T20 World Cup Final: ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ; ಟಾಸ್ ಗೆದ್ದ ರೋಹಿತ್ ಹೇಳಿದ್ದೇನು?
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಬಾರಿಗೆ ಐಸಿಸಿ ಕಪ್ ಗೆಲ್ಲಲು ದಕ್ಷಿಣ ಆಫ್ರಿಕಾ ಸಜ್ಜಾಗಿದ್ದಾರೆ, ಎರಡನೇ ಟಿ20 ವಿಶ್ವಕಪ್ ಗೆಲ್ಲಲು ರೋಹಿತ್ ಪಡೆ ಪಣ ತೊಟ್ಟಿದೆ.
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಈ ಫೈನಲ್ ಪಂದ್ಯ ನಡೆಯುತ್ತಿದೆ. ಟಾಸ್ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ನಾವು ಮೊದಲು ಬ್ಯಾಟಿಂಗ್ ಮಾಡಲಿದ್ದೇವೆ, ಉತ್ತಮ ಪಿಚ್ ಎನಿಸುತ್ತಿದೆ. ಇಲ್ಲಿ ಈ ಮೊದಲು ಪಂದ್ಯವನ್ನು ಆಡಿದ್ದೇವೆ, ಇದೊಂದು ದೊಡ್ಡ ಸಂದರ್ಭ, ಸಮಾಧಾನದಿಂದ ಇರುವುದು ಮುಖ್ಯವಾಗುತ್ತದೆ. ದಕ್ಷಿಣ ಆಫ್ರಿಕಾ ಉತ್ತಮ ತಂಡವಾಗಿದ್ದು, ಪಂದ್ಯಾವಳಿಯಲ್ಲಿ ಅವರು ಉತ್ತಮವಾಗಿ ಆಡಿದ್ದಾರೆ, ನಮ್ಮ ತಂಡದ ಎಲ್ಲರಿಗೂ ಅವರ ಜವಾಬ್ದಾರಿಯ ಅರಿವು ಇದೆ ಎಂದು ಹೇಳಿದರು.

ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಮ್ ಮಾತನಾಡಿ, ನಾವು ಟಾಸ್ ಗೆದ್ದಿದ್ದರೂ ಮೊದಲು ಬ್ಯಾಟಿಂಗ್ ಮಾಡುತ್ತಿದ್ದೆವು. ಪಿಚ್ ಬ್ಯಾಟಿಂಗ್ ಮಾಡಲು ಉತ್ತಮವಾಗಿ ಎನಿಸುತ್ತದೆ. ಆದರೂ ನಾವು ಉತ್ತಮವಾಗಿ ಬೌಲಿಂಗ್ ಮಾಡುವ ವಿಶ್ವಾಸವಿದೆ. ಕೆಲವೊಮ್ಮೆ ಕಷ್ಟದ ಪರಿಸ್ಥಿತಿಯಲ್ಲೂ ಪಂದ್ಯ ಗೆದ್ದಿದ್ದೇವೆ, ನಮ್ಮ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಹೇಳಿದರು.
ಎರಡೂ ತಂಡಗಳು ಫೈನಲ್‌ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಗೆದ್ದ ತಂಡವನ್ನೇ ಕಣಕ್ಕಿಳಿಸಿವೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನೊಕಿಯಾ, ತಬ್ರೈಜ್ ಶಮ್ಸಿ












Click it and Unblock the Notifications