T20 World Cup Final: ಉತ್ತುಂಗದಲ್ಲಿ ಟಿ20ಗೆ ಅಂತ್ಯ ಹಾಡುವವರೇ ರೋಹಿಟ್, ಕೊಹ್ಲಿ?
ಟಿ20 ವಿಶ್ವಕಪ್ ಫೈನಲ್ ಪಂದ್ಯ ಶನಿವಾರ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯ ಟೀಮ್ ಇಂಡಿಯಾದ ಇಬ್ಬರು ಸೂಪರ್ ಸ್ಟಾರ್ ಆಟಗಾರರಿಗೆ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಕನಸು ಟೀಮ್ ಇಂಡಿಯಾ ಸ್ಟಾರ್ ಆಟಗಾರರಿಗೆ ಇದೆ. ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿಕೊಂಡಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಅಜೇಯ ಓಟವನ್ನು ಮುನ್ನಡೆಸಿರುವ ಎರಡು ತಂಡಗಳು ಈಗ ಫೈನಲ್‌ನಲ್ಲಿ ಮುಖಾಮುಖಿ ಆಗಲಿವೆ. ಲೀಗ್ ಹಂತದಿಂದ ಹಿಡಿದು, ಸೂಪರ್ 8 ಹಂತದ ವರೆಗೂ ಒಂದೇ ಒಂದು ಪಂದ್ಯವನ್ನು ಗೆಲ್ಲದ ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಈ ಪ್ರಶಸ್ತಿ ಉಭಯ ತಂಡಗಳಿಗೂ ಮಹತ್ವದಾಗಿದೆ.

ಉಭಯ ತಂಡಗಳಿಗೂ ಅವಕಾಶ
ದಕ್ಷಿಣ ಆಫ್ರಿಕಾ ತನ್ನ ಮೇಲೆ ಇರುವ ಚೋಕರ್ಸ್ ಪಟ್ಟವನ್ನು ಕಳಚಿಕೊಳ್ಳಲು ಇದು ಉತ್ತಮ ಅವಕಾಶ. ಈ ಅವಕಾಶವನ್ನು ಬಳಸಿಕೊಂಡು ವಿಶ್ವ ಚಾಂಪಿಯನ್ ಆಗುವ ಕನಸು ದಕ್ಷಿಣ ಆಫ್ರಿಕಾ ತಂಡಕ್ಕೆ ಇದೆ. ಇನ್ನು ಟೀಮ್ ಇಂಡಿಯಾದ ಇಬ್ಬರು ಹಿರಿಯ ಆಟಗಾರರಿಗೂ ಇದು ಕೊನೆಯ ಅವಕಾಶ ಈ ಅವಕಾಶವನ್ನು ಬಳಸಿಕೊಂಡು ತಂಡಕ್ಕೆ ವಿಶ್ವಕಪ್ ಮುಕುಟು ತೊಡಿಸುವ ಇರಾದೆಯನ್ನು ಈ ಸ್ಟಾರ್ ಆಟಗಾರರು ಹೊಂದಿದ್ದಾರೆ.
ಲಾಸ್ಟ್ ಚಾನ್ಸ್
ಟಿ 20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ವಿರಾಟ್ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ರೋಹಿತ್ ಶರ್ಮಾ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ತಂಡಕ್ಕೆ ಆಧಾರವಾಗಿದ್ದಾರೆ. ಆದರೆ ವಿರಾಟ್ ಬ್ಯಾಟ್‌ನಿಂದ ರನ್ ಬರುತ್ತಿಲ್ಲ ಎಂಬುದು ನಿಜಕ್ಕೂ ಬೇಸರ ತರಿಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ನಡೆದ ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಬ್ಯಾಟ್ ಈ ಬಾರಿ ಮೌನಕ್ಕೆ ಶರಣಾಗಿದೆ. ಫೈನಲ್ ಪಂದ್ಯವನ್ನು ಸ್ಮರಣೀಯವಾಗಿಸುವ ಇರಾದೆ ಇಬ್ಬರೂ ಆಟಗಾರರಿಗೆ ಇದೆ.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ವಕಪ್ ವಿಜೇತ ತಂಡದ ಸದಸ್ಯರು ಎಂಬುದು ಎಲ್ಲರಿಗೂ ತಿಳಿಸಿದೆ. 2007ರಲ್ಲಿ ಟೀಮ್ ಇಂಡಿಯಾ ಕಪ್ ಗೆದ್ದಾಗ ರೋಹಿತ್ ಶರ್ಮಾ ತಂಡದಲ್ಲಿದ್ದರು. ವಿರಾಟ್ ಕೊಹ್ಲಿ 2011ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ್ದರು. ಅಲ್ಲದೆ ತಂಡ ಗೆಲುವು ಸಾಧಿಸಿದ್ದಾಗ ತಂಡದ ಭಾಗವಾಗಿದ್ದರು. ಈಗ ಇಬ್ಬರೂ ಆಟಗಾರರು ತಮ್ಮ ಟಿ20 ಕರಿಯರ್‌ನ ಸಂಧ್ಯಾಕಾಲದಲ್ಲಿದ್ದಾರೆ. ಹೀಗಾಗಿ ಇಬ್ಬರೂ ಕೂಡಿ ಈ ಬಾರಿಯ ವಿಶ್ವಕಪ್ ಗೆಲ್ಲುವ ಆಸೆಯನ್ನು ಹೊಂದಿದ್ದಾರೆ.
ಫೈನಲ್ ಕಾಟ
ಟೀಮ್ ಇಂಡಿಯಾಕ್ಕೆ ಫೈನಲ್ ಬಹುದಿನಗಳಿಂದ ಕಾಟ ನೀಡುತ್ತಿದೆ. 2021ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿತ್ತು. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲೂ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. 2023 ಏಕದಿನ ವಿಶ್ವಕಪ್‌ನಲ್ಲೂ ಭಾರತ, ತವರಿನಲ್ಲಿ ಆಸೀಸ್ ವಿರುದ್ಧ ನಿರಾಸೆ ಕಂಡಿತ್ತು. ಈ ಎಲ್ಲ ನೋವನ್ನು ನೆನಪು ಹಾರಲು, ಟೀಮ್ ಇಂಡಿಯಾಕ್ಕೆ ಈ ಬಾರಿ ಉತ್ತಮ ವೇದಿಕೆ ಆಗಿದೆ.

ಕೋಚ್‌ಗೂ ಕೊನೆಯ ಚಾನ್ಸ್
ಟೀಮ್ ಇಂಡಿಯಾ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರ ಇಂದಿಗೆ ಮುಕ್ತಾಯವಾಗಲಿದೆ. ಅವರು ಸಹ ವಿಶ್ವ ಚಿಜೇತ ತಂಡವನ್ನು ಮುನ್ನಡೆಸಿದ ಕೀರ್ತಿಯನ್ನು ಹೊಂದುವ ಆಶಯ ಹೊಂದಿದ್ದಾರೆ. ಈಗಾಗಲೇ ಅಂಡರ್ 19 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿರುವ ರಾಹುಲ್ ದ್ರಾವಿಡ್ ಹಿರಿಯರ ತಂಡದ ಪರ ಕಪ್ ಗೆಲ್ಲುವ ಮಹದಾಸೆ ಹೊಂದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications