USA vs Canada: ಟಿ20 ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದ ಯುಎಸ್‌ಎ; ಕೆನಡಾ ವಿರುದ್ಧ ಭರ್ಜರಿ ಗೆಲುವು
ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗಿದ್ದು, ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಯುಎಸ್‌ಎ ತಂಡ ಕೆನಡಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಯುಎಸ್‌ಎ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕೆನಡಾ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು.

ನವನೀತ್ ಧಲಿವಾಲ್ 44 ಎಸೆತಗಳಲ್ಲಿ 61 ರನ್ ಗಳಿಸಿ ತಂಡಕ್ಕೆ ನೆರವಾದರು. ನಿಕೋಲಸ್ ಕಿರ್ಟನ್ 31 ಎಸೆತಗಳಲ್ಲಿ 51 ರನ್ ಗಳಿಸಿದರೆ, ಶ್ರೇಯಸ್ ಮೊವ್ವ ಕೇವಲ 16 ಎಸೆತಗಳಲ್ಲಿ 32 ರನ್ ಗಳಿಸಿದರು.
ಆರೊನ್ ಜೋನ್ಸ್ ಭರ್ಜರಿ ಬ್ಯಾಟಿಂಗ್
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಯುಎಸ್‌ಎ ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು, ಸ್ಟೀವನ್ ಟೇಲರ್ ರನ್ ಗಳಿಸುವ ಮುನ್ನವೇ ಔಟಾದರು. ನಾಯಕ ಮೋನಂಕ್ ಪಟೇಲ್ 16 ರನ್ ಗಳಿಸಿ ಔಟಾದರು.
ಬಳಿಕ ಜೊತೆಯಾದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಕೆನಡಾ ತಂಡದ ಬೌಲರ್ ಗಳನ್ನು ದಂಡಿಸಿದರು. ಈ ಜೋಡಿ ಮೂರನೇ ವಿಕೆಟ್‌ಗೆ 131 ರನ್‌ಗಳನ್ನು ಕಲೆಹಾಕಿತು. ಆಂಡ್ರಿಸ್ ಗೌಸ್ 46 ಎಸೆತಗಳಲ್ಲಿ 65 ರನ್ ಗಳಿಸಿದರೆ, ಆರೊನ್ ಜೋನ್ಸ್ 40 ಎಸೆತಗಳಲ್ಲಿ ಅಜೇಯ 94 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇವರಿಬ್ಬರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಯುಎಸ್‌ಎ 17.4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 197 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.












Click it and Unblock the Notifications