Suryakumar Yadav: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೂರ್ಯಕುಮಾರ್ ಯಾದವ್ ಭೇಟಿ

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದರು. ಧಾರ್ಮಿಕ ಕೆಲಸಗಳು ಮುಗಿದ ಬಳಿಕ ಸೂರ್ಯಕುಮಾರ್ ಯಾದವ್ ದಂಪತಿದೆ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಮಂಗಳೂರು ಮೂಲದವರು, ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಜೊತೆ ಕಾಪು ಮಾರಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದರು. ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅರ್ಚಕರು ನೀವು ಮುಂದಿನ ಬಾರಿ ಬರುವ ವೇಳೆಗೆ ಭಾರತ ತಂಡದ ನಾಯಕರಾಗಿರುತ್ತೀರಾ ಎಂದು ಭವಿಷ್ಯ ನುಡಿದಿದ್ದರು. ಅದಾದ ಕೆಲವೇ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು.

Suryakumar yadav visits Kukke Subrahmanya Temple with family

ಸೂರ್ಯ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಇತ್ತೀಚೆಗೆ ಭಾರತ ತಂಡ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿ ಗೆದ್ದಿತ್ತು. ಸರಣಿ ಗೆಲುವಿನ ಬಳಿಕ ಸೂರ್ಯಕುಮಾರ್ ಯಾದವ್ ಪತ್ನಿ ಜೊತೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸಾಂಪ್ರದಾಯಿಕ ಉಡುಗೆಯಲ್ಲಿ ಸೂರ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ ಬಂದ ಸೂರ್ಯಕುಮಾರ್ ಯಾದವ್ ಶ್ರದ್ಧಾ ಭಕ್ತಿಯಿಂದ ದೇವರ ದರ್ಶನ ಪಡೆದರು. ದೇವಸ್ಥಾನದಲ್ಲಿದ್ದ ನೂರಾರು ಮಂದಿ ಭಕ್ತರು ಸೂರ್ಯಕುಮಾರ್ ಯಾದವ್‌ರ ಫೋಟೊ ತೆಗೆದುಕೊಳ್ಳಲು ಮುಗಿಬಿದ್ದರು.

ಟಿ20 ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಅದ್ಬುತ ಕ್ಯಾಚ್ ಹಿಡಿಯುವ ಮೂಲಕ ಸೂರ್ಯಕುಮಾರ್ ಯಾದವ್‌ ಭಾರತ ಕ್ರಿಕೆಟ್‌ ಅಭಿಮಾನಿಗಳ ಪಾಲಿನ ಸೂಪರ್ ಮ್ಯಾನ್ ಆಗಿದ್ದಾರೆ. ಸೋಲುವ ಹಂತದಲ್ಲಿದ್ದ ಪಂದ್ಯವನ್ನು ಭಾರತ ಅದ್ಬುತ ಬೌಲಿಂಗ್, ಫೀಲ್ಡಿಂಗ್ ಪ್ರದರ್ಶನ ನೀಡುವ ಮೂಲಕ ಗೆದ್ದುಕೊಂಡಿತ್ತು.

ಮುಂದಿನ ಸರಣಿ ಇಂಗ್ಲೆಂಡ್ ವಿರುದ್ಧ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದ ಭಾರತ ತಂಡಕ್ಕೆ ಸುದೀರ್ಘ ವಿಶ್ರಾಂತಿ ಸಿಗಲಿದೆ. ಭಾರತ ಮುಂದಿನ ಟಿ20 ಸರಣಿಯನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ. ಜನವರಿ 22ರಂದು ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ. 5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+