮಾತನಾಡಿರುವ ಸುನೀಲ್ ಗವಾಸ್ಕರ್ ಅವರು, ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣ ನಡೆಯಬೇಕೆಂದರೆ, ಎರಡೂ ರಾಷ್ಟ್ರಗಳ ಸರ್ಕಾರಗಳು ಗಡಿಯಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಿಕೊಳ್ಳಬೇಕು. ಆಗ ಮಾತ್ರ ದ್ವಿಪಕ್ಷೀಯ ಸರಣಿ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
"ದೇಶದ ಗಡಿಯಲ್ಲಿ ಶಾಂತಿ ಇಲ್ಲದೆ ಭಾರತ ಹಾಗೂ ಪಾಕ್ ಸರಣಿ ಪಂದ್ಯವನ್ನಾಡಲು ಹೇಗೆ ಸಾಧ್ಯ? ಒಂದು ವೇಳೆ ಗಡಿಯಲ್ಲಿ ಶಾಂತಿ ನೆಲೆಸಿದರೆ ಭಾರತ ಹಾಗೂ ಪಾಕಿಸ್ತಾನ ಸರ್ಕಾರ ಈ ಬಗ್ಗೆ ಚರ್ಚೆ ಮಾಡಬಹುದು. ಗಡಿಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಈಗ ಆ ಬಗ್ಗೆ ಚರ್ಚೆ ಮಾಡೋಣ ಎನ್ನುವ ಪರಿಸ್ಥಿತಿ ಬರಬೇಕು. ಶಾಂತಿ ನೆಲೆಸುವವರೆಗೂ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆಯುವುದಿಲ್ಲ," ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ.
ಇನ್ನು ಈ ವರ್ಷ ಅಂದರೆ 2024ರಲ್ಲು ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ತುಂಬಾ ಪಂದ್ಯಗಳು ನಡೆಯಲಿವೆ. 2025ರ ಏಷ್ಯಾ ಕಪ್‌ನಲ್ಲಿ ಭಾರತ ಹಾಗೂ ಪಾಕ್ ಮುಖಾಮುಖಿಯಾಗಲಿವೆ. ಸೆಪ್ಟೆಂಬರ್‌ನಲ್ಲಿ ಈ ಪಂದ್ಯ ನಡೆಯಲಿದ್ದು, ಎರಡೂ ತಂಡಗಳು ಒಂದೇ ಗ್ರೂಪ್‌ನಲ್ಲಿ ಕಾಣಿಸಿಕೊಳ್ಳಲಿವೆ. ಈಗಾಗಲೇ ಪಾಕಿಸ್ತಾನ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದೆ.
ಪಾಕಿಸ್ತಾನ ತಂಡವು ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮೊದಲು ನ್ಯೂಜಿಲೆಂಡ್, ಬಳಿಕ ಭಾರತದ ವಿರುದ್ಧ ಹೀನಾಯ ಸೋಲುಂಡು ಟೂರ್ನಿಯಿಂದ ಹೊರಬಿದ್ದಿದೆ. ಇದು ಪಿಸಿಬಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದ್ದು, ಇದರಿಂದಾಗಿ ಪಾಕ್ ತಂಡದ ಬ್ರ್ಯಾಂಡ್ ಮೌಲ್ಯ ಉಳಿಸಿಕೊಳ್ಳುವುದೇ ಕಷ್ಟಕರ ಆದಂತಾಗಿದೆ. ಅದರಲ್ಲೂ ಭಾರತದ ವಿರುದ್ಧ ಪಾಕ್ ಹೀನಾಯವಾಗಿ ಸೋತು ಸುಣ್ಣವಾಗಿದೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಗ್ರೂಪ್ ಎನ 5ನೇ ಪಂದ್ಯದಲ್ಲಿ ಪಾಕಿಸ್ತಾನವ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಟಾಸ್ ಗೆದ್ದ ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗನ್ನು ಕಳೆದುಕೊಂಡು 241 ರನ್‌ಗಳನ್ನಷ್ಟೇ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 42.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 244 ರನ್‌ಗಳಿಸಿ ಪಂದ್ಯ ತನ್ನದಾಗಿಸಿಕೊಂಡಿತು. ವಿರಾಟ್ ಕೊಹ್ಲಿ ಅಮೋಘ ಶತಕದ ತಂಡಡ ಗೆಲುವಿಗೆ ಪ್ರಮುಖ ಪಾತ್ರವಾಯಿತು. ಯಾಕೆಂದರೆ ಎರಡನೇ ಕ್ರಮಾಂಕದಲ್ಲಿ ಬಂದು ಕೊನೆವರೆಗೂ ಹೋರಾಡಿ ತಂಡನ್ನು ಗೆಲುವಿನ ದಡ ಮುಟ್ಟಿಸಿದರು ಅಂದರೆ ತಪ್ಪಾಗಲಾರದು. ಅಲ್ಲದೆ, ಶ್ರೇಯಸ್ ಅಯ್ಯರ್, ಬೌಲರ್‌ಗಳ ಪಾತ್ರವೂ ಕೂಡ ಗೆಲುವಿದೆ ಅಷ್ಟೇ ಪ್ರಮುಖವಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications